Kannada News Photo gallery CM Siddaramaiah Visits Morarji Desai Residential School And Teached kannada vyakarana Bengaluru News In Kannada
ವಿದ್ಯಾರ್ಥಿಗಳಿಗೆ ಕನ್ನಡ ವ್ಯಾಕರಣ ಪಾಠ ಮಾಡಿ, ಮೊರಾರ್ಜಿ ವಸತಿ ಶಾಲೆಯಲ್ಲಿ ಊಟ ಸವಿದ ಸಿಎಂ
ಮುಡಾ, ವಾಲ್ಮೀಕಿ ಹಗರಣದ ಜೊತೆ ಬೆಲೆ ಏರಿಕೆ ಬಿಸಿ ರಾಜ್ಯ ರಾಜಕಾರಣದಲ್ಲಿ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಅದರಲ್ಲೂ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಪತ್ನಿ ಹೆಸರು ಕೇಳಿಬಂದಿದೆ. ಈ ಬಗ್ಗೆ ವಿಪಪಕ್ಷಗಳಾದ ಜೆಡಿಎಸ್ ಮತ್ತು ಬಿಜೆಪಿ ಸಿದ್ದರಾಮಯ್ಯ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದು, ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಆದ್ರೆ, ಸಿದ್ದರಾಮಯ್ಯ ಈ ಎಲ್ಲಾ ರಾಜಕೀಯ ಜಂಜಾಟ ಮರೆತು ಶಾಲೆಗೆ ತೆರಳಿ ವಿದ್ಯಾರ್ಥಿಗಳಿಗೆ ಕನ್ನಡ ವ್ಯಾಕರಣ ಪಾಠ ಮಾಡಿದ್ದಾರೆ. ಅಲ್ಲದೇ ಅವರೊಂದಿಗೆ ಬೋಜನೆ ಸೇವಿಸಿ ರಿಲ್ಯಾಕ್ಸ್ ಆಗಿದ್ದಾರೆ.