ಒಂದೇ ತಿಂಗಳಲ್ಲಿ 6 ಆಟಗಾರರು ನಿವೃತ್ತಿ 😳
ರೋಹಿತ್ ಶರ್ಮಾ ಅವರ ಟೆಸ್ಟ್ ನಿವೃತ್ತಿಯೊಂದಿಗೆ ಶುರುವಾದ ಸ್ಟಾರ್ ಆಟಗಾರರ ಗುಡ್ ಬೈ ಪರ್ವ ಮುಂದುವರೆದಿದೆ. ಅದರಲ್ಲೂ ಮೇ ಮತ್ತು ಜೂನ್ ತಿಂಗಳ ನಡುವೆ ಒಟ್ಟು 6 ಆಟಗಾರರು ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ. ಇವರಲ್ಲಿ ಟೀಮ್ ಇಂಡಿಯಾದ ಇಬ್ಬರು ಆಟಗಾರರು ಕೂಡ ಇರುವುದು ವಿಶೇಷ.
Updated on:Jun 10, 2025 | 12:57 PM

ಕೇವಲ ಒಂದು ತಿಂಗಳಲ್ಲಿ 6 ಸ್ಟಾರ್ ಆಟಗಾರರು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಇವರಲ್ಲಿ ಕೆಲವರು ಕೆಲ ಫಾರ್ಮಾಟ್ಗಳಿಗೆ ವಿದಾಯ ಹೇಳಿದರೆ, ಇನ್ನು ಕೆಲವರು ಎಲ್ಲಾ ಸ್ವರೂಪಗಳ ಕ್ರಿಕೆಟ್ಗೆ ಗುಡ್ ಬೈ ಹೇಳಿದ್ದಾರೆ. ಹೀಗೆ ಕಳೆದ ಒಂದು ತಿಂಗಳಲ್ಲಿ ನಿವೃತ್ತಿ ಘೋಷಿಸಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ರೋಹಿತ್ ಶರ್ಮಾ: ಭಾರತ ತಂಡದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಕಳೆದ ತಿಂಗಳು ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದರು. ಈಗಾಗಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿರುವ ಹಿಟ್ಮ್ಯಾನ್ ಇನ್ಮುಂದೆ ಏಕದಿನ ಕ್ರಿಕೆಟ್ನಲ್ಲಿ ಮಾತ್ರ ಟೀಮ್ ಇಂಡಿಯಾವನ್ನು ಪ್ರತಿನಿಧಿಸಲಿದ್ದಾರೆ.

ವಿರಾಟ್ ಕೊಹ್ಲಿ: ರೋಹಿತ್ ಶರ್ಮಾ ಬೆನ್ನಲ್ಲೇ ವಿರಾಟ್ ಕೊಹ್ಲಿ ಕೂಡ ಟೆಸ್ಟ್ ಕ್ರಿಕೆಟ್ಗೆ ಗುಡ್ ಬೈ ಹೇಳಿದ್ದಾರೆ. ಮೇ 12 ರಂದು ಸೋಷಿಯಲ್ ಮೀಡಿಯಾ ಮೂಲಕ ಟೆಸ್ಟ್ ನಿವೃತ್ತಿ ಪ್ರಕಟಿಸಿರುವ ಕಿಂಗ್ ಕೊಹ್ಲಿ ಇನ್ನು ಏಕದಿನ ಕ್ರಿಕೆಟ್ನಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ 2024 ರ ಟಿ20 ವಿಶ್ವಕಪ್ ಬೆನ್ನಲ್ಲೇ ಅವರು ಚುಟುಕು ಕ್ರಿಕೆಟ್ಗೆ ವಿದಾಯ ಹೇಳಿದ್ದರು.

ಏಂಜೆಲೊ ಮ್ಯಾಥ್ಯೂಸ್: ಶ್ರೀಲಂಕಾ ತಂಡದ ಸ್ಟಾರ್ ಆಲ್ರೌಂಡರ್ ಏಂಜೆಲೊ ಮ್ಯಾಥ್ಯೂಸ್ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. 38 ವರ್ಷದ ಮ್ಯಾಥ್ಯೂಸ್ ಏಕದಿನ ಮತ್ತು ಟಿ20 ಕ್ರಿಕೆಟ್ನಲ್ಲಿ ಮುಂದುವರೆಯುವ ಇಚ್ಛೆ ಹೊಂದಿದ್ದರೂ, ವಯಸ್ಸಿನ ಕಾರಣ ಅವರಿಗೆ ಮುಂಬರುವ ದಿನಗಳಲ್ಲಿ ಚಾನ್ಸ್ ಸಿಗುವ ಸಾಧ್ಯತೆಯಿಲ್ಲ ಎನ್ನಬಹುದು.

ಗ್ಲೆನ್ ಮ್ಯಾಕ್ಸ್ವೆಲ್: ಆಸ್ಟ್ರೇಲಿಯಾ ತಂಡದ ಪ್ರಮುಖ ಆಟಗಾರ ಗ್ಲೆನ್ ಮ್ಯಾಕ್ಸ್ವೆಲ್ ಏಕದಿನ ಕ್ರಿಕೆಟ್ಗೆ ಗುಡ್ ಬೈ ಹೇಳಿದ್ದಾರೆ. ಇದಾಗ್ಯೂ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಮುಂದುವರೆಯುವುದಾಗಿ ಮ್ಯಾಕ್ಸ್ವೆಲ್ ತಿಳಿಸಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಮ್ಯಾಕ್ಸಿಯನ್ನು ಟಿ20 ಪಂದ್ಯಗಳನ್ನು ಮಾತ್ರ ಎದುರು ನೋಡಬಹುದು.

ಹೆನ್ರಿಕ್ ಕ್ಲಾಸೆಕ್: ಸೌತ್ ಆಫ್ರಿಕಾ ತಂಡದ ಹೊಡಿಬಡಿ ದಾಂಡಿಗ ಹೆನ್ರಿಕ್ ಕ್ಲಾಸೆನ್ ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಕುಟುಂಬದೊಂದಿಗೆ ಸಮಯ ಕಳೆಯಲು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿರುವ 33 ವರ್ಷದ ಕ್ಲಾಸೆನ್, ಮುಂಬರುವ ದಿನಗಳಲ್ಲಿ ಟಿ20 ಲೀಗ್ಗಳಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ.

ನಿಕೋಲಸ್ ಪೂರನ್: ವೆಸ್ಟ್ ಇಂಡೀಸ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ನಿಕೋಲಸ್ ಪೂರನ್ ಕೂಡ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಅದು ಕೂಡ 29ನೇ ವಯಸ್ಸಿನಲ್ಲಿ ಎಂಬುದು ಅಚ್ಚರಿ. ಇದಾಗ್ಯೂ ಟಿ20 ಲೀಗ್ನಲ್ಲಿ ಕಣಕ್ಕಿಳಿಯುವುದಾಗಿ ಪೂರನ್ ತಿಳಿಸಿದ್ದಾರೆ.
Published On - 12:54 pm, Tue, 10 June 25









