ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಐವರು ಆಟಗಾರರು..!
T20 World Cup 2024: ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ರೋಚಕ ಜಯ ಸಾಧಿಸಿದ ಬೆನ್ನಲ್ಲೇ ಟೀಮ್ ಇಂಡಿಯಾದ ದಿಗ್ಗಜರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ನಿವೃತ್ತಿ ಘೋಷಿಸಿದ್ದರು. ಇದೀಗ ಭಾರತ ತಂಡದ ಆಲ್ರೌಂಡರ್ ಕೂಡ ಟಿ20 ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.
1 / 6
T20 World Cup 2024: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಐವರು ಆಟಗಾರರು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಈ ಐವರಲ್ಲಿ ಮೂವರು ಭಾರತೀಯರು ಎಂಬುದು ವಿಶೇಷ. ಅದರಂತೆ ಈ ಬಾರಿಯ ವಿಶ್ವಕಪ್ನೊಂದಿಗೆ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಮುಗಿಸಿರುವ ಐವರು ಆಟಗಾರರ ಪಟ್ಟಿ ಈ ಕೆಳಗಿನಂತಿದೆ...
2 / 6
ವಿರಾಟ್ ಕೊಹ್ಲಿ: ಭಾರತ ತಂಡವು ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕೆರಿಯರ್ಗೆ ನಿವೃತ್ತಿ ಘೋಷಿಸಿದ್ದಾರೆ. ಟೀಮ್ ಇಂಡಿಯಾ ಪರ 125 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ 117 ಇನಿಂಗ್ಸ್ಗಳಿಂದ ಒಟ್ಟು 4188 ರನ್ ಕಲೆಹಾಕಿದ್ದಾರೆ. ಇದರ ನಡುವೆ 38 ಅರ್ಧಶತಕ ಹಾಗೂ 1 ಭರ್ಜರಿ ಶತಕ ಸಿಡಿಸಿದ್ದಾರೆ.
3 / 6
ರೋಹಿತ್ ಶರ್ಮಾ: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡ ಟಿ20 ಇಂಟರ್ನ್ಯಾಷನಲ್ ಕೆರಿಯರ್ಗೆ ವಿದಾಯ ಹೇಳಿದ್ದಾರೆ. ಭಾರತದ ಪರ 159 ಟಿ20 ಪಂದ್ಯಗಳನ್ನಾಡಿರುವ ಹಿಟ್ಮ್ಯಾನ್ 151 ಇನಿಂಗ್ಸ್ಗಳಿಂದ ಒಟ್ಟು 4231 ರನ್ ಕಲೆಹಾಕಿದ್ದಾರೆ. ಈ ವೇಳೆ 5 ಭರ್ಜರಿ ಶತಕ ಹಾಗೂ 32 ಅರ್ಧಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಟಿ20ಐ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
4 / 6
ರವೀಂದ್ರ ಜಡೇಜಾ: ಟೀಮ್ ಇಂಡಿಯಾ ಆಲ್ರೌಂಡರ್ ರವೀಂದ್ರ ಜಡೇಜಾ ಕೂಡ ಟಿ20 ಅಂತಾರಾಷ್ಟ್ರೀಯ ವೃತ್ತಿಜೀವನ ಅಂತ್ಯಗೊಳಿಸಿದ್ದಾರೆ. ಭಾರತದ ಪರ 74 ಟಿ20 ಪಂದ್ಯಗಳನ್ನಾಡಿರುವ ಜಡೇಜಾ 41 ಇನಿಂಗ್ಸ್ಗಳಿಂದ 515 ರನ್ ಕಲೆಹಾಕಿದ್ದಾರೆ. ಹಾಗೆಯೇ, 54 ವಿಕೆಟ್ ಕಬಳಿಸಿ ಮಿಂಚಿದ್ದಾರೆ.
5 / 6
ಡೇವಿಡ್ ವಾರ್ನರ್: ಈ ಬಾರಿಯ ವಿಶ್ವಕಪ್ನಲ್ಲಿ ಆಸ್ಟ್ರೇಲಿಯಾ ತಂಡವು ಸೂಪರ್-8 ಹಂತದಿಂದ ಹೊರಬಿದ್ದ ಬೆನ್ನಲ್ಲೇ ವಾರ್ನರ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಆಸ್ಟ್ರೇಲಿಯಾ ಪರ 110 ಟಿ20 ಪಂದ್ಯಗಳನ್ನಾಡಿರುವ ಡೇವಿಡ್ ವಾರ್ನರ್ ಒಟ್ಟು 3277 ರನ್ ಕಲೆಹಾಕಿದ್ದಾರೆ. ಈ ವೇಳೆ ಒಂದು ಭರ್ಜರಿ ಶತಕ ಹಾಗೂ 28 ಅರ್ಧಶತಕಗಳನ್ನು ಬಾರಿಸಿದ್ದಾರೆ.
6 / 6
ಟ್ರೆಂಟ್ ಬೌಲ್ಟ್: ನ್ಯೂಝಿಲೆಂಡ್ ತಂಡದ ಎಡಗೈ ವೇಗಿ ಟ್ರೆಂಟ್ ಬೌಲ್ಟ್ ಕೂಡ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಿದ್ದಾರೆ. ಕಿವೀಸ್ ಪರ 61 ಟಿ20 ಪಂದ್ಯಗಳನ್ನಾಡಿರುವ ಬೌಲ್ಟ್ ಒಟ್ಟು 83 ವಿಕೆಟ್ಗಳನ್ನು ಕಬಳಿಸಿದ್ದಾರೆ. ಅಲ್ಲದೆ 34ನೇ ವಯಸ್ಸಿನಲ್ಲೇ ತಮ್ಮ ಟಿ20ಐ ಕೆರಿಯರ್ಗೆ ವಿದಾಯ ಹೇಳಿದ್ದಾರೆ.