ದಾಖಲೆಗಳ ಸರದಾರ ಕಿಂಗ್ ಕೊಹ್ಲಿ ಮುಂದಿದೆ ಮೂರು ವಿಶ್ವ ದಾಖಲೆಗಳು
Virat Kohli Records: ಈ ನಾಕೌಟ್ ಪಂದ್ಯದಲ್ಲೂ ಕಿಂಗ್ ಕೊಹ್ಲಿ ಕಡೆಯಿಂದ ಮೂರು ದಾಖಲೆಗಳನ್ನು ನಿರೀಕ್ಷಿಸಬಹುದು. ಏಕೆಂದರೆ ಈಗಾಗಲೇ ಹಲವು ಮೈಲುಗಲ್ಲನ್ನು ದಾಟಿರುವ ವಿರಾಟ್ ಕೊಹ್ಲಿ ಇದೀಗ ಕೆಲ ದಾಖಲೆಗಳ ಹೊಸ್ತಿಲಲ್ಲಿದ್ದಾರೆ. ಆ ದಾಖಲೆಗಳಾವುವು ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ...
Updated on: Nov 13, 2023 | 9:58 PM

ಏಕದಿನ ವಿಶ್ವಕಪ್ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಾ ರನ್ ಪೇರಿಸುತ್ತಿರುವ ವಿರಾಟ್ ಕೊಹ್ಲಿ ಇದೀಗ ಸೆಮಿಫೈನಲ್ ಪಂದ್ಯಕ್ಕಾಗಿ ಸಜ್ಜಾಗುತ್ತಿದ್ದಾರೆ. ಬುಧವಾರ ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಝಿಲೆಂಡ್ ಅನ್ನು ಎದುರಿಸಲಿದೆ.

ಈ ನಾಕೌಟ್ ಪಂದ್ಯದಲ್ಲೂ ಕಿಂಗ್ ಕೊಹ್ಲಿ ಕಡೆಯಿಂದ ಮೂರು ದಾಖಲೆಗಳನ್ನು ನಿರೀಕ್ಷಿಸಬಹುದು. ಏಕೆಂದರೆ ಈಗಾಗಲೇ ಹಲವು ಮೈಲುಗಲ್ಲನ್ನು ದಾಟಿರುವ ವಿರಾಟ್ ಕೊಹ್ಲಿ ಇದೀಗ ಕೆಲ ದಾಖಲೆಗಳ ಹೊಸ್ತಿಲಲ್ಲಿದ್ದಾರೆ. ಆ ದಾಖಲೆಗಳಾವುವು ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ...

50ನೇ ಶತಕ: ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಬಾರಿಸಿದರೆ ಏಕದಿನ ಕ್ರಿಕೆಟ್ನಲ್ಲಿ 50 ಸೆಂಚುರಿ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಸದ್ಯ 49 ಶತಕ ಬಾರಿಸಿರುವ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಸರಿಗಟ್ಟಿರುವ ಕೊಹ್ಲಿ ಹೊಸ ವಿಶ್ವ ದಾಖಲೆಯ ಹೊಸ್ತಿಲಲ್ಲಿದ್ದಾರೆ.

ಅತ್ಯಧಿಕ ರನ್: ಏಕದಿನ ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ನಿರ್ಮಿಸಲು ಕೊಹ್ಲಿಗೆ ಬೇಕಿರುವುದು ಕೇವಲ 80 ರನ್ಗಳು ಮಾತ್ರ. ಸದ್ಯ ಈ ದಾಖಲೆ ಸಚಿನ್ ತೆಂಡೂಲ್ಕರ್ (673) ಹೆಸರಿನಲ್ಲಿದೆ. ಇದೀಗ 594 ರನ್ ಬಾರಿಸಿರುವ ಕೊಹ್ಲಿ ನ್ಯೂಝಿಲೆಂಡ್ ವಿರುದ್ಧ 80 ರನ್ಗಳಿಸಿದರೆ ಹೊಸ ವಿಶ್ವ ದಾಖಲೆ ನಿರ್ಮಾಣವಾಗಲಿದೆ.

ಗೆಲುವಿನ ಶತಕವೀರ: ರಿಕಿ ಪಾಂಟಿಂಗ್ ಹೆಸರಿನಲ್ಲಿರುವ 55 ಮ್ಯಾಚ್ ವಿನ್ನಿಂಗ್ ಶತಕಗಳ ದಾಖಲೆಯನ್ನು ವಿರಾಟ್ ಕೊಹ್ಲಿ ಸರಿಗಟ್ಟಿದ್ದಾರೆ. ಇದೀಗ ನ್ಯೂಝಿಲೆಂಡ್ ವಿರುದ್ಧ ಕಿಂಗ್ ಕೊಹ್ಲಿ ಸೆಂಚುರಿ ಸಿಡಿಸಿ ಟೀಮ್ ಇಂಡಿಯಾ ಗೆದ್ದರೆ, ಅತೀ ಹೆಚ್ಚು ಮ್ಯಾಚ್ ವಿನ್ನಿಂಗ್ ಶತಕ ಸಿಡಿಸಿದ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಪಾಲಾಗಲಿದೆ.



















