
ವೆಲ್ಲಿಂಗ್ಟನ್ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕೇವಲ 1 ರನ್ನಿಂದ ಜಯ ಸಾಧಿಸಿ ನ್ಯೂಜಿಲೆಂಡ್ ತಂಡವು ಹೊಸ ಇತಿಹಾಸ ನಿರ್ಮಿಸಿದೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಫಾಲೋಆನ್ ಹೇರಿತ್ತು. ಇದಾಗ್ಯೂ ದ್ವಿತೀಯ ಇನಿಂಗ್ಸ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ನ್ಯೂಜಿಲೆಂಡ್ ತಂಡವು 483 ರನ್ಗಳಿಸಿತ್ತು.

ಮೊದಲ ಇನಿಂಗ್ಸ್ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ನಲ್ಲಿ ಕೇವಲ 257 ರನ್ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡವು 256 ರನ್ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಕೇವಲ 1 ರನ್ನಿಂದ ಜಯ ಸಾಧಿಸಿದ 2ನೇ ತಂಡ ಎಂಬ ದಾಖಲೆಯೊಂದು ನ್ಯೂಜಿಲೆಂಡ್ ತಂಡದ ಪಾಲಾಯಿತು.

ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ತಂಡವು ಟೆಸ್ಟ್ ಕ್ರಿಕೆಟ್ನಲ್ಲಿ ಕೇವಲ 1 ರನ್ನಿಂದ ಜಯ ಸಾಧಿಸಿ ಇತಿಹಾಸ ನಿರ್ಮಿಸಿತ್ತು. 1993 ರಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿ ವೆಸ್ಟ್ ಇಂಡೀಸ್ 252 ರನ್ ಕಲೆಹಾಕಿತ್ತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಆಸ್ಟ್ರೇಲಿಯಾ 213 ರನ್ಗಳಿಗೆ ಆಲೌಟ್ ಆಗಿತ್ತು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ ವೆಸ್ಟ್ ಇಂಡೀಸ್ ತಂಡವು ಕೇವಲ 146 ರನ್ಗಳಿಗೆ ಆಲೌಟ್ ಆಗಿದ್ದರು. ಅದರಂತೆ 2ನೇ ಇನಿಂಗ್ಸ್ನಲ್ಲಿ 185 ರನ್ಗಳ ಟಾರ್ಗೆಟ್ ಪಡೆದ ಆಸ್ಟ್ರೇಲಿಯಾ ತಂಡವನ್ನು 184 ರನ್ಗಳಿಗೆ ಆಲೌಟ್ ಮಾಡಿ, ವೆಸ್ಟ್ ಇಂಡೀಸ್ ತಂಡವು 1 ರನ್ಗಳ ರೋಚಕ ಜಯ ತನ್ನದಾಗಿಸಿಕೊಂಡಿತ್ತು.

ವೆಸ್ಟ್ ಇಂಡೀಸ್ ಹಾಗೂ ನ್ಯೂಜಿಲೆಂಡ್ ತಂಡಗಳನ್ನು ಹೊರತುಪಡಿಸಿ ಮತ್ಯಾವುದೇ ತಂಡ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 1 ರನ್ಗಳಿಂದ ಜಯ ಸಾಧಿಸಿಲ್ಲ. ಇದಾಗ್ಯೂ 2 ರನ್ಗಳ ರೋಚಕ ಜಯ ತನ್ನದಾಗಿಸಿಕೊಳ್ಳುವಲ್ಲಿ ಒಮ್ಮೆ ಇಂಗ್ಲೆಂಡ್ ತಂಡ ಯಶಸ್ವಿಯಾಗಿದೆ.

2005 ರಲ್ಲಿ ನಡೆದ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್ ಪಂದ್ಯದಲ್ಲಿ ಮೈಕಲ್ ವಾನ್ ಪಡೆಯು ರೋಚಕ ಜಯ ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 407 ರನ್ ಪೇರಿಸಿತ್ತು. ಇನ್ನು ಆಸೀಸ್ ತಂಡವು ಮೊದಲ ಇನಿಂಗ್ಸ್ನಲ್ಲಿ ಕಲೆಹಾಕಿದ್ದು 308 ರನ್ಗಳು. ದ್ವಿತೀಯ ಇನಿಂಗ್ಸ್ನಲ್ಲಿ ಇಂಗ್ಲೆಂಡ್ ತಂಡವು ಕೇವಲ 182 ರನ್ಗಳಿಗೆ ಆಲೌಟ್ ಆಗಿತ್ತು. ಅದರಂತೆ ಅಂತಿಮ ಇನಿಂಗ್ಸ್ನಲ್ಲಿ 281 ರನ್ಗಳ ಟಾರ್ಗೆಟ್ ಪಡೆದ ಆಸ್ಟ್ರೇಲಿಯಾ ತಂಡವು 279 ರನ್ಗಳಿಗೆ ಸರ್ಪಪತನ ಕಂಡಿತು. ಇದರೊಂದಿಗೆ ಇಂಗ್ಲೆಂಡ್ ತಂಡವು ಕೇವಲ 2 ರನ್ಗಳ ರೋಚಕ ಜಯ ಸಾಧಿಸಿ ಸಂಭ್ರಮಿಸಿತು.

ಇನ್ನು ಟೀಮ್ ಇಂಡಿಯಾ ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಕಡಿಮೆ ರನ್ಗಳ ಅಂತರದಿಂದ ಗೆದ್ದಿರುವುದು ಆಸ್ಟ್ರೇಲಿಯಾ ವಿರುದ್ಧ. 2004 ರಲ್ಲಿ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕೇವಲ 104 ರನ್ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಆಸ್ಟ್ರೇಲಿಯಾ ತಂಡವು 203 ರನ್ ಕಲೆಹಾಕಿತು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಕಲೆಹಾಕಿದ್ದು 205 ರನ್ಗಳು. ಅಂತಿಮ ಇನಿಂಗ್ಸ್ನಲ್ಲಿ 106 ರನ್ಗಳ ಟಾರ್ಗೆಟ್ ಪಡೆದ ಆಸ್ಟ್ರೇಲಿಯಾ ತಂಡವನ್ನು 93 ರನ್ಗಳಿಗೆ ಆಲೌಟ್ ಮಾಡಿದ ಟೀಮ್ ಇಂಡಿಯಾ, 13 ರನ್ಗಳಿಂದ ರೋಚಕ ಜಯ ಸಾಧಿಸಿತ್ತು. ಇದು ಟೆಸ್ಟ್ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಸಾಧಿಸಿದ ರೋಚಕ ಜಯವಾಗಿದೆ.