- Kannada News Photo gallery Chikkmagalur BJP workers started posters against the Karnataka Congress government
ಕಾಂಗ್ರೆಸ್ ಸರ್ಕಾರದ ವಿರುದ್ಧ ಪೋಸ್ಟರ್ ವಾರ್ ಆರಂಭಿಸಿದ ಚಿಕ್ಕಮಗಳೂರು ಬಿಜೆಪಿ ಕಾರ್ಯಕರ್ತರು
ಬಿಜೆಪಿ ಸರ್ಕಾರದ ಅವಧಿಯಲ್ಲಿ ಪೇಸಿಎಮ್ ಸೇರಿದಂತೆ ಇನ್ನಿತರ ಪೋಸ್ಟರ್ಗಳನ್ನು ಅಂಟಿಸಿ ಕಾಂಗ್ರೆಸ್ ಚುನಾವಣೆಯಲ್ಲಿ ಲಾಭ ಪಡೆದಿತ್ತು. ಇದೀಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಪೋಸ್ಟರ್ ವಾರ್ ಆರಂಭಿಸಿದ ಚಿಕ್ಕಮಗಳೂರಿನ ಬಿಜೆಪಿ ಕಾರ್ಯಕರ್ತರು, ಜಿಲ್ಲೆಯ ಕೆಇಬಿ ಕಚೇರಿ, ತಾಲೂಕು ಕಚೇರಿ ಸೇರಿದಂತೆ ಹಲವೆಡೆ ಪೋಸ್ಟರ್ಗಳನ್ನು ಅಂಟಿಸಿದ್ದಾರೆ.
Updated on:Nov 18, 2023 | 7:59 AM

ಭ್ರಷ್ಟಾಚಾರದ ಆರೋಪಗಳ ಸುರಿಮಳೆಗೈದು ಪೇಸಿಎಮ್, 40 ಪರ್ಸೆಂಟ್ ಪೋಸ್ಟರ್ ಸೇರಿದಂತೆ ಹಲವು ಪೋಸ್ಟರ್ಗಳನ್ನು ಬಿಜೆಪಿ ಸರ್ಕಾರದ ವಿರುದ್ಧ ಅಂಟಿಸಿ ಚುನಾವಣೆಯಲ್ಲಿ ಲಾಭ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ವಿರುದ್ಧವೇ ಇದೀಗ ಬಿಜೆಪಿ ಕಾರ್ಯಕರ್ತರು ಪೋಸ್ಟರ್ ವಾರ್ ಆರಂಭಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಪೋಸ್ಟರ್ಗಳನ್ನು ಅಂಟಿಸಿದ್ದಾರೆ. ಉಸ್ತುವಾರಿ ಸಚಿವ ಕೆಜೆ ಜಾರ್ಜ್ ಕಚೇರಿ ಸೇರಿದಂತೆ K.E.B ಕಚೇರಿ, ತಾಲೂಕು ಕಚೇರಿಗಳಲ್ಲಿ ಪೋಸ್ಟರ್ಗಳನ್ನು ಅಂಟಿಸಲಾಗಿದೆ. ಈ ಪೋಸ್ಟರ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರನ್ನು ಶ್ಯಾಡೋ ಸಿಎಂ ಎಂದು ಕರೆಯಲಾಗಿದೆ.

ರಾಜ್ಯದಲ್ಲಿ ವಿದ್ಯುತ್ ಕಡಿತ ಸಮಸ್ಯೆಯನ್ನು ಜನರು ಅನುಭವಿಸುತ್ತಿದ್ದಾರೆ. ಇದನ್ನೇ ಮುಂದಿಟ್ಟುಕೊಂಡು ಇಂಧನ ಇಲಾಖೆ ಸಚಿವರ ವಿರುದ್ಧ ಪೋಸ್ಟರ್ ಅಂಟಿಸಲಾಗಿದೆ. ರಾಜ್ಯವನ್ನು ಕತ್ತಲೆಗೆ ದೂಡಿ ಇಂಧನ ಸಚಿವ ಕೆ.ಜೆ ಜಾಜ್೯ ಕಾಣೆಯಾಗಿದ್ದಾರೆ. ಹುಡುಕಿಕೊಟ್ಟವರಿಗೆ ಕನಿಷ್ಠ ಸಿಂಗಲ್ ಫೇಸ್ ವಿದ್ಯುತ್ ಉಚಿತ, ಖಚಿತ, ನಿಶ್ಚಿತ ಎಂದು ಪೋಸ್ಟರ್ನಲ್ಲಿ ಬರೆಯಲಾಗಿದೆ.

ಅದೇ ರೀತಿ, ವೈಎಸ್ಟಿ (ಯತೀಂದ್ರ ಸಿದ್ದರಾಮಯ್ಯ ಟ್ಯಾಕ್ಸ್) ಸಂಗ್ರಹ ಸಮಿತಿಯ ಸುತ್ತೋಲೆ ಎಂಬ ಶೀರ್ಷಿಕೆ ನೀಡಿ, ಯಾವುದೇ ಸರ್ಕಾರಿ ಸಂಬಂಧಿತ ಸೇವೆಗಳಿಗಾಗಿ ಹಲೋ ಅಪ್ಪಾ.. ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ ಹಾಗೂ ಪೇಮೆಂಟ್ ಮಾಡಿ ಎಂದು ಬರೆಯಲಾಗಿದೆ. ಈ ಪೋಸ್ಟರ್ನಲ್ಲಿ ಯತೀಂದ್ರ ಅವರನ್ನು ಶ್ಯಾಡೋ ಸಿಎಂ ಎಂದು ಕರೆಯಲಾಗಿದೆ.

ಕಾಂಗ್ರೆಸ್ ಹೈಕಮಾಂಡ್ಗೆ ಕರ್ನಾಟಕ ಎಟಿಎಂ ಎಂದು ಬಿಜೆಪಿ ಆರೋಪಿಸುತ್ತಲೇ ಇದೆ. ಇದೀಗ ಪೋಸ್ಟರ್ ಮೂಲಕವೂ ಆರೋಪಿಸಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಕೆಜೆ ಜಾರ್ಜ್ ಸಂಭಾಷಣೆ ನಡೆಸುವ ರೀತಿಯಲ್ಲಿ ಪೋಸ್ಟರ್ ಅಂಟಿಸಲಾಗಿದೆ. ಈ ತಿಂಗಳ ಕಪ್ಪ ಎಲ್ಲಿ ಎಂದು ಸೋನಿಯಾ ಗಾಂಧಿ ಕೇಳುತ್ತಾರೆ. ಇದಕ್ಕೆ ಕೆಜೆ ಜಾರ್ಜ್, ಈಗ ತಾನೇ ವಿದ್ಯುತ್ ಬಿಲ್ ಜಾಸ್ತಿ ಮಾಡಿದ್ದೀವಿ. ಬರುತ್ತೆ ತಡೀರಿ ಮೇಡಂ ಎಂದು ಹೇಳುವ ರೀತಿ ಬರೆಯಲಾಗಿದೆ.

ಅಲ್ಲದೆ, ಬಸ್ ಟಿಕೆಟ್ ದರಗಳನ್ನು ಸದ್ದಿಲ್ಲದೆ ಏರಿಸಿದ್ದನ್ನು ಮುಂದಿಟ್ಟುಕೊಂಡು ಪೋಸ್ಟರ್ ಅಂಟಿಸಲಾಗಿದೆ. ಫ್ರೀ ಬಸ್ ಟಿಕೆಟ್ ಅಂತಾ ನಂಬಿಸಿ 3 ಬಾರಿ ಬಸ್ ಟಿಕೆಟ್ ದರ ಏರಿಸಲಾಗಿದೆ. ಮೈಸೂರು-ಬೆಂಗಳೂರಿಗೆ 160 ರೂ. ಇದ್ದ ಟಿಕೆಟ್ ದರ ಈಗ 200 ರೂ. ಆಗಿದೆ. ಒಂದು ಕಡೆ ಸುಲಿಗೆ.. ಇನ್ನೊಂದು ಕಡೆ ಉಚಿತ.. ಇದು ಫ್ರೀ ಭಾಗ್ಯವಲ್ಲ, ಹಗಲು ದರೋಡೆ ಅಂತ ಪೋಸ್ಟರ್ನಲ್ಲಿ ಬರೆಯಲಾಗಿದೆ.

ಕಾಂಗ್ರೆಸ್ ಸರ್ಕಾರ ಕನ್ನಡಿಗರಿಗೆ ಕಪಟ್ಟ ಐದು ಗ್ಯಾರಂಟಿಗಳು ಎಂದು ಶೀರ್ಷಿಕೆಯುಳ್ಳ ಪೋಸ್ಟರ್ ಕೂಡ ಅಂಟಿಸಲಾಗಿದೆ. ಅಧಿಕಾರಕ್ಕೆ ಬರುತ್ತಿದ್ದಂತೆಯೇ ಕರೆಂಟ್ ಬಿಲ್ ಏರಿಕೆ, ಲೋಡ್ ಶೆಡ್ಡಿಂಗ್ ಶುರು, ಸದ್ದಿಲ್ಲದೇ ಬಸ್ ದರ ಏರಿಕೆ ಮಾಡಿದ್ದು, ಕಾವೇರಿ ನೀರನ್ನು ಬೇಕಾಬಿಟ್ಟಿ ತಮಿಳುನಾಡಿಗೆ ದಾನ ನೀಡಿದ್ದು, ಸರ್ಕಾರಿ ಕಾರ್ಯಕ್ರಮಗಳ ಆಚರಣೆಗೆ ಅನುದಾನ ನೀಡದೆ ಸುಮ್ಮನೆ ಕೂತಿದ್ದು, ಆಸ್ತಿ ನೋಂದಣಿ ದರ ಏರಿಕೆ, ಗೃಹಲಕ್ಷ್ಮೀ ಬರುತ್ತಿಲ್ಲ, ಶಕ್ತಿ ಯೋಜನೆಗೆ ಬಸ್ ಸಾಲ್ತಿಲ್ಲ, ಯುವನಿಧಿಯಿನ್ನೂ ಶುರುವೇ ಆಗಿಲ್ಲ ಎಂದು ಪೋಸ್ಟರ್ನಲ್ಲಿ ಬರೆಯಲಾಗಿದೆ.
Published On - 7:56 am, Sat, 18 November 23
























