
76 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ತೋಟಗಾರಿಕೆ ಇಲಾಖೆ ವತಿಯಿಂದ ಬೆಂಗಳೂರಿನ ಸಸ್ಯಕಾಶಿ ಲಾಲ್ಬಾಗ್ನಲ್ಲಿ 214ನೇ ಫಲಪುಷ್ಪ ಪ್ರದರ್ಶನವನ್ನು ಇಂದಿನಿಂದ ಆಗಸ್ಟ್ 15 ರವರೆಗೂ ಆಯೋಜನೆ ಮಾಡಲಾಗಿದೆ.

ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ಧರಾಮಯ್ಯ ಅವರು ಇಂದು ಸಂಜೆ 6 ಗಂಟೆಗೆ ಚಾಲನೆ ನೀಡಿದ್ದಾರೆ.

ಇದೇ ವೇಳೆ ಸಿಎಂ ಸಿದ್ಧರಾಮಯ್ಯ ಅವರಿಂದ ಕೆಂಗಲ್ ಹನುಮಂತಯ್ಯ ಜೀವನಾಧಾರಿತ ಪುಸ್ತಕವನ್ನು ಬಿಡುಗಡೆ ಮಾಡಿದರು. ತೋಟಗಾರಿಕೆ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಎಂಎಲ್ಸಿಗಳಾದ ಗೋವಿಂದರಾಜು, ಟಿ.ಎ.ಶರವಣ ಉಪಸ್ಥಿತರಿದ್ದರು.

2.50 ಕೋಟಿ ರೂಪಾಯಿ ವೆಚ್ಚದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಸಸ್ಯಕಾಶಿ ಲಾಲ್ಬಾಗ್ನಲ್ಲಿ ಫ್ಲವರ್ ಶೋ ಆಯೋಜಿಸಲಾಗಿದೆ.

ಈ ಭಾರಿಯ ಫ್ಲವರ್ ಶೋ ವಿಧಾನಸೌಧ ಹಾಗೂ ಅದರ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಥೀಮ್ವನ್ನು ಹೊಂದಿದೆ.

ಕೆಂಗಲ್ ಹನುಮಂತಯ್ಯ ಅವರ ಬದುಕು, ಸಾಧನೆ ಹಾಗೂ ಕನಸುಗಳ ಬಗೆಗಿನ ಸಂಪೂರ್ಣ ಮಾಹಿತಿ ಫಲಕಗಳ ಮೂಲಕ ಜನರಿಗೆ ತಿಳಿಸಲಾಗುತ್ತಿದೆ.

ಈ ಭಾರಿಯ ಫ್ಲವರ್ ಶೋ ವಿಧಾನಸೌಧ ಹಾಗೂ ಅದರ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಥೀಮ್ವನ್ನು ಹೊಂದಿದೆ.

ಫ್ಲವರ್ ಶೋಗೆ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶ ರಾಜ್ಯದಿಂದಲೂ ಹೂವುಗಳನ್ನು ತರಿಸಿಕೊಳ್ಳಲಾಗುತ್ತಿದೆ. 15-17 ಲಕ್ಷ ಹೂವುಗಳಿಂದ ಫ್ಲವರ್ ಶೋ ಕಂಗೊಳಿಸಲಿದೆ.
Published On - 9:48 pm, Fri, 4 August 23