AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಮಿಫೈನಲ್​ಗೆ 3 ತಂಡಗಳು ಎಂಟ್ರಿ: ಒಂದು ಸ್ಥಾನಕ್ಕಾಗಿ 5 ತಂಡಗಳ ಪೈಪೋಟಿ

Womens ODI World Cup 2025: ಮಹಿಳಾ ಏಕದಿನ ವಿಶ್ವಕಪ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿದಿವೆ. ಈ ಎಂಟು ತಂಡಗಳಲ್ಲಿ ಮೂರು ಟೀಮ್​ಗಳು ಈಗಾಗಲೇ ಸೆಮಿಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ಇನ್ನುಳಿದ ಒಂದು ಸ್ಥಾನಕ್ಕಾಗಿ ಭಾರತ, ನ್ಯೂಝಿಲೆಂಡ್, ಪಾಕಿಸ್ತಾನ್, ಶ್ರೀಲಂಕಾ ಹಾಗೂ ಬಾಂಗ್ಲಾದೇಶ್ ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ.

ಝಾಹಿರ್ ಯೂಸುಫ್
|

Updated on:Oct 20, 2025 | 9:02 AM

Share
ವುಮೆನ್ಸ್ ಒಡಿಐ ವರ್ಲ್ಡ್​ಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಲೀಗ್​ ಹಂತದಲ್ಲಿ 20 ಪಂದ್ಯಗಳು ಮುಗಿದಿದ್ದು, ಈ ಇಪ್ಪತ್ತು ಮ್ಯಾಚ್​ಗಳ ಮುಕ್ತಾಯದ ವೇಳೆಗೆ ಮೂರು ತಂಡಗಳು ಸೆಮಿಫೈನಲ್​​ಗೆ ಅರ್ಹತೆ ಪಡೆದುಕೊಂಡಿವೆ. ಆ ತಂಡಗಳೆಂದರೆ...

1 / 5
ಆಸ್ಟ್ರೇಲಿಯಾ: ಈ ಬಾರಿಯ ಮಹಿಳಾ ಏಕದಿನ ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ತಂಡವು ಭರ್ಜರಿ ಪ್ರದರ್ಶನ ನೀಡುತ್ತಿದೆ. ಆಡಿರುವ 5 ಪಂದ್ಯಗಳಲ್ಲಿ 4 ಗೆಲುವು ದಾಖಲಿಸಿರುವ ಆಸೀಸ್ ಪಡೆ ಒಟ್ಟು 9 ಅಂಕಗಳನ್ನು ಪಡೆದುಕೊಂಡಿದೆ. ಅಂದರೆ ಆಸ್ಟ್ರೇಲಿಯಾ-ಶ್ರೀಲಂಕಾ ನಡುವಣ ಪಂದ್ಯವು ಮಳೆಯ ಕಾರಣ ರದ್ದಾದ ಕಾರಣ ಒಂದು ಅಂಕ ನೀಡಲಾಗಿತ್ತು. ಅದರಂತೆ ಇದೀಗ 9 ಅಂಕಗಳೊಂದಿಗೆ ಆಸ್ಟ್ರೇಲಿಯಾ ತಂಡವು ಸೆಮಿಫೈನಲ್​ಗೆ ಪ್ರವೇಶಿಸಿದೆ.

2 / 5
ಇಂಗ್ಲೆಂಡ್: ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿದು ಮಹಿಳಾ ಏಕದಿನ ವಿಶ್ವಕಪ್ ಅಭಿಯಾನ ಆರಂಭಿಸಿದ ಇಂಗ್ಲೆಂಡ್ ತಂಡವು ಈವರೆಗೆ ಯಾವುದೇ ಪಂದ್ಯ ಸೋತಿಲ್ಲ. ಪಾಕಿಸ್ತಾನ್ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದ್ದರಿಂದ ಒಂದು ಅಂಕ ಪಡೆದಿರುವ ಇಂಗ್ಲೆಂಡ್ ತಂಡವು ಆಡಿರುವ 4 ಮ್ಯಾಚ್​ಗಳಲ್ಲೂ ಗೆಲುವು ದಾಖಲಿಸಿ 9 ಅಂಕಗಳೊಂದಿಗೆ ಸೆಮಿಫೈನಲ್​ಗೆ ಎಂಟ್ರಿ ಕೊಟ್ಟಿದೆ.

3 / 5
ಸೌತ್ ಆಫ್ರಿಕಾ: ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸೋತಿದ್ದ ಸೌತ್ ಆಫ್ರಿಕಾ ಆ ಬಳಿಕ ಬ್ಯಾಕ್ ಟು ಬ್ಯಾಕ್ 4 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಒಟ್ಟು 8 ಅಂಕಗಳೊಂದಿಗೆ ಸೆಮಿಫೈನಲ್​ಗೆ ಅರ್ಹತೆ ಪಡೆಯುವಲ್ಲಿ ಸೌತ್ ಆಫ್ರಿಕಾ ತಂಡ ಯಶಸ್ವಿಯಾಗಿದೆ.

4 / 5
ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದು ಸೆಮಿಫೈನಲ್​ಗೇರಲು ಇನ್ನು ಭಾರತ, ನ್ಯೂಝಿಲೆಂಡ್, ಶ್ರೀಲಂಕಾ, ಬಾಂಗ್ಲಾದೇಶ್ ಹಾಗೂ ಪಾಕಿಸ್ತಾನ್ ತಂಡಗಳಿಗೆ ಅವಕಾಶವಿದೆ. ಎಲ್ಲಾ ತಂಡಗಳಿಗೂ ಇನ್ನೂ ತಲಾ 2 ಪಂದ್ಯಗಳು ಬಾಕಿಯಿದ್ದು, ಈ ಮ್ಯಾಚ್​ಗಳಲ್ಲಿ ಜಯ ಸಾಧಿಸಿ ಯಾವ ತಂಡ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸಲಿದೆ ಕಾದು ನೋಡಬೇಕಿದೆ.

5 / 5

Published On - 9:01 am, Mon, 20 October 25

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?

ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ

ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!

ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!

ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!

ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ

ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?

ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!

ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?

ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು