ಭರ್ಜರಿ 135 ಬಹುಮತದೊಂದಿಗೆ ಸರ್ಕಾರ ರಚಿಸಿದ ಜೋಡೆತ್ತುಗಳು. ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸಿದರು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭ ನಡೆದಿದ್ದು, ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯಗೆ ಪ್ರತಿಜ್ಞಾವಿಧಿ ಬೋಧಿಸಿದ್ದು ದೇವರ ಹೆಸರಿನಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪದಗ್ರಹಣ ಮಾಡಿದರು.
ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದ್ದು ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭ ನಡೆದಿದ್ದು, ಸಚಿವರಾಗಿ ಡಾ.ಜಿ.ಪರಮೇಶ್ವರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದು ಡಾ.ಪರಮೇಶ್ವರ್ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಸಚಿವರಾಗಿ ಕೆ.ಹೆಚ್.ಮುನಿಯಪ್ಪ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದು ಕೆ.ಹೆಚ್.ಮುನಿಯಪ್ಪ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಸಚಿವರಾಗಿ ಕೆ.ಜೆ.ಜಾರ್ಜ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದು ಕೆ.ಜೆ.ಜಾರ್ಜ್ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಸಚಿವರಾಗಿ ಎಂ.ಬಿ.ಪಾಟೀಲ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದು ಎಂ.ಬಿ.ಪಾಟೀಲ್ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಸಚಿವರಾಗಿ ಸತೀಶ್ ಜಾರಕಿಹೊಳಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದು ಸತೀಶ್ ಜಾರಕಿಹೊಳಿ ಅವರು ಬುದ್ಧ, ಬಸವ, ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಸಚಿವರಾಗಿ ಪ್ರಿಯಾಂಕ್ ಖರ್ಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದು ಪ್ರಿಯಾಂಕ್ ಖರ್ಗೆ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಅಪ್ಪ, ಎಐಸಿಸಿ ಅಧಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಪುತ್ರ ಪ್ರಿಯಾಂಕ್ ಖರ್ಗೆ ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು.
ಸಚಿವರಾಗಿ ರಾಮಲಿಂಗಾರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದು ರಾಮಲಿಂಗಾರೆಡ್ಡಿ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಸಚಿವರಾಗಿ ಜಮೀರ್ ಅಹ್ಮದ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದು ಇಂಗ್ಲೀಷ್ನಲ್ಲಿ ಜಮೀರ್ ಅಹ್ಮದ್ ಅವರು ಅಲ್ಲಾಹ್ ಮತ್ತು ತಾಯಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ ಸಚಿವರು
Published On - 1:59 pm, Sat, 20 May 23