
ಹೆಲಿಕಾಪ್ಟರ್ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ದಂಪತಿ ಅಲ್ಲಿಂದ ಚಾಮುಂಡಿಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದಲ್ಲಿ ಪಾಲ್ಗೊಂಡಿದ್ದಾರೆ.

ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ತಾಯಿಯ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಪತ್ನಿ ಚೆನ್ನಮ್ಮ ಕೂಡ ಜೊತೆಗಿದ್ದರು. ಹಾಗೂ ಎಸ್ಟಿ ಸೋಮಶೇಖರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಸಿಎಂ ಬಸವರಾಜ ಬೊಮ್ಮಾಯಿ ಚಾಮುಂಡೇಶ್ವರಿ ಪಾದಕ್ಕೆ ನಮಿಸಿ ರಾಜ್ಯದ ಸಮೃದ್ಧಿ, ಒಲಿತಿಗಾಗಿ ಪ್ರಾರ್ಥಿಸಿದರು.

ಮೈಸೂರಿನ ನಾಡ ದೇವತೆ, ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಸಿಎಂ ಬೊಮ್ಮಾಯಿ ದಂಪತಿ ಹಾರ ಬದಲಾಯಿಸಿಕೊಂಡರು.