Updated on: Sep 06, 2023 | 8:01 PM
ಅಕ್ಟೋಬರ್ 5 ರಿಂದ ಶುರುವಾಗಲಿರುವ ಏಕದಿನ ವಿಶ್ವಕಪ್ಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಇನ್ನು ಉಪನಾಯಕನಾಗಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ.
ಹಾಗೆಯೇ ವಿಕೆಟ್ ಕೀಪರ್ಗಳಾಗಿ ಕೆಎಲ್ ರಾಹುಲ್ ಹಾಗೂ ಇಶಾನ್ ಕಿಶನ್ ಆಯ್ಕೆಯಾಗಿದ್ದಾರೆ. ಇತ್ತ ಮತ್ತೋರ್ವ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವಕಾಶ ವಂಚಿತರಾಗಿದ್ದಾರೆ. ಸ್ಯಾಮ್ಸನ್ ಅಲ್ಲದೆ ಟೀಮ್ ಇಂಡಿಯಾ ಬಳಗದಲ್ಲಿ ಕಾಣಿಸಿಕೊಳ್ಳದ ಕೆಲ ಸ್ಟಾರ್ ಆಟಗಾರರ ಪಟ್ಟಿ ಇಲ್ಲಿದೆ...
1- ಶಿಖರ್ ಧವನ್: ಎಡಗೈ ಆರಂಭಿಕ ಆಟಗಾರ ಶಿಖರ್ ಧವನ್ ಟೀಮ್ ಇಂಡಿಯಾ ಪರ 137 ಏಕದಿನ ಪಂದ್ಯಗಳಲ್ಲಿ 6793 ರನ್ ಕಲೆಹಾಕಿದ್ದಾರೆ. ಆದರೆ 37 ವರ್ಷದ ಧವನ್ ಅವರನ್ನು ಈ ಬಾರಿಯ ಏಕದಿನ ವಿಶ್ವಕಪ್ ತಂಡದ ಆಯ್ಕೆಗೆ ಅವರನ್ನು ಪರಿಗಣಿಸಲಾಗಿಲ್ಲ.
2- ರವಿಚಂದ್ರನ್ ಅಶ್ವಿನ್: ಟೀಮ್ ಇಂಡಿಯಾ ಪರ 113 ಏಕದಿನ ಪಂದ್ಯಗಳಿಂದ 151 ವಿಕೆಟ್ ಕಬಳಿಸಿರುವ ರವಿಚಂದ್ರನ್ ಅಶ್ವಿನ್ ಅವರನ್ನು ಸಹ ವಿಶ್ವಕಪ್ಗಾಗಿ ಆಯ್ಕೆ ಮಾಡಲಾಗಿಲ್ಲ.
3- ಭುವನೇಶ್ವರ್ ಕುಮಾರ್: ಭಾರತದ ಪರ 121 ಏಕದಿನ ಪಂದ್ಯಗಳನ್ನಾಡಿರುವ ಸ್ವಿಂಗ್ ಮಾಸ್ಟರ್ ಭುವನೇಶ್ವರ್ ಕುಮಾರ್ ಒಟ್ಟು 141 ವಿಕೆಟ್ ಕಬಳಿಸಿದ್ದಾರೆ. ಇದಾಗ್ಯೂ ಅವರನ್ನೂ ಸಹ ಈ ಬಾರಿ ಆಯ್ಕೆಗೆ ಪರಿಗಣಿಸಲಾಗಿಲ್ಲ.
4- ಯುಜ್ವೇಂದ್ರ ಚಹಲ್: ಈ ಬಾರಿಯ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದ ಚಹಲ್ ಅವರನ್ನು ಸಹ ಆಯ್ಕೆ ಮಾಡಲಾಗಿಲ್ಲ. ಒಟ್ಟು 72 ಏಕದಿನ ಪಂದ್ಯಗಳನ್ನಾಡಿರುವ ಚಹಲ್ 121 ವಿಕೆಟ್ ಕಬಳಿಸಿದ್ದಾರೆ. ಇದಾಗ್ಯೂ ಸ್ಪಿನ್ನರ್ ಆಗಿ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.
5- ಸಂಜು ಸ್ಯಾಮ್ಸನ್: ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಸಂಜು ಸ್ಯಾಮ್ಸನ್ಗೆ ಮತ್ತೆ ನಿರಾಸೆಯಾಗಿದೆ. ಟೀಮ್ ಇಂಡಿಯಾ ಪರ 13 ಪಂದ್ಯಗಳಲ್ಲಿ 55.71 ಸರಾಸರಿಯಲ್ಲಿ 390 ರನ್ ಪೇರಿಸಿರುವ ಸ್ಯಾಮ್ಸನ್ ಅವರು ಕೂಡ ಅವಕಾಶ ವಂಚಿತರಾಗಿದ್ದಾರೆ.