AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Rankings: ಆಸ್ಟ್ರೇಲಿಯನ್ನರ ಪ್ರಾಬಲ್ಯ.. ಅಗ್ರ ಹತ್ತರಲ್ಲಿ ಐವರು ಬೌಲರ್​ಗಳು

ICC Test Bowling Rankings: ಐಸಿಸಿ ಟೆಸ್ಟ್ ಬೌಲರ್​ಗಳ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಐವರು ಬೌಲರ್​ಗಳು ಸ್ಥಾನ ಪಡೆದಿದ್ದಾರೆ. ಇದೇ ವೇಳೆ ಅಗ್ರ ಹತ್ತರಲ್ಲಿ ಕಾಣಿಸಿಕೊಂಡಿರುವುದು ಟೀಮ್ ಇಂಡಿಯಾದ ಏಕೈಕ ವೇಗಿ ಮಾತ್ರ. ಅಲ್ಲದೆ ಅಗ್ರ ಇಪ್ಪತ್ತರಲ್ಲೂ ಸ್ಥಾನ ಪಡೆಯುವಲ್ಲಿ ಭಾರತದ ಇತರೆ ವೇಗದ ಬೌಲರ್​ಗಳಿಗೆ ಸಾಧ್ಯವಾಗಿಲ್ಲ.

ಝಾಹಿರ್ ಯೂಸುಫ್
|

Updated on: Jul 17, 2025 | 10:35 AM

Share
ಐಸಿಸಿ ಟೆಸ್ಟ್ ಬೌಲರ್​ಗಳ ನೂತನ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಹೊಸ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಅಗ್ರಸ್ಥಾನ ಅಲಂಕರಿಸಿದರೆ, ಸೌತ್ ಆಫ್ರಿಕಾದ ಕಗಿಸೊ ರಬಾಡ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಟಾಪ್-10 ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಐವರು ಬೌಲರ್​ಗಳು ಕಾಣಿಸಿಕೊಂಡಿರುವುದು ವಿಶೇಷ. ಆ ಬೌಲರ್​ಗಳೆಂದರೆ...

1 / 6
ಪ್ಯಾಟ್ ಕಮಿನ್ಸ್: ವೆಸ್ಟ್ ಇಂಡೀಸ್​ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಟೆಸ್ಟ್ ಬೌಲರ್​ಗಳ ನೂತನ ರ‍್ಯಾಂಕಿಂಗ್ ಪಟ್ಟಿಯಲ್ಲಿ ಒಟ್ಟು 838 ಅಂಕಗಳನ್ನು ಕಲೆಹಾಕಿದ್ದಾರೆ. ಈ ಮೂಲಕ ಮೂರನೇ ರ‍್ಯಾಂಕ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

2 / 6
ಜೋಶ್ ಹೇಝಲ್​ವುಡ್: ಆಸ್ಟ್ರೇಲಿಯಾ ತಂಡದ ಬೌಲಿಂಗ್ ಬಲವಾಗಿ ಗುರುತಿಸಿಕೊಂಡಿರುವ ಜೋಶ್ ಹೇಝಲ್​ವುಡ್ ವಿಂಡೀಸ್​ ವಿರುದ್ಧದ ಟೆಸ್ಟ್​ ಪಂದ್ಯಗಳಲ್ಲಿ ಉತ್ತಮ ದಾಳಿ ಸಂಘಟಿಸಿದ್ದರು. ಈ ಮೂಲಕ 815 ಅಂಕಗಳೊಂದಿಗೆ ಟೆಸ್ಟ್ ಬೌಲರ್​ಗಳ ಶ್ರೇಯಾಂಕದಲ್ಲಿ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.

3 / 6
ಸ್ಕಾಟ್ ಬೋಲ್ಯಾಂಡ್: ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿ ಇತಿಹಾಸ ನಿರ್ಮಿಸಿದ್ದ ಸ್ಕಾಟ್ ಬೋಲ್ಯಾಂಡ್ 6 ಸ್ಥಾನ ಮೇಲೇರಿದ್ದು, ಈ ಮೂಲಕ ನೂತನ ಶ್ರೇಯಾಂಕ ಪಟ್ಟಿಯಲ್ಲಿ 784 ಅಂಕಗಳೊಂದಿಗೆ ಆರನೇ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

4 / 6
ನಾಥನ್ ಲಿಯಾನ್: ಆಸ್ಟ್ರೇಲಿಯಾ ತಂಡದ ಸ್ಪಿನ್ ಮಾಂತ್ರಿಕ ನಾಥನ್ ಲಿಯಾನ್ ಟೆಸ್ಟ್ ಕ್ರಿಕೆಟ್​ನಲ್ಲಿ ತನ್ನ ಛಾಪು ಮುಂದುವರೆಸಿದ್ದು, ಈ ಮೂಲಕ 769 ಅಂಕಗಳನ್ನು ಪಡೆದುಕೊಂಡಿದ್ದಾರೆ. ಈ 769 ರೇಟಿಂಗ್​ನೊಂದಿಗೆ ನಾಥನ್ ಲಿಯಾನ್ ಪ್ರಸ್ತುತ ಟೆಸ್ಟ್ ಬೌಲರ್​ಗಳ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

5 / 6
ಮಿಚೆಲ್ ಸ್ಟಾರ್ಕ್​: ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ 15 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿ ಹೊಸ ಇತಿಹಾಸ ಬರೆದಿರುವ ಮಿಚೆಲ್ ಸ್ಟಾರ್ಕ್​  ಟೆಸ್ಟ್ ಬೌಲರ್​ಗಳ ನೂತನ ರ‍್ಯಾಂಕಿಂಗ್ ಪಟ್ಟಿಯಲ್ಲಿ ಒಟ್ಟು 766 ಅಂಕಗಳನ್ನು ಕಲೆಹಾಕಿದ್ದಾರೆ. ಈ ಮೂಲಕ ಹತ್ತನೇ ಸ್ಥಾನ ಪಡೆಯುವಲ್ಲಿ ಅನುಭವಿ ಎಡಗೈ ವೇಗಿ ಯಶಸ್ವಿಯಾಗಿದ್ದಾರೆ.

6 / 6
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!

ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ

ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ

ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ