ಸರ್ಕಾರಿ ನಿವಾಸ ‘ಗಂಗಾ’ಕ್ಕೆ ಪಾದಾರ್ಪಣೆ ಮಾಡಿದ ಸಿಎಂ ಡಿಕೆಶಿ ಕುಟುಂಬ: ಇಲ್ಲಿವೆ ಗೃಹ ಪ್ರವೇಶದ ಸುಂದರ ಚಿತ್ರಗಳು

Updated on: Nov 16, 2026 | 5:21 PM

ಅಧಿಕೃತ ಸರ್ಕಾರಿ ನಿವಾಸ 'ಗಂಗಾ'ಗೆ ಕರ್ನಾಟಕ ಸಿಎಂ ಡಿಕೆ ಶಿವಕುಮಾರ್​​ ಅವರ ಕುಟುಂಬ ಪಾದಾರ್ಪಣೆ ಮಾಡಿದೆ. ನೊಣವಿನಕೆರೆ ಅಜ್ಜಯ್ಯ ಅವರ ನೇತೃತ್ವದಲ್ಲಿ ವಿಶೇಷ ಪೂಜೆ, ಹೋಮ‌ ಸೇರಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದ್ದು, ಕಾರ್ಯಕ್ರಮದಲ್ಲಿ ಡಿಕೆಶಿ ಅವರ ಆಪ್ತ ಶಾಸಕರು, ಸಚಿವರು ಭಾಗಿಯಾಗಿದ್ದರು.

1 / 5
ಸಿಎಂ ಡಿ.ಕೆ. ಶಿವಕುಮಾರ್ ಅವರು ಕುಮಾರಕೃಪಾ ಗೆಸ್ಟ್ ಹೌಸ್‌ಗೆ ಗಂಗಾ ಎಂದು ಮರುನಾಮಕರಣ ಮಾಡಿ, ಅದನ್ನು ಮುಖ್ಯಮಂತ್ರಿಗಳ ಅಧಿಕೃತ ನಿವಾಸವನ್ನಾಗಿ ಪರಿವರ್ತಿಸಿದ್ದಾರೆ. ಹಳೆಯ ಕಟ್ಟಡವನ್ನು ಸಂಪೂರ್ಣವಾಗಿ ನವೀಕರಿಸಲಾಗಿದ್ದು, ಗೃಹಪ್ರವೇಶ ಕಾರ್ಯಕ್ರಮ ನಡೆದಿದೆ.

ಸಿಎಂ ಡಿ.ಕೆ. ಶಿವಕುಮಾರ್ ಅವರು ಕುಮಾರಕೃಪಾ ಗೆಸ್ಟ್ ಹೌಸ್‌ಗೆ ಗಂಗಾ ಎಂದು ಮರುನಾಮಕರಣ ಮಾಡಿ, ಅದನ್ನು ಮುಖ್ಯಮಂತ್ರಿಗಳ ಅಧಿಕೃತ ನಿವಾಸವನ್ನಾಗಿ ಪರಿವರ್ತಿಸಿದ್ದಾರೆ. ಹಳೆಯ ಕಟ್ಟಡವನ್ನು ಸಂಪೂರ್ಣವಾಗಿ ನವೀಕರಿಸಲಾಗಿದ್ದು, ಗೃಹಪ್ರವೇಶ ಕಾರ್ಯಕ್ರಮ ನಡೆದಿದೆ.

2 / 5

ನಿನ್ನೆ (ನವೆಂಬರ್​​ 15) ರಾತ್ರಿಯಿಂದಲೇ ನೊಣವಿನಕೆರೆ ಅಜ್ಜಯ್ಯ ಅವರ ನೇತೃತ್ವದಲ್ಲಿ ವಿಶೇಷ ಪೂಜೆ, ಹೋಮ‌ ಸೇರಿ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಗಿದೆ. ಇಂದು ಕೂಡ ವಿವಿಧ ಕಾರ್ಯಕ್ರಮಗಳು ಪುರೋಹಿತರಿಂದ ಸಂಪನ್ನಗೊಂಡಿವೆ.

3 / 5

ಸಿಎಂ ನಿವಾಸದ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಆಪ್ತ ಶಾಸಕರು, ಸಚಿವರು ಭಾಗಿಯಾಗಿದ್ದರು. ಸಚಿವ ಬಾಲಕೃಷ್ಣ, ಶಾಸಕ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಎ.ಎಸ್ ಪೊನ್ನಣ್ಣ, ವಿ.ಎಸ್ ಉಗ್ರಪ್ಪ ಸೇರಿ ಹಲವರು ಉಪಸ್ಥಿತರಿದ್ದರು.

4 / 5

ಇನ್ನು ಗೃಹಪ್ರವೇಶ ಕಾರ್ಯಕ್ರಮ ನೆರವೇರಿಸಿರುವ ಸಿಎಂ ಡಿ.ಕೆ. ಶಿವಕುಮಾರ್​​ ಕುಟುಂಬ ಇಂದಿನಿಂದಲೇ ಗಂಗಾ ನಿವಾಸದಲ್ಲಿ ವಾಸಿಸುತ್ತಿಲ್ಲ. ನವೆಂಬರ್ ಕೊನೆಯಲ್ಲಿ ಸಿಎಂ ಕುಟುಂಬ ಇಲ್ಲಿಗೆ ಶಿಫ್ಟ್ ಆಗುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

5 / 5

ಸದಾಶಿವನಗರದಲ್ಲಿದ್ದ ನಿವಾಸದಿಂದ ನಿರ್ವಹಿಸುತ್ತಿದ್ದ ಹಲವು ಸಾರ್ವಜನಿಕ ಕೆಲಸಗಳನ್ನು ಇನ್ನು ಮುಂದೆ ಗಂಗಾ ನಿವಾಸದಿಂದಲೇ ಸಿಎಂ ಡಿಕೆಶಿ ನಿರ್ವಹಿಸಲಿದ್ದಾರೆ. ಮುಖ್ಯಮಂತ್ರಿಗಳ ಭೇಟಿಗೆ ಬರುವವರಿಗೆ ವಿಶೇಷ ಭದ್ರತಾ ವ್ಯವಸ್ಥೆ ಹಾಗೂ ಪ್ರತ್ಯೇಕ ಮಾರ್ಗವನ್ನೂ ಕಲ್ಪಿಸಲಾಗಿದೆ.

Published On - 5:21 pm, Mon, 16 November 26

ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದಾರೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Loading...
Unable to load recommendations.
Follow Us