ಕರ್ನಾಟಕದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ ನಾಲ್ವರ ದುರ್ಮರಣ
ಇಂದು (ಮೇ 24) ರಾಣೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ (NH 4) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ತಿರುಪತಿಗೆ ತೆರಳುತ್ತಿದ್ದವರು ಮಸಣ ಸೇರಿದ್ದಾರೆ. ಇದರ ಬೆನ್ನಲ್ಲೇ ಚಿಕ್ಕಮಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದುಕೊಂಡು ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
1 / 6
ರಾಣೇಬೆನ್ನೂರು ಬೆನ್ನಲ್ಲೇ ಚಿಕ್ಕಮಗಳೂರು ಜಿಲ್ಲೆಯಲ್ಲೂ ಸಹ ಇಂದು (ಮೇ 24) ಲಾರಿ- ಓಮಿನಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಮೃತ ನಾಲ್ವರು ಒಂದೇ ಕುಟುಂಬದವರು ಎಂದು ತಿಳಿದುಬಂದಿದೆ.
2 / 6
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಭೀಕರ ಅಪಘಾತ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದ್ದು, ಕೂಡಲೇ ಸ್ಥಳಕ್ಕೆ ಬಣಕಲ್ ಠಾಣೆಯ ಪೊಲೀಸರು ದೌಡಾಯಿಸಿ ರಸ್ತೆ ಕ್ಲಿಯರ್ ಮಾಡುತ್ತಿದ್ದಾರೆ.
3 / 6
ಮೃತರು ಚಿತ್ರದುರ್ಗ ಮೂಲದವರಾಗಿದ್ದು, ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಪಡೆದು ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ., ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರಲ್ಲಿ ಮೂವರು ಪುರುಷರು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಇನ್ನು ಮೂವರ ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
4 / 6
ಇನ್ನು ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ ಸೇರಿದ ಲಾರಿಯನ್ನು ಓವರ್ ಟೆಕ್ ಮಾಡಲು ಹೋಗಿ ಓಮಿನಿ ಡಿಕ್ಕಿ ಹೊಡೆದೆ.
5 / 6
ಒಂದೇ ಕುಟುಂಬದ ನಾಲ್ವರಲ್ಲಿ ಮೂವರು ಪುರುಷರು, ಓರ್ವ ಮಹಿಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಡಿಕ್ಕಿ ಹೊಡೆದ ರಭಸಕ್ಕೆ ಓಮಿನಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಗುರುತು ಸಿಗದಂತಾಗಿದೆ.
6 / 6
ಇಂದು ಬೆಳಗ್ಗೆ ರಾಣೇಬೆನ್ನೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಿರುಪತಿಯ ವೆಂಕಟರಮಣ ದರ್ಶನಕ್ಕೆ ಹೋಗುತ್ತಿದ್ದ ನಾಲ್ವರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಇದೀಗ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದುಕೊಂಡು ವಾಪಸ್ ಹಿಂದಿರುಗುವಾಗ ಚಿತ್ರದುರ್ಗದ ಮೂಲದ ನಾಲ್ವರು ದುರಂತ ಅಂತ್ಯ ಕಂಡಿದ್ದಾರೆ.
Published On - 4:35 pm, Fri, 24 May 24