Updated on: Oct 24, 2023 | 6:42 PM
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಸತತ 4ನೇ ಬಾರಿಗೆ 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ‘ಅಭಿಮನ್ಯು’ ಹೊತ್ತು ಸಾಗುತ್ತಿದ್ದು, ಅಭಿಮನ್ಯುಗೆ ಕುಮ್ಕಿ ಆನೆಗಳಾದ ಲಕ್ಷ್ಮೀ, ವಿಜಯಾ ಸಾಥ್ ನೀಡುತ್ತಿವೆ.
ಅರಮನೆಯಿಂದ ಹೊಡಲಿರುವ ಜಂಬೂ ಸವಾರಿ, ಕೆ.ಆರ್.ಸರ್ಕಲ್ , ಆರ್ಯವೇದ ಸರ್ಕಲ್, ತಿಲಕ್ ನಗರ, ಬಂಬೂ ಬಜಾರ್ ಮೂಲಕ ಬನ್ನಿ ಮಂಟಪ್ಪಕ್ಕೆ ತಲುಪಲಿದೆ. ಸುಮಾರು 4 ರಿಂದ 5 ಕಿಲೋ ಮೀಟರ್ ಈ ಸವಾರಿ ನಡೆಯಲಿದೆ.
ಅರಮನೆಯಿಂದ ಬನ್ನಿಮಂಟಪದವರೆಗೆ ಈ ಮೆರವಣಿಗೆ ನಡೆಯಲಿದೆ. ಜಂಬೂಸವಾರಿಯಲ್ಲಿ 49 ಸ್ತಬ್ದಚಿತ್ರಗಳು, ವಿವಿಧ ಕಲಾತಂಡಗಳು ಭಾಗಿಯಾಗಿದ್ದು, ಲಕ್ಷಾಂತರ ಜನರು ದಸರಾ ಜಂಬೂಸವಾರಿಗೆ ಸಾಕ್ಷಿಯಾಗಲಿದ್ದಾರೆ.
ದಸರಾ ಮೆರವಣಿಗೆಯಲ್ಲಿ ಆಕರ್ಷಕ ನಂದಿಧ್ವಜ ಕುಣಿತ ಸೇರಿದಂ ವಿವಿಧ ವೇಷ ತೊಟ್ಟು ಅನೇಕ ಕಲಾವಿದರು ನೃತ್ಯದಲ್ಲಿ ತೊಡಗಿದ್ದಾರೆ.
ಇನ್ನು ಈ ಬಾರಿ ನಿಗದಿತ ಸಮಯಕ್ಕಿಂತ ಜಂಬೂಸವಾರಿಗೆ ಪುಷ್ಪಾರ್ಚನೆ ತಡವಾಗಿದೆ. 4.40 ರಿಂದ 5 ಗಳೆ ಒಳಗೆ ಸಲ್ಲುವ ಮೀನ ಲಗ್ನದಲ್ಲಿ ಉಪ್ಪಾರ್ಚನೆ ಆಗಬೇಕಿತ್ತು. ಆದರೆ, 5.9 ಕ್ಕೆ ಪುಷ್ಪಾರ್ಚನೆ ನಡೆದಿದ್ದು, 9 ನಿಮಿಷ ತಡವಾಗಿ ಪುಷ್ಪಾರ್ಚನೆ ನಡೆದಿದೆ.
ದಸರಾ ಜಂಬೂಸವಾರಿ ಸಾಗುವ ರಸ್ತೆಯುದ್ದಕ್ಕೂ ನೆರೆದಿರುವ ಜನ, ಚಾಮುಂಡೇಶ್ವ ವಿಗ್ರಹಕ್ಕೆ ನಮಿಸಿದ್ದಾರೆ. ಅಭಿಮನ್ಯು ಮೇಲೆ ಚಾಮುಂಡೇಶ್ವರಿ ವಿರಾಜಮಾನವಾಗಿ ಕುಳಿತಿರುವಳು.