- Kannada News Photo gallery concrete mixer truck topples on wager car in Bengaluru Pune national highway News In kannada
ಚಲಿಸುತ್ತಿದ್ದ ಕಾರಿನ ಮೇಲೆ ಮುಗುಚಿ ಬಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿ, ಕಾರು ಅಪ್ಪಚ್ಚಿ..!
ಇತ್ತೀಚೆಗಷ್ಟೇ ಬೆಂಗಳೂರಿನ ಹೊರವಲಯದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕಂಟೈನರ್ ಲಾರಿ ಬಿದ್ದು ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದರು. ಅದೇ ಮಾದರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿ ಮುಗುಚಿ ಬಿದ್ದಿದೆ. ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಬಳಿ ಸರ್ವಿಸ್ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಕಾರಿನೊಳಗೆ ಸಿಲುಕಿ ಒದ್ದಾಡುತ್ತಿದ್ದ ಇಬ್ಬರನ್ನು ಎರಡು ಕ್ರೇನ್ ಮೂಲಕ ರಕ್ಷಣೆ ಮಾಡಲಾಗಿದೆ. ಇನ್ನು ಕಾರಿನ ಸ್ಥಿತಿ ನೋಡಿದ್ರೆ ನಿಜಕ್ಕೂ ಭಯಾನಕವಾಗಿದೆ.
Updated on: Mar 15, 2025 | 12:04 PM

ಬೆಳಗಾವಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಕಾರಿನ ಮೇಲೆಯೇ ಕಾಂಕ್ರಿಟ್ ಮಿಕ್ಸರ್ ಲಾರಿ ಮಗುಚಿ ಬಿದ್ದಿದೆ. ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಬಳಿ ಸರ್ವಿಸ್ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಕಾಂಕ್ರಿಟ್ ಲಾರಿ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಅಪ್ಪಚ್ಚಿಯಾಗಿದ್ದು, ಕಾರಿನೊಳಗೆ ಇಬ್ಬರು ಸಿಲುಕಿಕೊಂಡು ನರಳಾಡಿದ್ದಾರೆ.

ತಮ್ಮನು ರಕ್ಷಿಸುವಂತೆ ಕೈ ಬೀಸಿ ಕೂಗಿಕೊಂಡಿದ್ದಾರೆ. ಕೂಡಲೇ ಸಾರ್ವಜನಿಕರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರಿನಲ್ಲಿದ್ದ ಇಬ್ಬರನ್ನು ಹೊರತೆಗೆದು ರಕ್ಷಿಸಿದ್ದಾರೆ.

ಬೆಳಗಾವಿ ನಗರ ಹೊರವಲಯದ ಕೆಎಲ್ಇ ಆಸ್ಪತ್ರೆ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ಅಪ್ಪಚ್ಚಿಯಾದೆ. ಆದರೂ ಸಹ ಕಾರಿನಲ್ಲಿದ್ದ ಪರಪ್ಪ ಬಾಳೆಕಾಯಿ, ನಿಂಗಪ್ಪ ಕೊಪ್ಪದ ಬದುಕುಳಿದಿದ್ದಾರೆ.

ಕಾಂಕ್ರೀಟ್ ಮಿಕ್ಸರ್ ಲಾರಿ ಮುಗುಚಿ ಬಿದ್ದ ಪರಿಣಾಮ ಕೆಎ -25 ಎಂಡಿ 6506 ನಂಬರಿನ ವೆಗನರ್ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಯಾವ ರೀತಿ ಅಂದ್ರೆ, ಮುದ್ದೆ ರೀತಿಯಾಗಿದೆ. ಯಾವ ಪಾರ್ಟ್ ಸಹ ಸರಿಯಾಗಿ ಉಳಿದಿಲ್ಲ.

ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಡೆದ ಈ ಘನಘೋರ ದುರಂತದಲ್ಲಿ ಕಾರಿನಲ್ಲೇ ಸಿಲುಕಿ ಹಾಕಿ ಒದ್ದಾಡುತ್ತಿದ್ದ ಇಬ್ಬರನ್ನು ಕೇವಲ 15 ನಿಮಿಷದಲ್ಲೇ ಕಾರ್ಯಚರಣೆ ನಡೆಸಿದ್ದಾರೆ. ಪರಿಣಮಾ ಈ ಕಾರಿನಲ್ಲಿದ್ದ ಇಬ್ಬರ ಜೀವ ಉಳಿಯಲು ಸಾಧ್ಯವಾಗಿದೆ.

ಕಾರು ಅಪ್ಪಚ್ಚಿಯಾಗಿದ್ದರಿಂದ ಮನುಷ್ಯರ ಕೈಯಿಂದ ಕಾರ್ಯಚರಣೆ ನಡೆಸುವುದು ಕಷ್ಟವಾಗಿತ್ತು. ಈ ಹಿನ್ನೆಲೆಯಲ್ಲಿ ಎರಡು ಕ್ರೇನ್ಗಳನ್ನು ಸ್ಥಳಕ್ಕೆ ಕರೆಯಿಸಿ ಅದರ ಮೂಲಕ ಕಾರಿನ ಪಾರ್ಟ್ಸ್ಗಳನ್ನು ಬಿಡಿ ಬಿಡಿ ಮಾಡಿ ಇಬ್ಬರನ್ನು ರಕ್ಷಣೆ ಮಾಡಲಾಗಿದೆ.

ಅಗ್ನಿಶಾಮಕ ಸಿಬ್ಬಂದಿ ಹಾಗೂ ಸಾರ್ವಜನಕರು ಸೇರಿಕೊಂಡು ಕೇವಲ 15 ನಿಮಿಷಗಳಲ್ಲೇ ರಕ್ಷಣೆ ಕಾರ್ಯಚರಣೆ ಮಾಡಿ ಕಾರಿನಲ್ಲಿದ್ದ ಇಬ್ಬರನ್ನು ಹೊರ ತೆಗೆಯುತ್ತಿದಿದ್ದಾರೆ. ಸದ್ಯ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಸಿಲುಕಿಹಾಕಿಕೊಂಡಿದ್ದ ಪರಪ್ಪ ಬಾಳೆಕಾಯಿ, ನಿಂಗಪ್ಪ ಕೊಪ್ಪದ ಎಂದು ಗುರುತಿಸಲಾಗಿದ್ದು, ಅದೃಷ್ಟವಶಾತ್ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಸ್ಥಿತಿ ನೋಡಿದರೆ ಇಬ್ಬರೂ ಸಹ ಒಳಗೆ ಅಪ್ಪಚ್ಚಿಯಾಗಬೇಕಿತ್ತು. ಇವರಿಬ್ಬರ ಪಾಲಿಗೆ ದೇವರಿದ್ದರಿಂದ ಬದುಕುಳಿದಿದ್ದಾರೆ.

ಇತ್ತೀಚೆಗಷ್ಟೇ ಬೆಂಗಳೂರಿನ ಹೊರವಲಯದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕಂಟೈನರ್ ಲಾರಿ ಬಿದ್ದು ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದರು. ಅದೇ ರೀತಿಯಲ್ಲೇ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಬಳಿ ಸರ್ವಿಸ್ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿ ಮುಗುಚಿ ಬಿದ್ದಿದೆ.



