AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಟೆಸ್ಟ್ ತಂಡದಲ್ಲಿ RCBಯ ಮೂವರು ವೇಗಿಗಳು..!

India Test Squad: ಬಾಂಗ್ಲಾದೇಶ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ. 16 ಸದಸ್ಯರ ಈ ಬಳಗದಲ್ಲಿ ಆರ್​ಸಿಬಿ ತಂಡದ ನಾಲ್ವರು ಆಯ್ಕೆಯಾಗಿದ್ದಾರೆ. ಇಲ್ಲಿ ವಿರಾಟ್ ಕೊಹ್ಲಿ ಬ್ಯಾಟರ್ ಆಗಿ ಆಯ್ಕೆಯಾದರೆ, ಇನ್ನುಳಿದ ಮೂವರು ಬೌಲರ್​ಗಳಾಗಿ ಸ್ಥಾನ ಪಡೆದಿರುವುದು ವಿಶೇಷ.

ಝಾಹಿರ್ ಯೂಸುಫ್
|

Updated on: Sep 09, 2024 | 11:30 AM

Share
ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಹೆಸರಿಸಲಾಗಿದೆ. 16 ಸದಸ್ಯರ ಈ ಬಳಗದಲ್ಲಿ ನಾಲ್ವರು ವೇಗಿಗಳಿದ್ದಾರೆ. ಇವರಲ್ಲಿ ಮೂವರು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮೂವರು ಬೌಲರ್​ಗಳು ಎಂಬುದೇ ವಿಶೇಷ. ಆ ವೇಗಿಗಳು ಯಾರೆಲ್ಲಾ ಎಂದು ನೋಡುವುದಾದರೆ...

1 / 5
ಮೊಹಮ್ಮದ್ ಸಿರಾಜ್: ಆರ್​ಸಿಬಿ ತಂಡದ ಪ್ರಮುಖ ವೇಗಿಯಾಗಿರುವ ಮೊಹಮ್ಮದ್ ಸಿರಾಜ್ ಈ ಬಾರಿ ಕೂಡ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಟೀಮ್ ಇಂಡಿಯಾ ಪರ ಈಗಾಗಲೇ 27 ಟೆಸ್ಟ್ ಪಂದ್ಯಗಳನ್ನಾಡಿರುವ ಸಿರಾಜ್ ಒಟ್ಟು 74 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದೀಗ ಜಸ್​ಪ್ರೀತ್ ಬುಮ್ರಾ ಜೊತೆ 2ನೇ ವೇಗಿಯಾಗಿ ಸಿರಾಜ್ ಕಣಕ್ಕಿಳಿಯಲಿದ್ದಾರೆ.

2 / 5
ಆಕಾಶ್ ದೀಪ್: ಆರ್​ಸಿಬಿ ತಂಡದಲ್ಲಿರುವ ಮತ್ತೋರ್ವ ವೇಗಿ ಆಕಾಶ್ ದೀಪ್ ಕೂಡ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಸ್ತುತ ನಡೆಯುತ್ತಿರುವ ದುಲೀಪ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಭಾರತ ಎ ಪರ ಕಣಕ್ಕಿಳಿದಿದ್ದ ಆಕಾಶ್ ಒಟ್ಟು 9 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ಅದ್ಭುತ ಪ್ರದರ್ಶನದ ಫಲವಾಗಿ ಇದೀಗ ಯುವ ವೇಗಿಗೆ ಮತ್ತೆ ಟೀಮ್ ಇಂಡಿಯಾದಲ್ಲಿ ಚಾನ್ಸ್ ನೀಡಲಾಗಿದೆ. ಫೆಬ್ರವರಿಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಆಕಾಶ್ ದೀಪ್ ಭಾರತದ ಪರ ಟೆಸ್ಟ್​ನಲ್ಲಿ ಪಾದಾರ್ಪಣೆ ಮಾಡಿದ್ದರು.

3 / 5
ಯಶ್ ದಯಾಳ್: ಆರ್​ಸಿಬಿ ತಂಡದ ಎಡಗೈ ವೇಗಿ ಯಶ್ ದಯಾಳ್​ ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾಗೆ ಆಯ್ಕೆಯಾಗಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 24 ಪಂದ್ಯಗಳಿಂದ 76 ವಿಕೆಟ್ ಕಬಳಿಸಿರುವ ದಯಾಳ್ ಅವರನ್ನು ಎಡಗೈ ವೇಗಿಯಾಗಿ ಭಾರತ ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಈ ಮೂಲಕ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡುವ ನಿರೀಕ್ಷೆಯಲ್ಲಿದ್ದಾರೆ ಯಶ್ ದಯಾಳ್.

4 / 5
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಸರ್ಫರಾಝ್ ಖಾನ್, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ , ಆಕಾಶ್ ದೀಪ್ ಮತ್ತು ಯಶ್ ದಯಾಳ್.

5 / 5
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ

ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ