- TV9 Kannada Photo gallery Cricket photos Vaibhav Sooryavanshi: Youngest Batsman to Score T20I Fifty, India vs Zimbabwe Thriller
IND vs ZIM: 18 ಎಸೆತಗಳಲ್ಲಿ ಅರ್ಧಶತಕ; ಹೊಸ ಇತಿಹಾಸ ನಿರ್ಮಿಸಿದ ವೈಭವ್
Vaibhav Sooryavanshi: ಇಂಗ್ಲೆಂಡ್ ವಿರುದ್ಧ ಕಳಪೆ ಪ್ರದರ್ಶನ ನೀಡಿದ್ದ ವೈಭವ್ ಸೂರ್ಯವಂಶಿ, ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸಿದ್ದಾರೆ. ಕೇವಲ 18 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಗಳಿಸಿ, ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಅತಿ ಕಿರಿಯ ವಯಸ್ಸಿನಲ್ಲಿ (15 ವರ್ಷ, 118 ದಿನ) ಅರ್ಧಶತಕ ಸಿಡಿಸಿದ ಬ್ಯಾಟ್ಸ್ಮನ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ತಮ್ಮ ಚೊಚ್ಚಲ ಅರ್ಧಶತಕದ ಮೂಲಕ ಇತಿಹಾಸ ಬರೆದಿದ್ದಾರೆ.
Updated on: Jul 23, 2026 | 7:35 PM

ಇಂಗ್ಲೆಂಡ್ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದ 15 ವರ್ಷದ ವೈಭವ್ ಸೂರ್ಯವಂಶಿಗೆ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ. ಇಂಗ್ಲೆಂಡ್ ಪ್ರವಾಸದಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ವೈಭವ್ಗೆ 20 ರನ್ಗಳ ಗಡಿ ದಾಟಲು ಸಾಧ್ಯವಾಗಿರಲಿಲ್ಲ. ಆದರೆ ಜಿಂಬಾಬ್ವೆ ವಿರುದ್ಧ ಮಿಂಚಿದ ವೈಭವ್ ಮೊದಲ ಟಿ20 ಪಂದ್ಯದಲ್ಲಿ ಸ್ಫೋಟಕ ಅರ್ಧಶತಕ ಬಾರಿಸಿದರು(PC-BCCI).

ವೈಭವ್ ಸೂರ್ಯವಂಶಿ ಕೇವಲ 18 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಗಳಿಸುವ ಮೂಲಕ ಇತಿಹಾಸ ನಿರ್ಮಿಸಿದರು. ಇದು ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ವೈಭವ್ ಅವರ ಮೊದಲ ಅರ್ಧಶತಕವಾಗಿದ್ದು, ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಅರ್ಧಶತಕ ಗಳಿಸಿದ ಅತ್ಯಂತ ಕಿರಿಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವೈಭವ್ ಕೇವಲ 15 ವರ್ಷ ಮತ್ತು 118 ದಿನಗಳ ವಯಸ್ಸಿನಲ್ಲಿ ಈ ಸಾಧನೆ ಮಾಡಿದರು(PC-BCCI).

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ 20 ಓವರ್ಗಳಲ್ಲಿ 7 ವಿಕೆಟ್ಗೆ 125 ರನ್ ಗಳಿಸಿತು. ತಂಡದ ಪರ ವೆಸ್ಲಿ ಮಾಧೇವೆರೆ 39 ಮತ್ತು ಮರುಮಾನಿ 27 ರನ್ಗಳ ಇನ್ನಿಂಗ್ಸ್ ಆಡಿದರು. ಈ ಗುರಿ ಬೆನ್ನಟ್ಟಲು ಭಾರತದ ಪರ ಅಭಿಷೇಕ್ ಶರ್ಮಾ ಹಾಗೂ ವೈಭವ್ ಸೂರ್ಯವಂಶಿ ಇನ್ನಿಂಗ್ಸ್ ಆರಂಭಿಸಿದರು(PC-BCCI).

ಮೊದಲ ಓವರ್ನಲ್ಲಿ ಸಿಂಗಲ್ ಮೂಲಕ ತಮ್ಮ ಖಾತೆ ತೆರೆದ ವೈಭವ್ ಆ ಬಳಿಕ ತಮ್ಮ ಎಂದಿನ ಶೈಲಿಯ ಬ್ಯಾಟಿಂಗ್ ಆರಂಭಿಸಿದರು. ಈ ಓವರ್ನಲ್ಲಿ 2 ಸಿಕ್ಸರ್ ಹಾಗೂ 1 ಬೌಂಡರಿಯನ್ನು ಬಾರಿಸಿದರು. ಆದರೆ 3ನೇ ಓವರ್ನಲ್ಲಿ ಅಭಿಷೇಕ್ ಶರ್ಮಾ ಕೇವಲ 1 ರನ್ ಗಳಿಸಿ ಔಟಾದರು(PC-BCCI).

ಆದಾಗ್ಯೂ ತನ್ನ ಹೊಡಿಬಡಿ ಆಟವನ್ನು ಮುಂದುವರೆಸಿದ ವೈಭವ್ ನಾಲ್ಕನೇ ಓವರ್ನಲ್ಲೂ 1 ಬೌಂಡರಿ ಹಾಗೂ 1 ಸಿಕ್ಸರ್ ಬಾರಿಸಿದರು. 5ನೇ ಓವರ್ನಲ್ಲೂ 2 ಬೌಂಡರಿ ಹಾಗೂ 1 ಸಿಕ್ಸರ್ ಬಾರಿಸಿದರು. 7ನೇ ಓವರ್ನ 2ನೇ ಎಸೆತದಲ್ಲಿ 2 ರನ್ಗಳನ್ನು ಕಲೆಹಾಕುವ ಮೂಲಕ ವೈಭವ್ ತಮ್ಮ ವೃತ್ತಿಜೀವನದ ಮೊದಲ ಅರ್ಧಶತಕವನ್ನು ಪೂರೈಸಿದರು(PC-BCCI).

ಆದರೆ ಅರ್ಧಶತಕದ ಬೆನ್ನಲ್ಲೇ ವೈಭವ್ ವಿಕೆಟ್ ಒಪ್ಪಿಸಿದರು. 7ನೇ ಓವರ್ನ 2ನೇ ಎಸೆತದಲ್ಲಿ ವೈಭವ್ ಸಿಕ್ಸರ್ ಬಾರಿಸುವ ಯತ್ನದಲ್ಲಿ ಕ್ಯಾಚ್ ನೀಡಿದರು. ಅಂತಿಮವಾಗಿ ವೈಭವ್ 19 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 50 ರನ್ ಬಾರಿಸಿ ಔಟಾದರು(PC-BCCI).




