ಟೀಮ್ ಇಂಡಿಯಾದ 37 ಆಟಗಾರರಲ್ಲಿ ಮೂವರು ಕನ್ನಡಿಗರು

Updated on: Oct 17, 2026 | 9:26 AM

ನ್ಯೂಝಿಲೆಂಡ್ ಪ್ರವಾಸಕ್ಕಾಗಿ ಬಿಸಿಸಿಐ ಪ್ರಕಟಿಸಿರುವ ಭಾರತದ ನಾಲ್ಕು ವಿಭಿನ್ನ ತಂಡಗಳಲ್ಲಿ ಒಟ್ಟು 37 ಆಟಗಾರರು ಸ್ಥಾನ ಪಡೆದುಕೊಂಡಿದ್ದಾರೆ. ಆದರೆ, ಈ ಬೃಹತ್ ಬಳಗದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಯಶಸ್ವಿಯಾಗಿರುವುದು ಕೇವಲ ಮೂವರು ಕನ್ನಡಿಗರು ಮಾತ್ರ! ಹಾಗಾದರೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿರುವ ಕರ್ನಾಟಕದ ಆಟಗಾರರು ಯಾರೆಲ್ಲಾ? ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

1 / 8
ನ್ಯೂಝಿಲೆಂಡ್ ವಿರುದ್ಧದ ಮುಂಬರುವ ಸರಣಿಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಬಾರಿ ಬಿಸಿಸಿಐ ಒಟ್ಟು ನಾಲ್ಕು ವಿಭಿನ್ನ ತಂಡಗಳನ್ನು ಆಯ್ಕೆ ಮಾಡಿದೆ. ಅಂದರೆ, ಟೆಸ್ಟ್ ಮತ್ತು ಟಿ20 ತಂಡಗಳ ಹೊರತಾಗಿ, ಏಕದಿನ ಸರಣಿಗೆ ಆಟಗಾರರ ಕಾರ್ಯದೊತ್ತಡ ನಿರ್ವಹಣೆಯ ಕಾರಣದಿಂದ ಎರಡು ಪ್ರತ್ಯೇಕ ತಂಡಗಳನ್ನು ಘೋಷಿಸಲಾಗಿದೆ. ವಿಶೇಷವೆಂದರೆ, ಪ್ರಕಟಿಸಲಾಗಿರುವ ಈ ನಾಲ್ಕೂ ತಂಡಗಳನ್ನು ಒಟ್ಟಾಗಿ ಗಮನಿಸಿದರೆ ಕರ್ನಾಟಕದ ಮೂವರು ಕನ್ನಡಿಗರು ಮಾತ್ರ ಸ್ಥಾನ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆ ಆಟಗಾರರು ಯಾರೆಂದರೆ… (PC: GettyImages)

ನ್ಯೂಝಿಲೆಂಡ್ ವಿರುದ್ಧದ ಮುಂಬರುವ ಸರಣಿಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಬಾರಿ ಬಿಸಿಸಿಐ ಒಟ್ಟು ನಾಲ್ಕು ವಿಭಿನ್ನ ತಂಡಗಳನ್ನು ಆಯ್ಕೆ ಮಾಡಿದೆ. ಅಂದರೆ, ಟೆಸ್ಟ್ ಮತ್ತು ಟಿ20 ತಂಡಗಳ ಹೊರತಾಗಿ, ಏಕದಿನ ಸರಣಿಗೆ ಆಟಗಾರರ ಕಾರ್ಯದೊತ್ತಡ ನಿರ್ವಹಣೆಯ ಕಾರಣದಿಂದ ಎರಡು ಪ್ರತ್ಯೇಕ ತಂಡಗಳನ್ನು ಘೋಷಿಸಲಾಗಿದೆ. ವಿಶೇಷವೆಂದರೆ, ಪ್ರಕಟಿಸಲಾಗಿರುವ ಈ ನಾಲ್ಕೂ ತಂಡಗಳನ್ನು ಒಟ್ಟಾಗಿ ಗಮನಿಸಿದರೆ ಕರ್ನಾಟಕದ ಮೂವರು ಕನ್ನಡಿಗರು ಮಾತ್ರ ಸ್ಥಾನ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆ ಆಟಗಾರರು ಯಾರೆಂದರೆ… (PC: GettyImages)

2 / 8

ಕೆ.ಎಲ್. ರಾಹುಲ್: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿಯ ಮೊದಲ 3 ಪಂದ್ಯಗಳಿಗೆ ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಯ್ಕೆಯಾಗಿದ್ದಾರೆ. ಇದಾದ ಬಳಿಕ ನಡೆಯಲಿರುವ ಮಹತ್ವದ ಟೆಸ್ಟ್ ಸರಣಿಗೆ ಭಾರತ ತಂಡದ ಉಪನಾಯಕನಾಗಿ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. (PC: GettyImages)

3 / 8

ಪ್ರಸಿದ್ಧ್ ಕೃಷ್ಣ: ಟೀಮ್ ಇಂಡಿಯಾದ ಸ್ಟಾರ್ ವೇಗಿ ಪ್ರಸಿದ್ಧ್ ಕೃಷ್ಣ ಅವರು ಮೊದಲ 3 ಏಕದಿನ ಪಂದ್ಯಗಳು ಹಾಗೂ ಟೆಸ್ಟ್ ಸರಣಿಯ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಇದೀಗ ಗಾಯಾಳುವಾಗಿರುವ ಅವರು ಸಂಪೂರ್ಣ ಫಿಟ್​ ಆದರೆ ಮಾತ್ರ ಈ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ. (PC: GettyImages)

4 / 8

ದೇವದತ್ ಪಡಿಕ್ಕಲ್: ಯುವ ಎಡಗೈ ಬ್ಯಾಟರ್ ದೇವದತ್ ಪಡಿಕ್ಕಲ್ ಅವರು ನ್ಯೂಝಿಲೆಂಡ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ದಾರೆ. ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಸ್ಥಾನ ಪಡೆದಿರುವ ಪಡಿಕ್ಕಲ್ ಕಿವೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು. ಅದರಂತೆ ನ್ಯೂಝಿಲೆಂಡ್ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾದ ಭಾರತ ತಂಡಗಳು ಈ ಕೆಳಗಿನಂತಿವೆ… (PC: GettyImages)

5 / 8

ಭಾರತದ ಏಕದಿನ ತಂಡ (ಮೊದಲ 3 ಪಂದ್ಯಗಳಿಗೆ): ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ನಮನ್ ಧೀರ್, ಅನ್ಶುಲ್ ಕಂಬೋಜ್, ಗುರ್ನೂರ್ ಬ್ರಾರ್, ರುತುರಾಜ್ ಗಾಯಕ್ವಾಡ್, ಅರ್ಷದೀಪ್ ಸಿಂಗ್, ಇಶಾನ್ ಕಿಶನ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ*, ಕುಲ್ದೀಪ್ ಯಾದವ್. (PC: GettyImages)

6 / 8

ಭಾರತದ ಏಕದಿನ ತಂಡ (ಕೊನೆಯ 2 ಪಂದ್ಯಗಳಿಗೆ): ಶ್ರೇಯಸ್ ಅಯ್ಯರ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ಇಶಾನ್ ಕಿಶನ್ (ಉಪನಾಯಕ), ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ನಮನ್ ಧೀರ್, ಆಖಿಬ್ ನಬಿ, ಗುರ್ನೂರ್ ಬ್ರಾರ್, ರುತುರಾಜ್ ಕುಮಾರ್ ಗಾಯಕ್ವಾಡ್, ಅರ್ಷದೀಪ್ ಸಿಂಗ್, ಕುಮಾರ್ ಕುಶಾಗ್ರ, ಮೊಹಮ್ಮದ್ ಸಿರಾಜ್, ಯಶ್ ಠಾಕೂರ್, ಕುಲ್ದೀಪ್ ಯಾದವ್. (PC: GettyImages)

7 / 8

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವೈಭವ್ ಸೂರ್ಯವಂಶಿ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಅಕ್ಷರ್ ಪಟೇಲ್, ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ನಮನ್ ಧೀರ್, ಪ್ರಿನ್ಸ್ ಯಾದವ್, ಮಾಯಾಂಕ್ ಯಾದವ್, ಅರ್ಷದೀಪ್ ಸಿಂಗ್ ಸಿಂಗ್, ಭುವನೇಶ್ವರ್ ಕುಮಾರ್, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್. (PC: GettyImages)

8 / 8

ಭಾರತದ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್ (ಉಪನಾಯಕ), ದೇವದತ್ ಪಡಿಕ್ಕಲ್, ರಿಷಭ್ ಪಂತ್ (ವಿಕೆಟ್ ಕೀಪರ್)*, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅನ್ಶುಲ್ ಕಂಬೋಜ್, ಜಸ್​ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಸಾಯಿ ಸುದರ್ಶನ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್. (PC: GettyImages)

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us