ದತ್ತ ಜಯಂತಿ ಸಂಭ್ರಮ, ಕಾಫಿನಾಡು ಕೇಸರಿಮಯ: ಮಹಿಳೆಯರಿಂದ ಬೃಹತ್ ಸಂಕೀರ್ತನಾ ಯಾತ್ರೆ ಫೋಟೋಸ್ ಇಲ್ಲಿವೆ
Datta Jayanti: ಚಿಕ್ಕಮಗಳೂರಿನಲ್ಲಿ ಇಂದಿನಿಂದ 3 ದಿನಗಳ ಕಾಲ ದತ್ತ ಜಯಂತಿ ನಡೆಯಲಿದೆ. ಇಂದಿನ ಅನಸೂಯ ಜಯಂತಿಯಲ್ಲಿ ಸಾವಿರಾರು ಮಹಿಳೆಯರು ಭಾಗಿಯಾಗಿದ್ದಾರೆ. ಚಿಕ್ಕಮಗಳೂರು ನಗರದಲ್ಲಿ ಬೃಹತ್ ಮೆರವಣಿಗೆ ನಡೆಯುತ್ತಿದೆ.
Updated on:Dec 06, 2022 | 12:38 PM

Chikmagalur datta jayanti celebration photos

Chikmagalur datta jayanti celebration photos

ಮೆರವಣಿಗೆ ನಡೆದ ಬಳಿಕ ದತ್ತ ಭಕ್ತರು ದತ್ತಪೀಠಕ್ಕೆ ತೆರಳಲಿದ್ದಾರೆ. ಕೇಸರಿ ಸೀರೆಯುಟ್ಟ ಮಹಿಳೆಯರು ದತ್ತಪೀಠದಲ್ಲಿ ಹೋಮ-ಹವನ ನಡೆಸಲಿದ್ದಾರೆ. ನಾಳೆ ಶೋಭಾಯಾತ್ರೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಭಕ್ತರು ಭಾಗಿಯಾಗುವ ಸಾಧ್ಯತೆ ಇದ್ದು ನಾಡಿದ್ದು ದತ್ತಪೀಠಕ್ಕೆ ಸಾವಿರಾರು ದತ್ತ ಮಾಲಾಧಾರಿಗಳು ತೆರಳಲಿದ್ದಾರೆ.

ದತ್ತಪೀಠದಲ್ಲಿ ಮಾಲೆ ವಿಸರ್ಜನೆ ಮಾಡಿ ದತ್ತಪಾದುಕೆ ದರ್ಶನ ಮಾಡಲಿದ್ದಾರೆ. ದತ್ತಪೀಠದಲ್ಲಿ ಇದೇ ಮೊದಲ ಬಾರಿಗೆ ಹಿಂದೂ ಅರ್ಚಕರು ಪೂಜೆ ಸಲ್ಲಿಸಲಿದ್ದು 4,500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯಿಂದ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಇನ್ನು ದತ್ತ ಜಯಂತಿ ಉತ್ಸವಕ್ಕೆ ಅಡ್ಡಿಪಡಿಸುವ ಹುನ್ನಾರ ನಡೆದಿದೆ. ದತ್ತಪೀಠಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಕಿಡಿಗೇಡಿಗಳು ರಸ್ತೆ ಉದ್ದಕ್ಕೂ ಮೊಳೆಗಳನ್ನು ಹಾಕಿದ್ದಾರೆ. ವಾಹನಗಳು ಅಪಘಾತವಾಗುವ ರೀತಿಯಲ್ಲಿ ಸಂಚುರೂಪಿಸಲಾಗಿದೆ.

ಕೈಮರ ಚೆಕ್ ಪೋಸ್ಟ್ ನಿಂದ ದತ್ತಪೀಠದ ರಸ್ತೆಯ ಉದ್ದಕ್ಕೂ ಮೊಳೆಗಳನ್ನು ಹಾಕಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 12:35 pm, Tue, 6 December 22



















