AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಪಂದ್ಯದಲ್ಲಿ 5 ವಿಶ್ವ ದಾಖಲೆ ಬರೆದ ಆಸ್ಟ್ರೇಲಿಯಾ..!

Scotland vs Australia: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 154 ರನ್ ಕಲೆಹಾಕಿತು. 155 ರನ್​ಗಳ ಗುರಿಯನ್ನು ಆಸ್ಟ್ರೇಲಿಯಾ ತಂಡ 9.4 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಹಲವು ದಾಖಲೆಗಳನ್ನು ನಿರ್ಮಿಸಿದೆ. ಆ ದಾಖಲೆಗಳ ಸಂಪೂರ್ಣ ವಿವರ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: Sep 05, 2024 | 1:09 PM

Share
ಎಡಿನ್​ಬರ್ಗ್​ನ ಗ್ರೇಂಜ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ನಡೆದ ಸ್ಕಾಟ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಹಲವು ದಾಖಲೆಗಳನ್ನು ಬರೆದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ ತಂಡವು 9 ವಿಕೆಟ್ ಕಳೆದುಕೊಂಡು 154 ರನ್​ ಕಲೆಹಾಕಿತು. ಈ ಗುರಿಯನ್ನು ಕೇವಲ 9.4 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಆಸೀಸ್ ಪಡೆ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡರು. ಆ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ...

1 / 6
ಸತತ ಬೌಂಡರಿಗಳ ದಾಖಲೆ: ಈ ಪಂದ್ಯದ ಪವರ್​ಪ್ಲೇನ ಕೊನೆಯ 14 ಎಸೆತಗಳಲ್ಲಿ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ ಹಾಗೂ ಮಿಚೆಲ್ ಮಾರ್ಷ್ ಸತತ ಬೌಂಡರಿಗಳನ್ನು ಬಾರಿಸಿದ್ದು ವಿಶೇಷ. ಅಂದರೆ 3.5 ಓವರ್​ನಿಂದ 6 ಓವರ್​ವರೆಗೆ 6, 4, 6, 6, 4, 6, 4, 4, 4, 6, 4, 4, 4, 4 ಬಾರಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಸತತ ಬೌಂಡರಿ ಬಾರಿಸಿದ ಹೊಸ ವಿಶ್ವ ದಾಖಲೆ ನಿರ್ಮಿಸಿದರು.

2 / 6
ಪವರ್​ಪ್ಲೇ ದಾಖಲೆ: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಪವರ್​ಪ್ಲೇನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಆಸ್ಟ್ರೇಲಿಯಾ ಪಾಲಾಗಿದೆ. ಆಸೀಸ್ ಪಡೆಯು ಸ್ಕಾಟ್ಲೆಂಡ್ ವಿರುದ್ಧ 6 ಓವರ್​ಗಳಲ್ಲಿ 113 ರನ್​ ಬಾರಿಸಿ ಈ ದಾಖಲೆ ನಿರ್ಮಿಸಿದೆ. ಇದಕ್ಕೂ ಮುನ್ನ ಈ ದಾಖಲೆ ಸೌತ್ ಆಫ್ರಿಕಾ ತಂಡದ ಹೆಸರಿನಲ್ಲಿತ್ತು. 2023 ರಲ್ಲಿ ಸೌತ್ ಆಫ್ರಿಕಾ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಮೊದಲ 6 ಓವರ್​ಗಳಲ್ಲಿ 102 ರನ್ ಬಾರಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದರು.

3 / 6
ಅತ್ಯಂತ ವೇಗದ ಚೇಸ್: ಈ ಪಂದ್ಯದಲ್ಲಿ ಸ್ಕಾಟ್ಲೆಂಡ್ ನೀಡಿದ 155 ರನ್​ಗಳ ಗುರಿಯನ್ನು ಆಸ್ಟ್ರೇಲಿಯಾ ಕೇವಲ 9.4 ಓವರ್​ಗಳಲ್ಲಿ ಚೇಸ್ ಮಾಡಿದೆ. 150+ ಸ್ಕೋರ್​ ಅನ್ನು ಅತೀ ಕಡಿಮೆ ಓವರ್​ಗಳಲ್ಲಿ ಚೇಸ್ ಮಾಡಿದ ವಿಶ್ವ ದಾಖಲೆಯನ್ನು ಆಸ್ಟ್ರೇಲಿಯಾ ತನ್ನದಾಗಿಸಿಕೊಂಡಿದೆ.

4 / 6
ವೇಗದ ಶತಕ: ಟಿ20 ಕ್ರಿಕೆಟ್​ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 100 ರನ್ ಪೂರೈಸಿದ ದಾಖಲೆಯನ್ನು ಸಹ ಆಸ್ಟ್ರೇಲಿಯಾ ನಿರ್ಮಿಸಿದೆ. ಈ ಪಂದ್ಯದಲ್ಲಿ 5.3 ಓವರ್​ಗಳಲ್ಲಿ 100 ರನ್​ಗಳನ್ನು ಪೂರೈಸುವ ಮೂಲಕ ಸೌತ್ ಆಫ್ರಿಕಾ ತಂಡದ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಸರಿಗಟ್ಟಿದೆ. 2023 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸೌತ್ ಆಫ್ರಿಕಾ 5.3 ಓವರ್​ಗಳಲ್ಲಿ 100 ರನ್​ಗಳಿಸಿ ಈ ದಾಖಲೆ ನಿರ್ಮಿಸಿತ್ತು. ಇದೀಗ ಈ ವಿಶ್ವ ದಾಖಲೆಯನ್ನು ಸರಿಗಟ್ಟುವಲ್ಲಿ ಆಸ್ಟ್ರೇಲಿಯಾ ಯಶಸ್ವಿಯಾಗಿದೆ.

5 / 6
ಪವರ್​ಫುಲ್ ದಾಖಲೆ: ಈ ಪಂದ್ಯದ ಪವರ್​ಪ್ಲೇನಲ್ಲಿ ಆಸ್ಟ್ರೇಲಿಯಾ ತಂಡವು ಒಟ್ಟು 24 ಬೌಂಡರಿಗಳನ್ನು ಬಾರಿಸಿದ್ದರು. ಇದರಲ್ಲಿ 17 ಫೋರ್​ ಹಾಗೂ 7 ಸಿಕ್ಸ್​ಗಳು ಒಳಗೊಂಡಿದ್ದವು. ಇದು ಟಿ20 ಕ್ರಿಕೆಟ್ ಇತಿಹಾಸ ಪವರ್​ಪ್ಲೇನಲ್ಲಿ ಮೂಡಿಬಂದ ಗರಿಷ್ಠ ಬೌಂಡರಿಗಳಾಗಿವೆ. ಈ ಮೂಲಕ ಪವರ್​ಪ್ಲೇನಲ್ಲಿ ಅತ್ಯಧಿಕ ಬೌಂಡರಿಗಳನ್ನು ಸಿಡಿಸಿದ ವಿಶೇಷ ವಿಶ್ವ ದಾಖಲೆಯನ್ನು ಆಸ್ಟ್ರೇಲಿಯಾ ತನ್ನದಾಗಿಸಿಕೊಂಡಿದೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ