- Kannada News Photo gallery Cricket photos 5 Players Dropped From India ODI Squad For Champions Trophy
Champions Trophy 2025: ಟೀಮ್ ಇಂಡಿಯಾದಿಂದ ಹೊರಬಿದ್ದ ಐವರು ಆಟಗಾರರು
Champions Trophy 2025: ಫೆಬ್ರವರಿ 19 ರಿಂದ ಶುರುವಾಗಲಿರುವ ಚಾಂಪಿಯನ್ಸ್ ಟ್ರೋಫಿಗೆ 15 ಸದಸ್ಯರ ಭಾರತ ತಂಡವನ್ನು ಹೆಸರಿಸಲಾಗಿದೆ. ಈ ತಂಡದಲ್ಲಿ ಕಳೆದ ಬಾರಿಯ ಏಕದಿನ ವಿಶ್ವಕಪ್ ಆಡಿದ 5 ಆಟಗಾರರಿಗೆ ಸ್ಥಾನ ಸಿಕ್ಕಿಲ್ಲ ಎಂಬುದು ವಿಶೇಷ. ಅಂದರೆ 2023ರ ಏಕದಿನ ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದ ಐವರು ಸ್ಟಾರ್ ಆಟಗಾರರು ಚಾಂಪಿಯನ್ಸ್ ಟ್ರೋಫಿ ತಂಡದಿಂದ ಹೊರಬಿದ್ದಿದ್ದಾರೆ.
Updated on: Jan 19, 2025 | 7:53 AM

Champions Trophy 2025: ಚಾಂಪಿಯನ್ಸ್ ಟ್ರೋಫಿಗಾಗಿ 15 ಸದಸ್ಯರ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ಮುನ್ನಡೆಸಲಿರುವ ಈ ತಂಡಕ್ಕೆ ಐವರು ಆಟಗಾರರು ಎಂಟ್ರಿ ಕೊಟ್ಟರೆ, ಐದು ಪ್ಲೇಯರ್ಸ್ ಭಾರತ ತಂಡದಿಂದ ಹೊರಬಿದ್ದಿದ್ದಾರೆ.

ಅಂದರೆ ಕಳೆದ ಬಾರಿಯ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದ ಐವರು ಆಟಗಾರರನ್ನು ಈ ಬಾರಿ ಆಯ್ಕೆಗೆ ಪರಿಗಣಿಸಲಾಗಿಲ್ಲ. ಹೀಗೆ ಒಂದೇ ವರ್ಷದಲ್ಲಿ ಐಸಿಸಿ ಟೂರ್ನಿಯಿಂದ ಹೊರಬಿದ್ದಿರುವ ಟೀಮ್ ಇಂಡಿಯಾ ಆಟಗಾರರು ಯಾರೆಲ್ಲಾ ಎಂದು ನೋಡುವುದಾದರೆ...

ರವಿಚಂದ್ರನ್ ಅಶ್ವಿನ್: 2023 ರ ಏಕದಿನ ವಿಶ್ವಕಪ್ನಲ್ಲಿ ರವಿಚಂದ್ರನ್ ಅಶ್ವಿನ್ ಒಂದು ಪಂದ್ಯವಾಡಿದ್ದರು. ಚೆನ್ನೈನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಏಕೈಕ ವಿಕೆಟ್ ಕಬಳಿಸಿದ್ದರು. ಇದೀಗ ನಿವೃತ್ತರಾಗಿರುವ ಅವರನ್ನು ಈ ಬಾರಿಯ ಚಾಂಪಿಯನ್ಸ್ ಟ್ರೋಫಿಗೆ ಪರಿಗಣಿಸಲಾಗಿಲ್ಲ.

ಶಾರ್ದೂಲ್ ಠಾಕೂರ್: 2023ರ ಏಕದಿನ ವಿಶ್ವಕಪ್ನಲ್ಲಿ ಭಾರತ ತಂಡದಲ್ಲಿ ಆಲ್ರೌಂಡರ್ ಆಗಿ ಶಾರ್ದೂಲ್ ಠಾಕೂರ್ ಕಾಣಿಸಿಕೊಂಡಿದ್ದರು. ಒಟ್ಟು 3 ಪಂದ್ಯಗಳನ್ನಾಡಿದ್ದ ಶಾರ್ದೂಲ್ 3 ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿದ್ದರು. ಇದೀಗ ಕಳಪೆ ಫಾರ್ಮ್ನಲ್ಲಿರುವ ಶಾರ್ದೂಲ್ ಅವರನ್ನು ಸಹ ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆ ಮಾಡಲಾಗಿಲ್ಲ.

ಸೂರ್ಯಕುಮಾರ್ ಯಾದವ್: ಕಳೆದ ಏಕದಿನ ವಿಶ್ವಕಪ್ನಲ್ಲಿ ಸೂರ್ಯಕುಮಾರ್ ಯಾದವ್ 7 ಇನಿಂಗ್ಸ್ ಆಡಿದ್ದರು. ಈ ಏಳು ಇನಿಂಗ್ಸ್ಗಳಿಂದ ಕಲೆಹಾಕಿದ್ದು ಕೇವಲ 106 ರನ್ಗಳು ಮಾತ್ರ. ಹೀಗಾಗಿ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ತಂಡದಿಂದ ಸೂರ್ಯನನ್ನು ಕೈ ಬಿಡಲಾಗಿದೆ.

ಇಶಾನ್ ಕಿಶನ್: 2023 ರ ಏಕದಿನ ವಿಶ್ವಕಪ್ ತಂಡದಲ್ಲಿ ಇಶಾನ್ ಕಿಶನ್ ಎರಡನೇ ವಿಕೆಟ್ ಕೀಪರ್ ಆಗಿ ಕಾಣಿಸಿಕೊಂಡಿದ್ದರು. ಅಲ್ಲದೆ 2 ಪಂದ್ಯಗಳಲ್ಲಿ ಕಣಕ್ಕಿಳಿಯುವ ಅವಕಾಶ ಪಡೆದಿದ್ದರು. ಇದಾಗ್ಯೂ ಯುವ ದಾಂಡಿಗನ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಹೀಗಾಗಿ ಈ ಬಾರಿಯ ಟೂರ್ನಿಗೆ ಕಿಶನ್ ಅವರನ್ನ ಆಯ್ಕೆಗೆ ಪರಿಗಣಿಸಲಾಗಿಲ್ಲ.

ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ 2023 ರ ಏಕದಿನ ವಿಶ್ವಕಪ್ನಲ್ಲಿ ಒಟ್ಟು 11 ಪಂದ್ಯಗಳಲ್ಲಿ ಬೌಲಿಂಗ್ ಮಾಡಿದ್ದರು. ಈ ವೇಳೆ14 ವಿಕೆಟ್ಗಳನ್ನು ಪಡೆದಿದ್ದರು. ಆದರೆ ಈ ಬಾರಿ ಟೀಮ್ ಇಂಡಿಯಾದ ಮೂರನೇ ವೇಗಿಯಾಗಿ ಸಿರಾಜ್ ಅವರನ್ನು ಪರಿಗಣಿಸಲಾಗಿಲ್ಲ.

ಈ ಐವರ ಸ್ಥಾನದಲ್ಲಿ ಭಾರತ ತಂಡಕ್ಕೆ ಆಯ್ಕೆಯಾದ ಆಟಗಾರರು: ಅರ್ಷದೀಪ್ ಸಿಂಗ್, ಅಕ್ಷರ್ ಪಟೇಲ್, ರಿಷಭ್ ಪಂತ್, ಯಶಸ್ವಿ ಜೈಸ್ವಾಲ್, ವಾಷಿಂಗ್ಟನ್ ಸುಂದರ್.

2025ರ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ರವೀಂದ್ರ ಜಡೇಜಾ.

2023ರ ಏಕದಿನ ವಿಶ್ವಕಪ್ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.
























