
ಭಾರತ ಮತ್ತು ಝಿಂಬಾಬ್ವೆ ನಡುವಣ 3 ಪಂದ್ಯಗಳ ಟಿ20 ಸರಣಿಯು ಇಂದಿನಿಂದ ಶುರುವಾಗಲಿದೆ. ಹರಾರೆಯಲ್ಲಿ ನಡೆಯಲಿರುವ ಈ ಸರಣಿಯಿಂದ ಟೀಮ್ ಇಂಡಿಯಾದ 7 ಆಟಗಾರರು ಹೊರಗುಳಿದಿದ್ದಾರೆ. ಅಂದರೆ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಕಾಣಿಸಿಕೊಂಡಿದ್ದ ಏಳು ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಅವರ ಬದಲಿಗೆ ಕೆಲ ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಅದರಂತೆ ಝಿಂಬಾಬ್ವೆ ವಿರುದ್ಧದ ಸರಣಿಗೆ ಅಲಭ್ಯರಾಗಿರುವ 7 ಆಟಗಾರರು ಯಾರೆಲ್ಲಾ ಎಂದು ನೋಡುವುದಾದರೆ... (PC: Getty Images)

ಸಂಜು ಸ್ಯಾಮ್ಸನ್: ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ಸಂಜು ಸ್ಯಾಮ್ಸನ್ ಝಿಂಬಾಬ್ವೆ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ವಿಶ್ರಾಂತಿ ನೀಡುವ ಸಲುವಾಗಿ ಅವರನ್ನು ಈ ಸರಣಿಯಿಂದ ಕೈ ಬಿಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ. (PC: Getty Images)

ಅಕ್ಷರ್ ಪಟೇಲ್: ಟೀಮ್ ಇಂಡಿಯಾ ಆಲ್ರೌಂಡರ್ ಅಕ್ಷರ್ ಪಟೇಲ್ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಗಳಲ್ಲಿ ಕಣಕ್ಕಿಳಿದಿದ್ದರು. ಆದರೆ ಝಿಂಬಾಬ್ವೆ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾದ ಟೀಮ್ ಇಂಡಿಯಾದಲ್ಲಿ ಅಕ್ಷರ್ ಪಟೇಲ್ ಹೆಸರು ಕಾಣಿಸಿಕೊಂಡಿಲ್ಲ. (PC: Getty Images)

ವಾಷಿಂಗ್ಟನ್ ಸುಂದರ್: ಭಾರತ ತಂಡದ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಕೂಡ ಝಿಂಬಾಬ್ವೆ ವಿರುದ್ಧದ ಸರಣಿಗೆ ಆಯ್ಕೆಯಾಗಿಲ್ಲ. ವಿಶ್ರಾಂತಿ ನೀಡುವ ಸಲುವಾಗಿ ಅವರನ್ನು ಕೂಡ ಬಿಸಿಸಿಐ ಕೈ ಬಿಟ್ಟಿರುವ ಸಾಧ್ಯತೆಯಿದೆ. (PC: Getty Images)

ಅರ್ಷದೀಪ್ ಸಿಂಗ್: ಟೀಮ್ ಇಂಡಿಯಾ ವೇಗಿ ಅರ್ಷದೀಪ್ ಸಿಂಗ್ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಗಳಲ್ಲಿ ಕಣಕ್ಕಿಳಿದಿದ್ದರು. ಇದೀಗ ವಿಶ್ರಾಂತಿಯ ಕಾರಣ ಎಡಗೈ ವೇಗಿ ಝಿಂಬಾಬ್ವೆ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. (PC: Getty Images)

ಪ್ರಸಿದ್ಧ್ ಕೃಷ್ಣ: ಭಾರತ ತಂಡದ ವೇಗಿ ಪ್ರಸಿದ್ಧ್ ಕೃಷ್ಣ ಅವರನ್ನು ಝಿಂಬಾಬ್ವೆ ವಿರುದ್ಧದ ಸರಣಿಯಿಂದ ಕೈ ಬಿಡಲಾಗಿದೆ. ಅವರ ಬದಲಿಗೆ ರಾಜಧಾನಿ ಎಕ್ಸ್ಪ್ರೆಸ್ ಖ್ಯಾತಿಯ ವೇಗದ ಬೌಲರ್ ಆಗಿ ಮಯಾಂಕ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ. (PC: Getty Images)

ಹರ್ಷಿತ್ ರಾಣಾ: ಟೀಮ್ ಇಂಡಿಯಾ ವೇಗಿ ಹರ್ಷಿತ್ ರಾಣಾ ಐರ್ಲೆಂಡ್ ವಿರುದ್ಧದ ಸರಣಿಯ ಮೂಲಕ ಕಂಬ್ಯಾಕ್ ಮಾಡಿದ್ದರು. ಇನ್ನು ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲೂ ಕಣಕ್ಕಿಳಿದಿದ್ದರು. ಇದಾಗ್ಯೂ ಝಿಂಬಾಬ್ವೆ ವಿರುದ್ಧದ ಸರಣಿಗೆ ರಾಣಾ ಅವರನ್ನು ಆಯ್ಕೆ ಮಾಡಲಾಗಿಲ್ಲ.

ವರುಣ್ ಚಕ್ರವರ್ತಿ: ಇಂಗ್ಲೆಂಡ್ ವಿರುದ್ಧದ ಸರಣಿ ವೇಳೆ ಟೀಮ್ ಇಂಡಿಯಾ ಸ್ಪಿನ್ನರ್ ವರುಣ್ ಚಕ್ರವರ್ತಿ ಗಾಯಗೊಂಡಿದ್ದರು. ಈ ಗಾಯದ ಕಾರಣ ಅವರು ಝಿಂಬಾಬ್ವೆ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ರವಿ ಬಿಷ್ಣೋಯ್ ತಂಡವನ್ನು ಸೇರಿಕೊಂಡಿದ್ದಾರೆ. (PC: Getty Images)

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್, ತಿಲಕ್ ವರ್ಮಾ , ಇಶಾನ್ ಕಿಶನ್ (ವಿಕೆಟ್ ಕೀಪರ್), ಪ್ರಭ್‌ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ಶಿವಂ ದುಬೆ, ಸೂರ್ಯಾಂಶ್ ಶೆಡ್ಗೆ, ರಿಂಕು ಸಿಂಗ್, ಹರ್ಷ್ ದುಬೆ, ರವಿ ಬಿಷ್ಣೋಯ್, ಪ್ರಿನ್ಸ್ ಯಾದವ್, ಯಶ್ ಠಾಕೂರ್, ಅಶೋಕ್ ಶರ್ಮಾ ಮತ್ತು ಮಯಾಂಕ್ ಯಾದವ್. (PC: BCCI)