- Kannada News Photo gallery CM Siddaramaiah Honors Indian Blind Women’s Cricket World Cup Winners; Announces Jobs and 10 Lakh Cash Prize
ವಿಶ್ವಕಪ್ ಗೆದ್ದ ಭಾರತದ ಅಂಧ ಮಹಿಳಾ ತಂಡಕ್ಕೆ ಸನ್ಮಾನ: ಕರ್ನಾಟಕದವರಿಗೆ ಸಿದ್ದರಾಮಯ್ಯ ಬಂಪರ್ ಗಿಫ್ಟ್
ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡ ಚೊಚ್ಚಲ ವಿಶ್ವಕಪ್ ಗೆದ್ದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ. ಕಾವೇರಿ ನಿವಾಸದಲ್ಲಿ ತಂಡವನ್ನು ಸನ್ಮಾನಿಸಿದ ಸಿಎಂ, ನಾಯಕಿ ಶಿರಾ ಮೂಲದ ದೀಪಿಕಾ ಅವರ ನಾಯಕತ್ವವನ್ನು ಶ್ಲಾಘಿಸಿದರು. ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ. ನಗದು ಮತ್ತು ಸರ್ಕಾರಿ ಉದ್ಯೋಗವನ್ನು ಸಿಎಂ ಘೋಷಿಸಿದ್ದಾರೆ.
Updated on:Nov 25, 2025 | 6:32 PM

ಭಾರತದ ಅಂಧ ಮಹಿಳೆಯರ ಕ್ರಿಕೆಟ್ ತಂಡ ಚೊಚ್ಚಲ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದೆ. ಈ ಹಿನ್ನೆಲೆ ಇಡೀ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಮಂಗಳವಾರ ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತಿ ಆಟಗಾರರನ್ನು ಅಭಿನಂದಿಸಿ, ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ, ತಲಾ 10 ಲಕ್ಷ ರೂ ನಗದು ಬಹುಮಾನ ಸೇರಿದಂತೆ ಸರ್ಕಾರಿ ಉದ್ಯೋಗ ಘೋಷಿಸಿದ್ದಾರೆ.

ಅಷ್ಟೇ ಅಲ್ಲದೆ ಭಾರತ ತಂಡದಲ್ಲಿದ್ದ ಇತರೆ ರಾಜ್ಯಗಳ 13 ಆಟಗಾರ್ತಿಯರಿಗೂ ತಲಾ 2 ಲಕ್ಷ ರೂ. ನಗದು ಬಹುಮಾನವನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ತುಮಕೂರಿನ ಶಿರಾ ಮೂಲದ ದೀಪಿಕಾ ಅವರ ನಾಯಕತ್ವ ಮತ್ತು ಆಟದ ವೈಖರಿಯನ್ನು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡದ ಸದಸ್ಯರನ್ನು ಅಭಿನಂದಿಸಿದ್ದು, ಮುಂದಿನ ಕ್ರೀಡಾ ಬದುಕು ಹೀಗೆಯೇ ಯಶಸ್ಸುಗಳಿಂದ ಕೂಡಿರಲಿ ಎಂದು ಶುಭ ಹಾರೈಸಿದ್ದಾರೆ.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹಾಗೂ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಉಪಸ್ಥಿತರಿದ್ದರು.
Published On - 6:30 pm, Tue, 25 November 25



