AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಮುತ್ತಿಗೆಪುರ ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನಯಾನ ಭಾಗ್ಯ! ಫ್ಲೈಟ್​ನಲ್ಲಿ ಚಿಣ್ಣರ ಸಂಭ್ರಮ ನೋಡಿ

ಚಿಕ್ಕಮಗಳೂರು, ಜನವರಿ 8: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುತ್ತಿಗೆಪುರದ ಸರ್ಕಾರಿ ಪ್ರಾಥಮಿಕ ಶಾಲೆ, ಖಾಸಗಿ ಶಾಲೆಗಳೂ ಹುಬ್ಬೇರಿಸುವಂಥ ಅಪೂರ್ವ ಕೆಲಸವೊಂದನ್ನು ಮಾಡಿ ಗಮನ ಸೆಳೆದಿದೆ. 5, 6 ಮತ್ತು 7ನೇ ತರಗತಿಯ 32 ವಿದ್ಯಾರ್ಥಿಗಳಿಗೆ ವಿಮಾನ ಪ್ರಯಾಣದ ಅನುಭವ ನೀಡುವ ಮೂಲಕ, ಸರ್ಕಾರಿ ಶಾಲೆಯೊಂದು ಮಕ್ಕಳನ್ನು ಫ್ಲೈಟ್ ಟೂರ್‌ ಕರೆದುಕೊಂಡು ಹೋಗಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Jan 08, 2026 | 12:36 PM

Share
ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರವಾಸ ಕೈಗೊಂಡ ಈ ಮಕ್ಕಳು, ಫ್ಲೈಟ್‌ನಲ್ಲಿ ಪ್ರಯಾಣಿಸುವ ಮೂಲಕ ಜೀವನದಲ್ಲಿ ಮರೆಯಲಾಗದ ಅನುಭವ ಪಡೆದುಕೊಂಡಿದ್ದಾರೆ. ವಿಮಾನದಲ್ಲಿ ಕುಳಿತು ಹಾರಾಟದ ಸಂಭ್ರಮ ಅನುಭವಿಸಿದ ಪುಟ್ಟ ಮಕ್ಕಳ ಮುಖದಲ್ಲಿ ಕಂಡ ಖುಷಿ ನೋಡುವುದೇ ಒಂದು ಹಬ್ಬದಂತಿತ್ತು. ಬೆಂಗಳೂರಿಗೆ ಫ್ಲೈಟ್ ಮೂಲಕ ತೆರಳಿ, ಅಲ್ಲಿಂದ ಬಸ್‌ನಲ್ಲಿ ಹಿಂತಿರುಗುವಂತೆ ಪ್ರವಾಸವನ್ನು ಯೋಜಿಸಲಾಗಿತ್ತು.

1 / 5
ಈ ವಿಶಿಷ್ಟ ಪ್ರವಾಸ ಶಿಕ್ಷಕರು, ಪೋಷಕರು, ದಾನಿಗಳು ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (SDMC) ಅವರ ಸಹಕಾರದಿಂದ ಸಾಧ್ಯವಾಗಿದೆ. ಮಕ್ಕಳಿಗೆ ಪುಸ್ತಕದ ಪಾಠಕ್ಕಷ್ಟೇ ಸೀಮಿತವಲ್ಲದೆ, ಜೀವನ ಪಾಠವನ್ನೂ ಕಲಿಸಬೇಕು ಎಂಬ ಉದ್ದೇಶದಿಂದ ಈ ಪ್ರವಾಸವನ್ನು ಆಯೋಜಿಸಲಾಗಿದೆ ಎಂದು ಶಿಕ್ಷಕರು ತಿಳಿಸಿದ್ದಾರೆ.

2 / 5
ಸರ್ಕಾರಿ ಶಾಲೆಗಳು ಎಂದರೆ ಹಿಂದುಳಿದವೆಂಬ ಧೋರಣೆಗೆ ತುತ್ತು ಬೀಳುವವರಿಗೂ ಈ ಶಾಲೆ ಒಂದು ಮಾದರಿಯಾಗಿದೆ. ‘ಸರ್ಕಾರಿ ಶಾಲೆ ಅಂದ್ರೆ ಸುಮ್ನೇನಾ?’ ಎಂಬ ಪ್ರಶ್ನೆಗೆ ಮುತ್ತಿಗೆಪುರದ ಈ ಶಾಲೆ ತನ್ನ ಕಾರ್ಯದ ಮೂಲಕಲೇ ಗಟ್ಟಿಯಾದ ಉತ್ತರ ಕೊಟ್ಟಿದೆ.

3 / 5
ಈ ಹಿಂದೆ, ಕೊಪ್ಪಳ ಜಿಲ್ಲೆಯ ಬಹದ್ದೂರಬಂಡಿ ಗ್ರಾಮದ ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ ಸ್ವಂತ ಖರ್ಚಿನಲ್ಲಿ 24 ವಿದ್ಯಾರ್ಥಿಗಳನ್ನು ಜಿಂದಾಲ್​​ ಏರ್​​ಪೋರ್ಟ್​​ನಿಂದ ವಿಮಾನದಲ್ಲಿ ಬೆಂಗಳೂರಿಗೆ ಪ್ರವಾಸಕ್ಕೆ ಕರೆದೊಯ್ದು ಸುದ್ದಿಯಾಗಿದ್ದರು. ಶಿಕ್ಷಕರು, ಎಸ್​​ಡಿಎಂಸಿ ಸದಸ್ಯರು, ಬಿಸಿಯೂಟ ಅಡುಗೆ ತಯಾರಕರು ಸೇರಿ ಒಟ್ಟು 40 ಜನರು ವಿಮಾನ ಪ್ರಯಾಣ ಮಾಡಿದ್ದರು.

4 / 5
ಒಟ್ಟಿನಲ್ಲಿ, ಖಾಸಗಿ ಶಾಲೆಯವರಿಗೂ ಅಚ್ಚರಿ ಮೂಡಿಸಿದ ಮುತ್ತಿಗೆಪುರದ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳ ವಿಮಾನ ಪ್ರವಾಸ, ಸರ್ಕಾರಿ ಶಾಲೆಗಳ ಸಾಮರ್ಥ್ಯಕ್ಕೆ ಹೊಸ ಅರ್ಥ ನೀಡಿದೆ. ಕಾಫಿನಾಡಿನ ಕುಗ್ರಾಮದಿಂದ ಹಾರಿದ ಈ ಪುಟ್ಟ ಕನಸುಗಳು, ಮುಂದಿನ ದಿನಗಳಲ್ಲಿ ಇನ್ನಷ್ಟು ಎತ್ತರಕ್ಕೆ ಹಾರಲಿ ಎಂಬುದೇ ಎಲ್ಲರ ಆಶಯ.

5 / 5

Published On - 12:35 pm, Thu, 8 January 26

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ