- Kannada News Photo gallery CM Siddaramaiah Perform Bagina to Almatti dam, Vijayapura News in Kannada
ಭರ್ತಿಯಾದ ಆಲಮಟ್ಟಿ ಜಲಾಶಯ, ಆ.21 ರಂದು ಸಿಎಂ ಸಿದ್ದರಾಮಯ್ಯ ಬಾಗಿನ
ಉತ್ತರ ಕರ್ನಾಟಕದ ಜೀವನದಿಯಾಗಿರುವ ಕೃಷ್ಣಾ ನದಿ ಮೈದುಂಬಿ ಹತಿಯುತ್ತಿದೆ. ಆಲಮಟ್ಟಿ ಜಲಾಶಯ ಉತ್ತರ ಕರ್ನಾಟಕದ ಜೀವನಾಡಿಯಾಗಿದೆ. ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಮುಖ್ತಮಂತ್ರಿ ಸಿದ್ದರಾಮಯ್ಯ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.
Updated on:Aug 20, 2024 | 10:01 AM

ಉತ್ತರ ಕರ್ನಾಟಕದ ಜೀವನದಿಯಾಗಿರುವ ಕೃಷ್ಣಾ ನದಿ ಮೈದುಂಬಿ ಹತಿಯುತ್ತಿದೆ. ಆಲಮಟ್ಟಿ ಜಲಾಶಯ ಉತ್ತರ ಕರ್ನಾಟಕದ ಜೀವನಾಡಿಯಾಗಿದೆ. ಈ ಜಲಾಶಯ 9 ಜಿಲ್ಲೆಗಳಿಗೆ ನೀರು ಒದಗಿಸುತ್ತದೆ. ಈ ಜಲಾಶಯದಲ್ಲಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಜಲಾಶಯ ಸಂಪೂರ್ಣ ಭರ್ತಿಯಾಗಿದೆ.

August 24th 2024 Karnataka dam water level know in Kannada

ಭರ್ತಿಯಾಗಿರುವ ಆಲಮಟ್ಟಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಬೆಳಗ್ಗೆ 10 ಗಂಟೆಗೆ ಹೆಚ್ಎಎಲ್ನಿಂದ ವಿಮಾನದಲ್ಲಿ ಹೊರಟು 10:50ಕ್ಕೆ ಕೊಪ್ಪಳದ ಗಿಣಿಗೇರಾ ಏರ್ಸ್ಟ್ರಿಪ್ಗೆ ತಲುಪಲಿದ್ದಾರೆ. ನಂತರ ಗಿಣಿಗೇರಾದಿಂದ ರಸ್ತೆ ಮಾರ್ಗವಾಗಿ ವಿಜಯಪುರ ಜಿಲ್ಲೆಯ ಆಲಮಟ್ಟಿಗೆ ಮಧ್ಯಾಹ್ನ 12.30ಕ್ಕೆ ತಲುಪಲಿದ್ದಾರೆ.

ಅಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಲಮಟ್ಟಿ ಜಲಾಯಶದ ಬಳಿ ಮೊದಲಿಗೆ ಕೃಷ್ಣಾ ನದಿಗೆ ಪೂಜೆ ಸಲ್ಲಿಸಲಿದ್ದಾರೆ. ನಂತರ ಬಾಗಿನ ಅರ್ಪಿಸಲಿದ್ದಾರೆ. ಬಳಿಕ ಮದ್ಯಾಹ್ನ 3 ಗಂಟೆಗೆ ರಸ್ತೆ ಮಾರ್ಗವಾಗಿ ಮತ್ತೆ ಗಿಣಿಗೇರಾಕ್ಕೆ ತೆರಳಿ, ಅಲ್ಲಿಂದ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾ ಉಸ್ತುವಾರಿ ಎಂ ಬಿ ಪಾಟೀಲ್, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ ತಿಮ್ಮಾಪುರ ಸೇರಿದಂತೆ ಉಭಯ ಜಿಲ್ಲೆಯ ಶಾಸಕರು ಅಧಿಕಾರಿಗಳು ಭಾಗಿಯಾಗಲಿದ್ದಾರೆ.
Published On - 10:01 am, Tue, 20 August 24




