ಭಾರತ ಟೆಸ್ಟ್ ತಂಡದಲ್ಲಿ RCBಯ ಮೂವರು ವೇಗಿಗಳು..!
India Test Squad: ಬಾಂಗ್ಲಾದೇಶ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ. 16 ಸದಸ್ಯರ ಈ ಬಳಗದಲ್ಲಿ ಆರ್ಸಿಬಿ ತಂಡದ ನಾಲ್ವರು ಆಯ್ಕೆಯಾಗಿದ್ದಾರೆ. ಇಲ್ಲಿ ವಿರಾಟ್ ಕೊಹ್ಲಿ ಬ್ಯಾಟರ್ ಆಗಿ ಆಯ್ಕೆಯಾದರೆ, ಇನ್ನುಳಿದ ಮೂವರು ಬೌಲರ್ಗಳಾಗಿ ಸ್ಥಾನ ಪಡೆದಿರುವುದು ವಿಶೇಷ.
1 / 5
ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಹೆಸರಿಸಲಾಗಿದೆ. 16 ಸದಸ್ಯರ ಈ ಬಳಗದಲ್ಲಿ ನಾಲ್ವರು ವೇಗಿಗಳಿದ್ದಾರೆ. ಇವರಲ್ಲಿ ಮೂವರು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮೂವರು ಬೌಲರ್ಗಳು ಎಂಬುದೇ ವಿಶೇಷ. ಆ ವೇಗಿಗಳು ಯಾರೆಲ್ಲಾ ಎಂದು ನೋಡುವುದಾದರೆ...
2 / 5
ಮೊಹಮ್ಮದ್ ಸಿರಾಜ್: ಆರ್ಸಿಬಿ ತಂಡದ ಪ್ರಮುಖ ವೇಗಿಯಾಗಿರುವ ಮೊಹಮ್ಮದ್ ಸಿರಾಜ್ ಈ ಬಾರಿ ಕೂಡ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಟೀಮ್ ಇಂಡಿಯಾ ಪರ ಈಗಾಗಲೇ 27 ಟೆಸ್ಟ್ ಪಂದ್ಯಗಳನ್ನಾಡಿರುವ ಸಿರಾಜ್ ಒಟ್ಟು 74 ವಿಕೆಟ್ಗಳನ್ನು ಕಬಳಿಸಿದ್ದಾರೆ. ಇದೀಗ ಜಸ್ಪ್ರೀತ್ ಬುಮ್ರಾ ಜೊತೆ 2ನೇ ವೇಗಿಯಾಗಿ ಸಿರಾಜ್ ಕಣಕ್ಕಿಳಿಯಲಿದ್ದಾರೆ.
3 / 5
ಆಕಾಶ್ ದೀಪ್: ಆರ್ಸಿಬಿ ತಂಡದಲ್ಲಿರುವ ಮತ್ತೋರ್ವ ವೇಗಿ ಆಕಾಶ್ ದೀಪ್ ಕೂಡ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಸ್ತುತ ನಡೆಯುತ್ತಿರುವ ದುಲೀಪ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಭಾರತ ಎ ಪರ ಕಣಕ್ಕಿಳಿದಿದ್ದ ಆಕಾಶ್ ಒಟ್ಟು 9 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ಅದ್ಭುತ ಪ್ರದರ್ಶನದ ಫಲವಾಗಿ ಇದೀಗ ಯುವ ವೇಗಿಗೆ ಮತ್ತೆ ಟೀಮ್ ಇಂಡಿಯಾದಲ್ಲಿ ಚಾನ್ಸ್ ನೀಡಲಾಗಿದೆ. ಫೆಬ್ರವರಿಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಆಕಾಶ್ ದೀಪ್ ಭಾರತದ ಪರ ಟೆಸ್ಟ್ನಲ್ಲಿ ಪಾದಾರ್ಪಣೆ ಮಾಡಿದ್ದರು.
4 / 5
ಯಶ್ ದಯಾಳ್: ಆರ್ಸಿಬಿ ತಂಡದ ಎಡಗೈ ವೇಗಿ ಯಶ್ ದಯಾಳ್ ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾಗೆ ಆಯ್ಕೆಯಾಗಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 24 ಪಂದ್ಯಗಳಿಂದ 76 ವಿಕೆಟ್ ಕಬಳಿಸಿರುವ ದಯಾಳ್ ಅವರನ್ನು ಎಡಗೈ ವೇಗಿಯಾಗಿ ಭಾರತ ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಈ ಮೂಲಕ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡುವ ನಿರೀಕ್ಷೆಯಲ್ಲಿದ್ದಾರೆ ಯಶ್ ದಯಾಳ್.
5 / 5
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸರ್ಫರಾಝ್ ಖಾನ್, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ , ಆಕಾಶ್ ದೀಪ್ ಮತ್ತು ಯಶ್ ದಯಾಳ್.