Kannada News Photo gallery Congress Leaders celebrates KPCC President dk shivakumar birthday During Legislature Party meet In Bengaluru
DK Shivakumar Birthday: ಸಿಎಂ ಕುರ್ಚಿ ಜಟಾಪಟಿ ಮಧ್ಯೆ ಅದ್ದೂರಿಯಾಗಿ ಡಿಕೆ ಶಿವಕುಮಾರ್ ಹುಟ್ಟುಹಬ್ಬ ಆಚರಿಸಿದ ಕಾಂಗ್ರೆಸ್ ನಾಯಕರು
ಕಾಂಗ್ರೆಸ್ ಕರ್ನಾಟಕ ಕುರುಕ್ಷೇತ್ರ ಗೆದ್ದಾಗಿದೆ. ಪ್ರಚಂಡ ಬಹುಮತ ಪಡೆದಿರೋ ಕಾಂಗ್ರೆಸ್‌ನಲ್ಲಿ ಇದೀಗ ಸಿಎಂ ಕುರ್ಚಿ ಫೈಟ್ ತೀವ್ರಗೊಂಡಿದೆ. ಕೆಪಿಸಿಸಿ ಸಾರಥಿ ಡಿಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಕುರ್ಚಿಗಾಗಿ ಪಟ್ಟು ಹಿಡಿದಿದ್ದಾರೆ. ಚುನಾವಣೆಗೂ ಮುನ್ನ ಒಗ್ಗಟ್ಟಿನ ಮಂತ್ರ ಜಪಿಸಿದ ಉಭಯ ನಾಯಕರು ಈಗ ಸಿಎಂ ಕುರ್ಚಿಗೆ ಪಟ್ಟು ಬಿಗಿಗೊಳಿಸಿದ್ದಾರೆ. ಸಿಎಂ ಹುದ್ದೆಯ ಪೈಪೋಟಿ ನಡುವೆಯೂ ಕಾಂಗ್ರೆಸ್ ನಾಯಕರು ಡಿಕೆ ಶಿವಕುಮಾರ್ ಅವರಿಗೆ ಕೇಕ್ ತಿನ್ನಿಸಿ ಹುಟ್ಟುಹಬ್ಬದ ಶಭಾಶಯ ಕೋರಿದರು.