AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

93 ವರ್ಷಗಳಲ್ಲೇ ಇದೇ ಮೊದಲ ಬಾರಿ… ಇದು ಟೀಮ್ ಇಂಡಿಯಾದ ಅಂತಿಂಥ ಗೆಲುವಲ್ಲ..!

India vs England: ಓವಲ್ ಮೈದಾನದಲ್ಲಿ ನಡೆದ 5ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 224 ರನ್​ಗಳಿಸಿದರೆ, ಇಂಗ್ಲೆಂಡ್ 247 ರನ್​ಗಳಿಸಿ ಆಲೌಟ್ ಆಗಿತ್ತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಭಾರತ ತಂಡ 396 ರನ್​ ಕಲೆಹಾಕಿದ್ದರು. ಇತ್ತ ಮೊದಲ ಇನಿಂಗ್ಸ್​ನಲ್ಲಿನ 23 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 374 ರನ್​ಗಳ ಗುರಿ ಪಡೆದ ಇಂಗ್ಲೆಂಡ್ ತಂಡವು 367 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 6 ರನ್​ಗಳ ರೋಚಕ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Aug 05, 2025 | 7:09 AM

Share
IND vs ENG: ಭಾರತ ತಂಡ ಟೆಸ್ಟ್ ಕ್ರಿಕೆಟ್ ಆಡಲು ಶುರುವಾಗಿ 93 ವರ್ಷಗಳಾಗಿವೆ. ಈ ತೊಂಬತ್ತಮೂರು ವರ್ಷಗಳಲ್ಲಿ ಟೀಮ್ ಇಂಡಿಯಾ 593 ಪಂದ್ಯಗಳನ್ನಾಡಿದೆ. ಆದರೆ ಹಿಂದೆಂದೂ ಕಂಡರಿಯದ, ಕೇಳರಿಯದ ರೀತಿಯಲ್ಲಿ ಇದೇ ಮೊದಲ ಬಾರಿಗೆ ಭಾರತ ತಂಡ ಗೆಲುವು ದಾಖಲಿಸಿದೆ. ಅದು ಸಹ ಕೇವಲ ಒಂದಂಕಿ ರನ್​ಗಳ ಅಂತರದಿಂದ..!

1 / 5
ಹೌದು, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಟೀಮ್ ಇಂಡಿಯಾ ಇದೇ ಮೊದಲ ಬಾರಿಗೆ ಒಂದಂಕಿ ರನ್​ ಅಂತರದಿಂದ ಗೆಲುವು ದಾಖಲಿಸಿದೆ. ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಅಂತಿಮ ಪಂದ್ಯದಲ್ಲಿ ಕೇವಲ 6 ರನ್​ಗಳ ಅಂತರದಿಂದ ಜಯ ಸಾಧಿಸಿ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ.

2 / 5
ಇದಕ್ಕೂ ಮುನ್ನ, 2004 ರಲ್ಲಿ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ 13 ರನ್​ಗಳ ಅಂತರದಿಂದ ಜಯ ಸಾಧಿಸಿದ್ದು ಈವರೆಗಿನ ಶ್ರೇಷ್ಠ ಗೆಲುವಾಗಿತ್ತು. ಆದರೆ ಈ ಬಾರಿ ಯಂಗ್ ಇಂಡಿಯಾ ಹುಡುಗರು ಹೊಸ ಇತಿಹಾಸ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅದು ಸಹ ಆತಿಥೇಯ ಆಂಗ್ಲರ ವಿರುದ್ಧ 6 ರನ್​ಗಳ ರೋಚಕ ಜಯ ಸಾಧಿಸುವ ಮೂಲಕ ಎಂಬುದು ವಿಶೇಷ.

3 / 5
ಹಾಗೆಯೇ 148 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಇದು 9ನೇ ಅತೀ ಕಡಿಮೆ ಅಂತರದ ಗೆಲುವು. ಈ ಪಟ್ಟಿಯಲ್ಲಿ 1 ರನ್​ಗಳ ಅಂತರದಿಂದ ಟೆಸ್ಟ್ ಪಂದ್ಯ ಗೆದ್ದಿದ್ದ ವೆಸ್ಟ್ ಇಂಡೀಸ್ ಹಾಗೂ ನ್ಯೂಝಿಲೆಂಡ್ ತಂಡಗಳು ಅಗ್ರಸ್ಥಾನಗಳಲ್ಲಿವೆ. ಇದೀಗ 6 ರನ್​ಗಳ ಅಂತರದಿಂದ ಗೆಲುವು ದಾಖಲಿಸಿ ಒಂದಂಕಿ ರನ್ ವಿಜಯ ಸಾಧಿಸಿದ ತಂಡಗಳ ಪಟ್ಟಿಯಲ್ಲೂ ಟೀಮ್ ಇಂಢಿಯಾ ಸ್ಥಾನ ಪಡೆದುಕೊಂಡಿದೆ.

4 / 5
ಇಂಗ್ಲೆಂಡ್ ವಿರುದ್ಧದ ಈ ರೋಚಕ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸರಣಿಯನ್ನು ಡ್ರಾನಲ್ಲಿ ಅಂತ್ಯಗೊಳಿಸಿದೆ. 5 ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಇಂಗ್ಲೆಂಡ್ 5 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಟೀಮ್ ಇಂಡಿಯಾ 336 ರನ್​ಗಳ ಅಮೋಘ ಗೆಲುವು ದಾಖಲಿಸಿತ್ತು. ಮೂರನೇ ಮ್ಯಾಚ್​ನಲ್ಲಿ ಇಂಗ್ಲೆಂಡ್ ತಂಡವು 22 ರನ್​ಗಳ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದ್ದರು. ನಾಲ್ಕ ನೇ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತ್ತು. ಇದೀಗ ಐದನೇ ಮ್ಯಾಚ್​ನಲ್ಲಿ 6 ರನ್​ಗಳ ಐತಿಹಾಸಿಕ ವಿಜಯ ಸಾಧಿಸಿ ಟೀಮ್ ಇಂಡಿಯಾ ಸರಣಿಯನ್ನು 2-2 ಅಂತರದಿಂದ ಡ್ರಾನಲ್ಲಿ ಅಂತ್ಯಗೊಳಿಸುವಲ್ಲಿ ಯಶಸ್ವಿಯಾಗಿದೆ.

5 / 5
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ

ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್

ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ

ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ

ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್