ಕಾಫಿನಾಡು ಚಿಕ್ಕಮಗಳೂರಿಗೆ ಪ್ರವಾಸಿಗರ ದಂಡು: ಡಿಸೆಂಬರ್ ಒಂದೇ ತಿಂಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಭೇಟಿ

| Updated By: ಗಂಗಾಧರ​ ಬ. ಸಾಬೋಜಿ

Updated on: Dec 27, 2024 | 7:52 PM

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ 2024ರಲ್ಲಿ ಪ್ರವಾಸಿಗರ ದಾಖಲೆಯ ಸಂಖ್ಯೆಯನ್ನು ಕಂಡಿದೆ. ಜನವರಿಯಿಂದ ನವೆಂಬರ್​ವರೆಗೆ 80 ಲಕ್ಷಕ್ಕೂ ಹೆಚ್ಚು ಜನರು ಭೇಟಿ ನೀಡಿದ್ದಾರೆ. ಡಿಸೆಂಬರ್‌ನಲ್ಲಿ 10 ಲಕ್ಷಕ್ಕೂ ಹೆಚ್ಚು ಜನರ ಆಗಮನ ನಿರೀಕ್ಷಿಸಲಾಗಿದೆ. ಇದು ಸರ್ಕಾರದ ಪ್ರವಾಸೋದ್ಯಮ ಯೋಜನೆಗಳ ಯಶಸ್ಸನ್ನು ತೋರಿಸುತ್ತದೆ. ಮುಳ್ಳಯ್ಯನಗಿರಿ, ಶೃಂಗೇರಿ ಮುಂತಾದ ಪ್ರವಾಸಿ ತಾಣಗಳು ಜನರನ್ನು ಆಕರ್ಷಿಸುತ್ತಿವೆ.

1 / 6
ಕಾಫಿನಾಡು ಚಿಕ್ಕಮಗಳೂರು ಅಂದರೆ ನಿಸರ್ಗ ಮಾತೆಯ ತವರು. ವರ್ಷಪೂರ್ತಿ ಹಚ್ಚಹಸಿರಿನಿಂದ ಕಂಗೊಳಿಸುವ ತುಂಬುಮುತ್ತೈದೆ. ಜಗನ್ಮಾತೆ ಅನ್ನಪೂರ್ಣೇಶ್ವರಿ, ಶಾರದಾಂಬೆಯ ನೆಲೆಬೀಡು. ಕಾಫಿನಾಡು ಕೇವಲ ಜಿಲ್ಲೆಯಲ್ಲ. ಧಾರ್ಮಿಕತೆ ಜೊತೆ ಪ್ರವಾಸಿಗರಿಗೆ ಕೇಳಿದ್ದೆಲ್ಲವನ್ನೂ ನೀಡುವ ಅಕ್ಷಯಪಾತ್ರೆ. ಪ್ರವಾಸಿಗರಿಗಂತೂ ನಿಂತಲ್ಲೆ ಮೈಮರೆಸುವ ಹಾಟ್ ಸ್ಪಾಟ್. ಪ್ರತಿ ವರ್ಷ ಕಾಫಿನಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತೆ. ಈ ವರ್ಷ ಕೂಡ ಲಕ್ಷಾಂತರ ಟೂರಿಸ್ಟ್​ಗಳು ಭೇಟಿ ನಿಡಿದ್ದಾರೆ.

2 / 6
ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಕೆಮ್ಮಣ್ಣುಗುಂಡಿ, ಕಲ್ಲತ್ತಿಗರಿ, ದತ್ತಪೀಠ, ಮಾಣಿಕ್ಯಧಾರ, ಶಿಶಿಲ ಗುಡ್ಡ, ದೇವರಮನೆಗುಡ್ಡ, ಶೃಂಗೇರಿ, ಹೊರನಾಡು ಹೀಗೆ ಕಾಫಿನಾಡಿನ ಪ್ರವಾಸಿ ತಾಣಗಳ ಸಂಖ್ಯೆ ಒಂದೋ ಎರಡೋ. ಕಾಫಿನಾಡನ್ನ ರಾಜ್ಯದ ಅತೀ ದೊಡ್ಡ ಜಿಲ್ಲೆ ಅಂತಾನೂ ಕರೆಯಲಾಗುತ್ತೆ. ಎರಡು ತಾಲೂಕುಗಳನ್ನ ಹೊರತು ಪಡಿಸಿದ್ರೆ ಉಳಿದೆಲ್ಲಾ ತಾಲೂಕುಗಳು ಪ್ರವಾಸಿ ಹಾಗೂ ಧಾರ್ಮಿಕ ತಾಣಗಳೇ.

3 / 6
ಕಾಫಿನಾಡ ಭೌಗೋಳಿಕತೆಯಲ್ಲಿ ಅರ್ಧ ಕಾಡೇ ಇದ್ದು, ಅಸಂಖ್ಯಾತ ವನ್ಯ ಮೃಗಗಳ ನಾಡು ಕೂಡ. ಇಲ್ಲಿನ ಪ್ರಕೃತಿ ಸೌಂದರ್ಯವನ್ನ ಸವಿಯೋಕೆಂದು ವರ್ಷ ಪೂರ್ತಿ ಪ್ರವಾಸಿಗರು ಹರಿದು ಬರ್ತಾರೆ. ಎರಡು ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಇನ್ನೂ 2024ರ ನವೆಂಬರ್​ವರೆಗೂ 80 ಲಕ್ಷಕ್ಕೂ ಅಧಿಕ ಪ್ರವಾಸಿಗರು ಕಾಫಿನಾಡಿನ ಪ್ರವಾಸಿತಾಣಗಳಿಗೆ ಭೇಟಿ ನೀಡಿದ್ದು, ಡಿಸೆಂಬರ್ ತಿಂಗಳಲ್ಲಿ 10 ಲಕ್ಷಕ್ಕೂ ಅಧಿಕ ಪ್ರವಾಸಿಗರು ಆಗಮಿಸುವ ನಿರೀಕ್ಷೆ ಮಾಡಲಾಗಿದೆ. ಹೊಸ ವರ್ಷದ ಆಚರಣೆಗಾಗಿ ದೇಶ ವಿದೇಶ ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಿಂದ ಪ್ರವಾಸಿಗರು ಬರುವ ನಿರೀಕ್ಷೆಯಿದೆ. 

4 / 6
ಕಾಫಿನಾಡು ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಪ್ರವಾಸಿಗರು ಬರಲು ಗ್ಯಾರಂಟಿ ಸರ್ಕಾರದ ಶಕ್ತಿ ಯೋಜನೆ ಪಾಲು ಇದೆ. ಯಾಕಂದ್ರೆ, ಈ ವರ್ಷ ಜನವರಿಯಿಂದ ನವೆಂಬರ್ ವರೆಗೂ ಸುಮಾರು 80 ಲಕ್ಷದಷ್ಟು ಪ್ರವಾಸಿಗರು ಜಿಲ್ಲೆಗೆ ಭೇಟಿ ನೀಡಿದ್ದಾರೆ. ಕಳೆದ ವರ್ಷ ಇಡೀ ವರ್ಷಕ್ಕೆ 60 ಲಕ್ಷವಿತ್ತು, 2021, 22 ರಲ್ಲಿ ಇನ್ನೂ ಕಡಿಮೆ ಇತ್ತು. ಈ ಬಾರಿ ಜನವರಿಯಿಂದ 11 ತಿಂಗಳಿಗೆ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಏರಿದೆ. ಡಿಸೆಂಬರ್​ನಲ್ಲಿ ಸಾಲು ಸಾಲು ರಜೆ, ಕ್ರಿಸ್ಮಸ್ ಸೇರಿದಂತೆ ಹೊಸ ವರ್ಷ ಆಚರಣೆಗಾಗಿ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆಯಿದೆ. 

5 / 6
ಡಿಸೆಂಬರ್​ನಲ್ಲೇ ಪ್ರವಾಸಿಗರ ಸಂಖ್ಯೆ 10 ಲಕ್ಷಕ್ಕೂ ಹೆಚ್ಚಿರುವ ಸಾಧ್ಯತೆ ಇದೆ. ಅಲ್ಲಿಗೆ 2024 ರಲ್ಲಿ ಭೇಟಿ ನೀಡಿದ ಪ್ರವಾಸಿಗರ ಸಂಖ್ಯೆ ಒಂದು ಕೋಟಿ ದಾಟಲಿದೆ ಎಂದು ಅಂದಾಜಿಸಲಾಗಿದೆ. ಈ ವರ್ಷ ಕಾಫಿನಾಡಿಗೆ ಭೇಟಿ ನೀಡಿರುವ ಪ್ರವಾಸಿಗರ ಸಂಖ್ಯೆ ಕೋಟಿ ದಾಟುವುದರಲ್ಲಿ ಅನುಮಾನವಿಲ್ಲ.

6 / 6
ಚಿಕ್ಕಮಗಳೂರು ಜಿಲ್ಲೆಯ ದಿನದಿಂದ ದಿನಕ್ಕೆ ಹೆಚ್ಚು ಪ್ರವಾಸಿಗರನ್ನ ಆಕರ್ಷಿಸುತ್ತಿದೆ. ಇಲ್ಲಿಯ ಪ್ರವಾಸಿ ತಾಣಗಳು ಹಾಗೂ ಇಬ್ಬರು ಅಧಿದೇವತೆಯರನ್ನ ನಂಬಿಕೊಂಡು ಬದುಕುತ್ತಿರುವ ಜನಸಾಮಾನ್ಯರ ಬಾಳು ಕೂಡ ಪ್ರವಾಸಿಗರು ಹೆಚ್ಚಾದಂತೆ ಅವರ ಆರ್ಥಿಕ ಗುಣಮಟ್ಟ ಕೂಡ ಹೆಚ್ಚುತ್ತಿದೆ. 2024 ಕಳೆದು 2025 ಅನ್ನು ಸ್ವಾಗತ ಮಾಡಲು ಕಾಫಿನಾಡಿಗೆ ಪ್ರವಾಸಿಗರ ದಂಡು ಹರಿದು ಬರುತ್ತಿದೆ. 