ಟೀಮ್ ಇಂಡಿಯಾ ವಿರುದ್ಧದ ಸರಣಿಯಿಂದ ಸ್ಟಾರ್ ಆಟಗಾರರೇ ಔಟ್..!

Updated on: Oct 07, 2025 | 10:24 AM

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಕಾಂಗರೂ ನಾಡಿನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಒಟ್ಟು 8 ಪಂದ್ಯಗಳನ್ನಾಡಲಾಗುತ್ತದೆ. ಮೊದಲಿಗೆ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಇದಾದ ಬಳಿಕ ಟಿ20 ಸರಣಿ ಜರುಗಲಿದೆ.

1 / 6
ಭಾರತದ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗಳಿಗೆ ಆಸ್ಟ್ರೇಲಿಯಾ ತಂಡವನ್ನು ಹೆಸರಿಸಲಾಗಿದೆ. 15 ಸದಸ್ಯರುಗಳ ಈ ತಂಡಗಳನ್ನು ಮಿಚೆಲ್ ಮಾರ್ಷ್ ಮುನ್ನಡೆಸಲಿದ್ದಾರೆ. ಇನ್ನು ಈ ಎರಡು ಸರಣಿಗಳಿಂದ ಆಸ್ಟ್ರೇಲಿಯಾ ಮೂವರು ಸ್ಟಾರ್ ಆಟಗಾರರು ಹೊರಗುಳಿದಿದ್ದಾರೆ. ಅವರೆಂದರೆ...

2 / 6
ಪ್ಯಾಟ್ ಕಮಿನ್ಸ್: ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಟೀಮ್ ಇಂಡಿಯಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಸೊಂಟದ ಮೂಳೆಯ ನೋವಿನಿಂದ ಬಳಲುತ್ತಿರುವ ಕಮಿನ್ಸ್ ಅವರಿಗೆ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಇದೇ ಕಾರಣದಿಂದ ಕಮಿನ್ಸ್ ಮುಂಬರುವ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ.

3 / 6
ಗ್ಲೆನ್ ಮ್ಯಾಕ್ಸ್​ವೆಲ್: ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿರುವ ಗ್ಲೆನ್ ಮ್ಯಾಕ್ಸ್​ವೆಲ್ ಈ ಬಾರಿ ಟಿ20 ತಂಡದಲ್ಲಿ ಸ್ಥಾನ ಪಡೆದಿಲ್ಲ. ಇದಕ್ಕೆ ಮುಖ್ಯ ಕಾರಣ ಗಾಯಗೊಂಡಿರುವುದು. ನ್ಯೂಝಿಲೆಂಡ್ ವಿರುದ್ಧದ ಸರಣಿಗಾಗಿ ಅಭ್ಯಾಸ ನಡೆಸುತ್ತಿದ್ದ ವೇಳೆ ಮ್ಯಾಕ್ಸಿ ಅವರ ಮುಂಗೈ ಮುರಿತಕ್ಕೊಳಗಾಗಿದೆ. ಇದೇ ಕಾರಣದಿಂದಾಗಿ ಅವರು ಸಹ ಭಾರತದ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ.

4 / 6
ಮಾರ್ನಸ್ ಲಾಬುಶೇನ್: ಆಸ್ಟ್ರೇಲಿಯಾ ಏಕದಿನ ತಂಡದ ಖಾಯಂ ಸದಸ್ಯರಾಗಿದ್ದ ಮಾರ್ನಸ್ ಲಾಬುಶೇನ್ ಕಳಪೆ ಫಾರ್ಮ್​​ನಿಂದ ಬಳಲುತ್ತಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಲಾಬುಶೇನ್ ಅವರನ್ನು ಆಯ್ಕೆ ಮಾಡಲಾಗಿಲ್ಲ. ಭಾರತದ ವಿರುದ್ಧದ ಸರಣಿಗೆ ಆಸ್ಟ್ರೇಲಿಯಾ ತಂಡಗಳು ಈ ಕೆಳಗಿನಂತಿದೆ...

5 / 6
ಆಸ್ಟ್ರೇಲಿಯಾ ಏಕದಿನ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಅಲೆಕ್ಸ್ ಕ್ಯಾರಿ, ಕೂಪರ್ ಕೊನೊಲಿ, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಿಚೆಲ್ ಓವನ್, ಮ್ಯಾಥ್ಯೂ ರೆನ್‌ಶಾ, ಮ್ಯಾಥ್ಯೂ ಶಾರ್ಟ್, ಮಿಚೆಲ್ ಸ್ಟಾರ್ಕ್, ಆ್ಯಡಂ ಝಂಪಾ.

6 / 6
ಆಸ್ಟ್ರೇಲಿಯಾ ಟಿ20 ತಂಡ (ಮೊದಲ ಎರಡು ಪಂದ್ಯಗಳಿಗೆ): ಮಿಚೆಲ್ ಮಾರ್ಷ್ (ನಾಯಕ), ಶಾನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಮಿಚೆಲ್ ಓವನ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ.