Test Records: ಕೇವಲ 1 ರನ್​ನಿಂದ ಟೆಸ್ಟ್ ಪಂದ್ಯ ಗೆದ್ದ ತಂಡಗಳು ಯಾವುವು ಗೊತ್ತಾ?

Test Cricket Records: 2ನೇ ಇನಿಂಗ್ಸ್​ನಲ್ಲಿ 185 ರನ್​ಗಳ ಟಾರ್ಗೆಟ್ ಪಡೆದ ಆಸ್ಟ್ರೇಲಿಯಾ ತಂಡವನ್ನು 184 ರನ್​ಗಳಿಗೆ ಆಲೌಟ್ ಮಾಡಿ ವೆಸ್ಟ್ ಇಂಡೀಸ್ ತಂಡವು 1 ರನ್​ಗಳ ರೋಚಕ ಜಯ ತನ್ನದಾಗಿಸಿಕೊಂಡಿತ್ತು.

| Updated By: ಝಾಹಿರ್ ಯೂಸುಫ್

Updated on: Feb 28, 2023 | 2:58 PM

ವೆಲ್ಲಿಂಗ್ಟನ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕೇವಲ 1 ರನ್​ನಿಂದ ಜಯ ಸಾಧಿಸಿ ನ್ಯೂಜಿಲೆಂಡ್ ತಂಡವು ಹೊಸ ಇತಿಹಾಸ ನಿರ್ಮಿಸಿದೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಫಾಲೋಆನ್​ ಹೇರಿತ್ತು. ಇದಾಗ್ಯೂ ದ್ವಿತೀಯ ಇನಿಂಗ್ಸ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ನ್ಯೂಜಿಲೆಂಡ್ ತಂಡವು 483 ರನ್​ಗಳಿಸಿತ್ತು.

1 / 6
ಮೊದಲ ಇನಿಂಗ್ಸ್ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 257 ರನ್​ಗಳ ಟಾರ್ಗೆಟ್​ ಅನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡವು 256 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಕೇವಲ 1 ರನ್​ನಿಂದ ಜಯ ಸಾಧಿಸಿದ 2ನೇ ತಂಡ ಎಂಬ ದಾಖಲೆಯೊಂದು ನ್ಯೂಜಿಲೆಂಡ್ ತಂಡದ ಪಾಲಾಯಿತು.

2 / 6
ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ತಂಡವು ಟೆಸ್ಟ್ ಕ್ರಿಕೆಟ್​ನಲ್ಲಿ ಕೇವಲ 1 ರನ್​ನಿಂದ ಜಯ ಸಾಧಿಸಿ ಇತಿಹಾಸ ನಿರ್ಮಿಸಿತ್ತು. 1993 ರಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿ ವೆಸ್ಟ್ ಇಂಡೀಸ್ 252 ರನ್​ ಕಲೆಹಾಕಿತ್ತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಆಸ್ಟ್ರೇಲಿಯಾ 213 ರನ್​ಗಳಿಗೆ ಆಲೌಟ್ ಆಗಿತ್ತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ವೆಸ್ಟ್ ಇಂಡೀಸ್ ತಂಡವು ಕೇವಲ 146 ರನ್​ಗಳಿಗೆ ಆಲೌಟ್ ಆಗಿದ್ದರು. ಅದರಂತೆ 2ನೇ ಇನಿಂಗ್ಸ್​ನಲ್ಲಿ 185 ರನ್​ಗಳ ಟಾರ್ಗೆಟ್ ಪಡೆದ ಆಸ್ಟ್ರೇಲಿಯಾ ತಂಡವನ್ನು 184 ರನ್​ಗಳಿಗೆ ಆಲೌಟ್ ಮಾಡಿ, ವೆಸ್ಟ್ ಇಂಡೀಸ್ ತಂಡವು  1 ರನ್​ಗಳ ರೋಚಕ ಜಯ ತನ್ನದಾಗಿಸಿಕೊಂಡಿತ್ತು.

3 / 6
ವೆಸ್ಟ್ ಇಂಡೀಸ್ ಹಾಗೂ ನ್ಯೂಜಿಲೆಂಡ್ ತಂಡಗಳನ್ನು ಹೊರತುಪಡಿಸಿ ಮತ್ಯಾವುದೇ ತಂಡ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 1 ರನ್​ಗಳಿಂದ ಜಯ ಸಾಧಿಸಿಲ್ಲ. ಇದಾಗ್ಯೂ 2 ರನ್​ಗಳ ರೋಚಕ ಜಯ ತನ್ನದಾಗಿಸಿಕೊಳ್ಳುವಲ್ಲಿ ಒಮ್ಮೆ ಇಂಗ್ಲೆಂಡ್ ತಂಡ ಯಶಸ್ವಿಯಾಗಿದೆ.

4 / 6
2005 ರಲ್ಲಿ ನಡೆದ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್ ಪಂದ್ಯದಲ್ಲಿ ಮೈಕಲ್ ವಾನ್ ಪಡೆಯು ರೋಚಕ ಜಯ ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 407 ರನ್​ ಪೇರಿಸಿತ್ತು. ಇನ್ನು ಆಸೀಸ್ ತಂಡವು ಮೊದಲ ಇನಿಂಗ್ಸ್​ನಲ್ಲಿ ಕಲೆಹಾಕಿದ್ದು 308 ರನ್​ಗಳು. ದ್ವಿತೀಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ತಂಡವು ಕೇವಲ 182 ರನ್​ಗಳಿಗೆ ಆಲೌಟ್ ಆಗಿತ್ತು. ಅದರಂತೆ ಅಂತಿಮ ಇನಿಂಗ್ಸ್​ನಲ್ಲಿ 281 ರನ್​ಗಳ ಟಾರ್ಗೆಟ್ ಪಡೆದ ಆಸ್ಟ್ರೇಲಿಯಾ ತಂಡವು 279 ರನ್​ಗಳಿಗೆ ಸರ್ಪಪತನ ಕಂಡಿತು. ಇದರೊಂದಿಗೆ ಇಂಗ್ಲೆಂಡ್ ತಂಡವು ಕೇವಲ 2 ರನ್​ಗಳ ರೋಚಕ ಜಯ ಸಾಧಿಸಿ ಸಂಭ್ರಮಿಸಿತು.

5 / 6
ಇನ್ನು ಟೀಮ್ ಇಂಡಿಯಾ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಕಡಿಮೆ ರನ್​ಗಳ ಅಂತರದಿಂದ ಗೆದ್ದಿರುವುದು ಆಸ್ಟ್ರೇಲಿಯಾ ವಿರುದ್ಧ. 2004 ರಲ್ಲಿ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕೇವಲ 104 ರನ್​ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಆಸ್ಟ್ರೇಲಿಯಾ ತಂಡವು 203 ರನ್​ ಕಲೆಹಾಕಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಕಲೆಹಾಕಿದ್ದು 205 ರನ್​ಗಳು. ಅಂತಿಮ ಇನಿಂಗ್ಸ್​ನಲ್ಲಿ 106 ರನ್​ಗಳ ಟಾರ್ಗೆಟ್ ಪಡೆದ ಆಸ್ಟ್ರೇಲಿಯಾ ತಂಡವನ್ನು 93 ರನ್​ಗಳಿಗೆ ಆಲೌಟ್ ಮಾಡಿದ ಟೀಮ್ ಇಂಡಿಯಾ, 13 ರನ್​ಗಳಿಂದ ರೋಚಕ ಜಯ ಸಾಧಿಸಿತ್ತು. ಇದು ಟೆಸ್ಟ್ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಸಾಧಿಸಿದ ರೋಚಕ ಜಯವಾಗಿದೆ.

6 / 6
Follow us
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?

ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್

ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ

ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ

‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು

ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ

ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ

ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ

ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ

ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ