Updated on: Jan 01, 2022 | 5:19 PM
ಟೆಸ್ಟ್ ಕ್ರಿಕೆಟ್‌ನಲ್ಲಿ ಪ್ರತಿಯೊಬ್ಬ ಬ್ಯಾಟರ್ ಶಿಸ್ತುಬದ್ಧವಾಗಿ ಆಡುವತ್ತ ಹೆಚ್ಚಿನ ಗಮನ ನೀಡುತ್ತಾರೆ. ರಕ್ಷಣಾತ್ಮಕ ಆಟದೊಂದಿಗೆ ಫೋರ್ಗಳನ್ನು ಬಾರಿಸಲು ಹೆಚ್ಚಿನ ಆಸಕ್ತಿವಹಿಸುತ್ತಾರೆ. ಆದರೆ ಕೆಲ ಬ್ಯಾಟರ್ಗಳು ಟೆಸ್ಟ್ ಕ್ರಿಕೆಟ್ ಅನ್ನೂ ಕೂಡ ತಮ್ಮದೇ ಆದ ಶೈಲಿಯಲ್ಲಿ ಆಡುತ್ತಾರೆ.
ಹೀಗೆ ಸುದೀರ್ಘ ಸ್ವರೂಪದ ಕ್ರಿಕೆಟ್‌ನಲ್ಲಿ ಈ ವರ್ಷ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಐದು ಆಟಗಾರರ ಪಟ್ಟಿ ಹೀಗಿದೆ.
ಈ ಪಟ್ಟಿಯಲ್ಲಿ ಮೂವರು ಭಾರತೀಯ ಆಟಗಾರರು ಇರುವುದು ವಿಶೇಷ. ಹಾಗಿದ್ರೆ ಟೆಸ್ಟ್‌ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಟಾಪ್-5 ಬ್ಯಾಟರ್ಗಳ್ಯಾರು ನೋಡೋಣ...
5- ಶುಭಮನ್ ಗಿಲ್: 2021ರಲ್ಲಿ ಟೆಸ್ಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್-5 ಬ್ಯಾಟರ್ಗಳ ಪಟ್ಟಿಯಲ್ಲಿ ಭಾರತದ ಶುಭಮನ್ ಗಿಲ್ 5ನೇ ಸ್ಥಾನದಲ್ಲಿದ್ದಾರೆ. ಗಿಲ್ ಈ ವರ್ಷ 9 ಟೆಸ್ಟ್ ಪಂದ್ಯಗಳಲ್ಲಿ 17 ಇನ್ನಿಂಗ್ಸ್ ಆಡಿದ್ದಾರೆ. ಈ ವೇಳೆ 8 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.
4- ಕ್ವಿಂಟನ್ ಡಿ ಕಾಕ್: ಕೆಲ ದಿನಗಳ ಹಿಂದೆಯಷ್ಟೇ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿರುವ ದಕ್ಷಿಣ ಆಫ್ರಿಕಾದ ವಿಕೆಟ್-ಕೀಪರ್ ಬ್ಯಾಟರ್ ಡಿಕಾಕ್ ಕಳೆದ ವರ್ಷ 6 ಟೆಸ್ಟ್ ಪಂದ್ಯಗಳಲ್ಲಿ 10 ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಈ ವೇಳೆ ಒಟ್ಟು 8 ಸಿಕ್ಸರ್‌ಗಳನ್ನು ಬಾರಿಸಿದ್ದರು.
3- ಕೈಲ್ ಮೇಯರ್ಸ್: ವೆಸ್ಟ್ ಇಂಡೀಸ್‌ನ ಕೈಲ್ ಮೇಯರ್ಸ್ 2021 ರಲ್ಲಿ ಒಟ್ಟು 10 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಈ ವೇಳೆ 20 ಇನ್ನಿಂಗ್ಸ್‌ಗಳಲ್ಲಿ 10 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಈ ಮೂಲಕ ಈ ಪಟ್ಟಿಯಲ್ಲಿ 3ನೇ ಸ್ಥಾನ ಪಡೆದಿದ್ದಾರೆ.
2- ರೋಹಿತ್ ಶರ್ಮಾ: ಭಾರತದ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ 2021 ರಲ್ಲಿ 11 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಈ ವೇಳೆ 21 ಇನ್ನಿಂಗ್ಸ್‌ಗಳಲ್ಲಿ 11 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಈ ಮೂಲಕ ಕಳೆದ ವರ್ಷದ ಟಾಪ್- 5 ಟೆಸ್ಟ್ ಸಿಕ್ಸರ್ಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ.
1- ರಿಷಭ್ ಪಂತ್: ಟೀಮ್ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ 2021 ರಲ್ಲಿ ಒಟ್ಟು 12 ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ ಒಟ್ಟು 15 ಸಿಕ್ಸರ್‌ಗಳನ್ನು ಬಾರಿಸಿದ್ದರು. ಈ ಮೂಲಕ ಕಳೆದ ವರ್ಷ ಟೆಸ್ಟ್ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ರಿಷಭ್ ಪಂತ್ ಅಗ್ರಸ್ಥಾನ ಅಲಂಕರಿಸಿದ್ದಾರೆ.