AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Children’s Day Special: 3D ಪ್ರಿಂಟಿಂಗ್​ ಪ್ರವೀಣೆ 7ನೇ ತರಗತಿಯ ಈ ಬಾಲೆ

ಧಾರವಾಡದ 7ನೇ ತರಗತಿ ವಿದ್ಯಾರ್ಥಿನಿ ನೀತಿ ಕುಲಕರ್ಣಿ 3D ಪ್ರಿಂಟಿಂಗ್ ಕಲೆಯಲ್ಲಿ ಅಸಾಧಾರಣ ಸಾಧನೆ ಮಾಡಿದ್ದಾರೆ. ಶಾಲಾ ಅಧ್ಯಯನದ ಜೊತೆಗೆ ಆಧುನಿಕ ತಂತ್ರಜ್ಞಾನವನ್ನು ಬಳಸಿ ಲ್ಯಾಂಪ್​​ಗಳು, ಆಟಿಕೆಗಳು ಸೇರಿದಂತೆ ಆಕರ್ಷಕ ವಸ್ತುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದಾರೆ. ಆ ಮೂಲಕ ಸ್ವಂತ ಆದಾಯ ಗಳಿಸುತ್ತಿರುವ ನೀತಿ, ಇತರೆ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದ್ದಾರೆ.

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಪ್ರಸನ್ನ ಹೆಗಡೆ|

Updated on: Nov 14, 2025 | 4:21 PM

Share
ವಿದ್ಯಾರ್ಥಿ ದೆಸೆಯಿಂದಲೇ ಆಧುನಿಕ ತಂತ್ರಜ್ಞಾನವನ್ನು ಕಲಿತು ಧಾರವಾಡದ ಮಾಳಮಡ್ಡಿ ಬಡಾವಣೆಯ ನಿವಾಸಿ ನೀತಿ ಕುಲಕರ್ಣಿ ಎಲ್ಲರ ಗಮನ ಸೆಳೆದಿದ್ದಾರೆ. ಕೆ.ಇ. ಬೋರ್ಡ್‌ ಶಾಲೆಯಲ್ಲಿ 7ನೇ ತರಗತಿ ಓದುತ್ತಿರುವ ಇವರು, 3D ಪ್ರಿಂಟಿಂಗ್​ ಪ್ರವೀಣೆ. ವಿನಾಯಕ ಹಾಗೂ ಅಂಜಲಿ ದಂಪತಿ ಮಗಳಾಗಿರೋ ಇವರು, ವಿದ್ಯಾಭ್ಯಾಸದ ಜೊತೆಗೆ ಉದ್ಯೋಗದ ದಾರಿಯನ್ನೂ ಕಂಡುಕೊಂಡು ಮಾದರಿಯಾಗಿದ್ದಾರೆ.

1 / 5
ಸಾಮಾನ್ಯವಾಗಿ ವಿದ್ಯಾರ್ಥಿಗಳು ತಮ್ಮ ನಿತ್ಯದ ಅಭ್ಯಾಸಕ್ಕೆ ಪೂರಕವಾಗಿ ವಿಜ್ಞಾನ ಪ್ರಯೋಗಗಳು, ಸಾಂಸ್ಕೃತಿಕ ಚಟುವಟಿಕೆಗಳು, ಕ್ರೀಡೆ ಸೇರಿದಂತೆ ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚು ಆಸಕ್ತಿ ಹೊಂದಿರುತ್ತಾರೆ. ಆದರೆ, ನೀತಿ ಕುಲಕರ್ಣಿ ತಂತ್ರಜ್ಞಾನ ಬಳಸಿಕೊಂಡು ನಿತ್ಯದ ಅಭ್ಯಾಸದ ಜೊತೆಗೆ ಆದಾಯ ಗಳಿಸುತ್ತಿದ್ದಾರೆ.

2 / 5
3ಡಿ ತಂತ್ರಜ್ಞಾನ ಬಳಸಿ ಮದ್ರಾಸ್‌ ಐಐಟಿ ಸಂಶೋಧಕರು ಒಂದಿಡೀ ಕಟ್ಟಡವನ್ನೇ ನಿರ್ಮಿಸಿರುವುದನ್ನು ಪ್ರೇರಣೆಯಾಗಿ ಪಡೆದುಕೊಂಡ ಇವರು, ಈ ತಂತ್ರಜ್ಞಾನದ ಬಗ್ಗೆ ಗೂಗಲ್​ನಲ್ಲಿ ಹುಡುಕಾಟ ನಡೆಸಿದ್ದಾರೆ. 3ಡಿ ತಂತ್ರಜ್ಞಾನದ ಮೂಲಕ ನಾನು ಸಹ ಏನಾದರೂ ಮಾಡಬೇಕೆಂದು ನಿರ್ಧರಿಸಿ, 3ಡಿ ಲ್ಯಾಂಪ್ಸ್‌ ಹಾಗೂ ಇತರೆ ಆಕರ್ಷಕ ವಸ್ತುಗಳನ್ನು ಸಿದ್ಧಪಡಿಸಿ ಸೈ ಎನಿಸಿಕೊಂಡಿದ್ದಾರೆ.

3 / 5
3ಡಿ ಪ್ರಿಂಟರೊಂದನ್ನು ಖರೀದಿಸಿರುವ ನೀತಿ, ತಮ್ಮ ಮೊಬೈಲ್‌ನಲ್ಲಿನ ವಿವಿಧ ಆ್ಯಪ್​ಗಳ ಸಹಾಯದಿಂದ ಲ್ಯಾಂಪ್‌ ಅಥವಾ ಯಾವುದಾದರೂ ವಸ್ತುವಿನ ಮೇಲೆ ಮುದ್ರಣ ಆಗುವ ಚಿತ್ರವನ್ನು ಸಂಯೋಜನೆ ಮಾಡಿ ಮುದ್ರಿಸುತ್ತಿದ್ದಾರೆ. ಈಗಾಗಲೇ ಮೂನ್‌ ಲ್ಯಾಂಪ್‌ಗಳ ಮೇಲೆ  ಆಧ್ಯಾತ್ಮ ಗುರುಗಳು, ಕ್ರೀಡಾ ತಾರೆಗಳು, ಸಿನಿಮಾ ತಾರೆಗಳು ಸೇರಿದಂತೆ ವಿವಿಧ ಚಿತ್ರಗಳನ್ನು ಮುದ್ರಿಸಿದ್ದಾರೆ.

4 / 5
ಉಡುಗೊರೆ ಕೊಡಲು ಆಕರ್ಷಕ ಆಟಿಕೆ ವಸ್ತುಗಳು, ಕೀ ಚೈನ್‌ಗಳು, ಲೋಗೋ, ಮೂರ್ತಿಗಳ ನಿರ್ಮಾಣವನ್ನು ಸಹ ಈ ತ್ರಿಡಿ ಪ್ರಿಂಟರ್‌ ಮೂಲಕ ನೀತಿ ಅವರು ಮಾಡುತ್ತಿದ್ದಾರೆ. 18  ಸಾವಿರ ರೂ.ಗೆ 3ಡಿ ಪ್ರಿಂಟರ್‌ ಖರೀದಿಸಿದ್ದು, ಪ್ರಿಟಿಂಗ್​​ ಸಮೇತ ಒಂದು ಮೂನ್‌ ಲ್ಯಾಂಪ್​​ಗೆ  350-400 ರೂ.ವರೆಗೆ ವೆಚ್ಚವಾಗುತ್ತಿದೆ. ಇದನ್ನು 750ರಿಂದ 960 ರೂ.ವರೆಗೂ ನೀತಿ ಮಾರಾಟ ಮಾಡುತ್ತಿದ್ದಾರೆ.

5 / 5
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ

ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?

ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ