ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಐವರು ಆಟಗಾರರು..!

T20 World Cup 2024: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ರೋಚಕ ಜಯ ಸಾಧಿಸಿದ ಬೆನ್ನಲ್ಲೇ ಟೀಮ್ ಇಂಡಿಯಾದ ದಿಗ್ಗಜರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ನಿವೃತ್ತಿ ಘೋಷಿಸಿದ್ದರು. ಇದೀಗ ಭಾರತ ತಂಡದ ಆಲ್​ರೌಂಡರ್ ಕೂಡ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

|

Updated on: Jul 01, 2024 | 9:08 AM

T20 World Cup 2024: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಐವರು ಆಟಗಾರರು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಈ ಐವರಲ್ಲಿ ಮೂವರು ಭಾರತೀಯರು ಎಂಬುದು ವಿಶೇಷ. ಅದರಂತೆ ಈ ಬಾರಿಯ ವಿಶ್ವಕಪ್​ನೊಂದಿಗೆ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಮುಗಿಸಿರುವ ಐವರು ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 6
ವಿರಾಟ್ ಕೊಹ್ಲಿ: ಭಾರತ ತಂಡವು ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕೆರಿಯರ್​ಗೆ ನಿವೃತ್ತಿ ಘೋಷಿಸಿದ್ದಾರೆ. ಟೀಮ್ ಇಂಡಿಯಾ ಪರ 125 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ 117 ಇನಿಂಗ್ಸ್​ಗಳಿಂದ ಒಟ್ಟು 4188 ರನ್​ ಕಲೆಹಾಕಿದ್ದಾರೆ. ಇದರ ನಡುವೆ 38 ಅರ್ಧಶತಕ ಹಾಗೂ 1 ಭರ್ಜರಿ ಶತಕ ಸಿಡಿಸಿದ್ದಾರೆ.

2 / 6
ರೋಹಿತ್ ಶರ್ಮಾ: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡ ಟಿ20 ಇಂಟರ್​ನ್ಯಾಷನಲ್ ಕೆರಿಯರ್​ಗೆ ವಿದಾಯ ಹೇಳಿದ್ದಾರೆ. ಭಾರತದ ಪರ 159 ಟಿ20 ಪಂದ್ಯಗಳನ್ನಾಡಿರುವ ಹಿಟ್​ಮ್ಯಾನ್ 151 ಇನಿಂಗ್ಸ್​ಗಳಿಂದ ಒಟ್ಟು 4231 ರನ್ ಕಲೆಹಾಕಿದ್ದಾರೆ. ಈ ವೇಳೆ 5 ಭರ್ಜರಿ ಶತಕ ಹಾಗೂ 32 ಅರ್ಧಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಟಿ20ಐ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ.

3 / 6
ರವೀಂದ್ರ ಜಡೇಜಾ: ಟೀಮ್ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ ಕೂಡ ಟಿ20 ಅಂತಾರಾಷ್ಟ್ರೀಯ ವೃತ್ತಿಜೀವನ ಅಂತ್ಯಗೊಳಿಸಿದ್ದಾರೆ. ಭಾರತದ ಪರ 74 ಟಿ20 ಪಂದ್ಯಗಳನ್ನಾಡಿರುವ ಜಡೇಜಾ 41 ಇನಿಂಗ್ಸ್​ಗಳಿಂದ 515 ರನ್ ಕಲೆಹಾಕಿದ್ದಾರೆ. ಹಾಗೆಯೇ, 54 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

4 / 6
ಡೇವಿಡ್ ವಾರ್ನರ್: ಈ ಬಾರಿಯ ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ತಂಡವು ಸೂಪರ್-8 ಹಂತದಿಂದ ಹೊರಬಿದ್ದ ಬೆನ್ನಲ್ಲೇ ವಾರ್ನರ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಆಸ್ಟ್ರೇಲಿಯಾ ಪರ 110 ಟಿ20 ಪಂದ್ಯಗಳನ್ನಾಡಿರುವ ಡೇವಿಡ್ ವಾರ್ನರ್ ಒಟ್ಟು 3277 ರನ್ ಕಲೆಹಾಕಿದ್ದಾರೆ. ಈ ವೇಳೆ ಒಂದು ಭರ್ಜರಿ ಶತಕ ಹಾಗೂ 28 ಅರ್ಧಶತಕಗಳನ್ನು ಬಾರಿಸಿದ್ದಾರೆ.

5 / 6
ಟ್ರೆಂಟ್ ಬೌಲ್ಟ್: ನ್ಯೂಝಿಲೆಂಡ್ ತಂಡದ ಎಡಗೈ ವೇಗಿ ಟ್ರೆಂಟ್ ಬೌಲ್ಟ್ ಕೂಡ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಿದ್ದಾರೆ. ಕಿವೀಸ್ ಪರ 61	ಟಿ20 ಪಂದ್ಯಗಳನ್ನಾಡಿರುವ ಬೌಲ್ಟ್ ಒಟ್ಟು 83 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅಲ್ಲದೆ 34ನೇ ವಯಸ್ಸಿನಲ್ಲೇ ತಮ್ಮ ಟಿ20ಐ ಕೆರಿಯರ್​ಗೆ ವಿದಾಯ ಹೇಳಿದ್ದಾರೆ.

6 / 6
Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್

ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ

ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?

ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ

ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ

ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು

ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್

ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್