AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಬಿಸಿಲಲ್ಲೂ ನಳನಳಿಸಿದ ‘ದಿಲ್ ಖುಷ್’: ವಿಶಿಷ್ಟ ತಳಿಯ ದ್ರಾಕ್ಷಿಗೆ ಭಾರೀ ಡಿಮ್ಯಾಂಡ್; ರೈತರು ಖುಷಿಯೋ ಖುಷಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 'ದಿಲ್ ಖುಷ್' ದ್ರಾಕ್ಷಿ ತಳಿಗೆ ಭಾರೀ ಬೇಡಿಕೆ ಬಂದಿದೆ. ಐದು ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದ್ದು, ಮಹಾರಾಷ್ಟ್ರ ಮತ್ತು ಬಾಂಗ್ಲಾದೇಶದಿಂದಲೂ ವರ್ತಕರು ನೇರವಾಗಿ ತೋಟಗಳಿಗೆ ಬಂದು ಖರೀದಿಸುತ್ತಿದ್ದಾರೆ. ಇದು ರೈತರಿಗೆ ಉತ್ತಮ ಆದಾಯ ತಂದುಕೊಟ್ಟಿದ್ದು, ಖುಷಿ ಹೆಚ್ಚಿಸಿದೆ. ಫೋಟೋಸ್​ ನೋಡಿ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:May 03, 2026 | 8:10 PM

Share
ಚಿಕ್ಕಬಳ್ಳಾಪುರ ಜಿಲ್ಲೆಯೂ ಹಣ್ಣು, ತರಕಾರಿ ಮತ್ತು ದ್ರಾಕ್ಷಿ ಬೆಳೆಗೆ ರಾಜ್ಯದಲ್ಲೇ ಹೆಸರುವಾಸಿಯಾಗಿದೆ. ಈ ಬಾರಿ ಜಿಲ್ಲೆಯಾದ್ಯಂತ ಬರೋಬ್ಬರಿ 5,000 ಹೆಕ್ಟೇರ್ ಪ್ರದೇಶದಲ್ಲಿ ವೈವಿಧ್ಯಮಯ ದ್ರಾಕ್ಷಿ ಬೆಳೆಯಲಾಗುತ್ತಿದೆ. ದಿಲ್ ಖುಷ್​ ಎಂಬ  ವಿಶೇಷ ತಳಿಗೆ ಸದ್ಯ ಭಾರೀ ಬೇಡಿಕೆ ಬಂದಿದೆ. ಹಾಗಾಗಿ ರೈತರು ಮಂದಹಾಸ ಬೀರಿದ್ದಾರೆ.

1 / 6
ರಣ ಬಿಸಿಲಿನ ನಡುವೆಯೂ, ವಿಶೇಷವಾಗಿ 'ದಿಲ್ ಖುಷ್' ತಳಿಯ ದ್ರಾಕ್ಷಿಗೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಬಂದಿದೆ. ಸದ್ಯ ಈ ವಿಶಿಷ್ಟ ತಳಿಯ ದ್ರಾಕ್ಷಿಯು ಮಾರುಕಟ್ಟೆಯಲ್ಲಿ ಹೆಚ್ಚು ಆಕರ್ಷಣೆ ಪಡೆದುಕೊಂಡಿದೆ.

2 / 6
ದ್ರಾಕ್ಷಿ ಬೆಳೆಗಾರರಿಗೆ ಈ ವರ್ಷ ಉತ್ತಮ ಬೆಲೆ ಸಿಗುತ್ತಿದೆ. ವರ್ತಕರು ಸ್ವತಃ ತೋಟಗಳಿಗೆ ಬಂದು, ರೈತರಿಗೆ ಪ್ರತಿ ಕೆ.ಜಿ ದ್ರಾಕ್ಷಿಗೆ 50 ರೂಪಾಯಿಯಂತೆ ನೀಡಿ ನೇರವಾಗಿ ಖರೀದಿಸುತ್ತಿದ್ದಾರೆ.

3 / 6
ಇನ್ನು ಮಹಾರಾಷ್ಟ್ರದಲ್ಲಿ ದ್ರಾಕ್ಷಿಯ ಇಳುವರಿ ಕಡಿಮೆಯಾಗಿರುವುದರಿಂದ, ಅಲ್ಲಿನ ದೊಡ್ಡ ದೊಡ್ಡ ವರ್ತಕರು ಇದೀಗ ಚಿಕ್ಕಬಳ್ಳಾಪುರದ ರೈತರತ್ತ ಮುಖ ಮಾಡಿದ್ದಾರೆ. ಇದು ಸ್ಥಳೀಯ ರೈತರಿಗೆ ವರದಾನವಾಗಿದ್ದು, ಜಣ ಜಣ ಕಾಂಚಣ ಎಣಿಸುತ್ತಿದ್ದಾರೆ.

4 / 6
ಚಿಕ್ಕಬಳ್ಳಾಪುರದ ಈ ದ್ರಾಕ್ಷಿಗೆ ಬಾಂಗ್ಲಾದೇಶ ಸೇರಿದಂತೆ ನೆರೆಯ ದೇಶಗಳಲ್ಲಿ ಭಾರೀ ಬೇಡಿಕೆ ಇದೆ. ಹೀಗಾಗಿ ವ್ಯಾಪಾರಿಗಳು ರೈತರನ್ನು ಹುಡುಕಿಕೊಂಡು ಬಂದು ಮುಂಗಡ ಹಣ ನೀಡಿ ತೋಟದಲ್ಲೇ ದ್ರಾಕ್ಷಿಯನ್ನು ಖರೀದಿಸುತ್ತಿದ್ದಾರೆ.

5 / 6
ದ್ರಾಕ್ಷಿ ಬೆಳೆಗಾರರಾದ ವೆಂಕಟರೆಡ್ಡಿ ಮತ್ತು ಚಿಕ್ಕನಾಗವಳ್ಳಿ ಗ್ರಾಮದ ಕೊಂಡಪ್ಪನವರಂತಹ ಅನೇಕ ರೈತರು, ಈ ವರ್ಷ ತಮ್ಮ ಬೆಳೆಗೆ ಸಿಕ್ಕಿರುವ ಉತ್ತಮ ಬೆಲೆ ಮತ್ತು ಬೇಡಿಕೆಯನ್ನು ಕಂಡು ಸಂತಸಗೊಂಡಿದ್ದಾರೆ.

6 / 6

Published On - 8:07 pm, Sun, 3 May 26

Follow Us
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು

Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ

ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ

ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ

ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ

ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ

ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ

ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ

ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ

Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್