ಟೀಮ್ ಇಂಡಿಯಾದಿಂದ 8 ಆಟಗಾರರು ಔಟ್

Updated on: May 25, 2025 | 9:57 AM

India Squad For England Test Series: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಆಂಗ್ಲರ ನಾಡಿನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ 5 ಪಂದ್ಯಗಳನ್ನಾಡಲಿದೆ. ಈ ಪಂದ್ಯಗಳಿಗೆ ಯುವ ಪಡೆಗಳನ್ನು ಒಳಗೊಂಡ 18 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ.

1 / 11
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾವನ್ನು ಹೆಸರಿಸಲಾಗಿದೆ. 18 ಸದಸ್ಯರುಗಳ ಈ ತಂಡವನ್ನು ಶುಭ್​​ಮನ್ ಗಿಲ್ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕನಾಗಿ ಕಾಣಿಸಿಕೊಳ್ಳಲಿರುವುದು ರಿಷಭ್ ಪಂತ್. ಅಂದರೆ ಇದೇ ಮೊದಲ ಬಾರಿಗೆ ಇಬ್ಬರು ಯುವ ಆಟಗಾರರಿಗೆ ಭಾರತ ಟೆಸ್ಟ್ ತಂಡದ ಚುಕ್ಕಾಣಿ ನೀಡಲಾಗಿದೆ. 

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾವನ್ನು ಹೆಸರಿಸಲಾಗಿದೆ. 18 ಸದಸ್ಯರುಗಳ ಈ ತಂಡವನ್ನು ಶುಭ್​​ಮನ್ ಗಿಲ್ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕನಾಗಿ ಕಾಣಿಸಿಕೊಳ್ಳಲಿರುವುದು ರಿಷಭ್ ಪಂತ್. ಅಂದರೆ ಇದೇ ಮೊದಲ ಬಾರಿಗೆ ಇಬ್ಬರು ಯುವ ಆಟಗಾರರಿಗೆ ಭಾರತ ಟೆಸ್ಟ್ ತಂಡದ ಚುಕ್ಕಾಣಿ ನೀಡಲಾಗಿದೆ. 

2 / 11

ಇದಕ್ಕೂ ಮುನ್ನ ಭಾರತ ಟೆಸ್ಟ್ ತಂಡದ ನಾಯಕನಾಗಿ ರೋಹಿತ್ ಶರ್ಮಾ ಹಾಗೂ ಉಪನಾಯಕನಾಗಿ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಂಡಿದ್ದರು. ಆದರೆ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿನ ಹೀನಾಯ ಸೋಲಿನ ಬಳಿಕ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಅದರಂತೆ ಕಳೆದ ಬಾರಿ ಟೆಸ್ಟ್ ತಂಡದಲ್ಲಿದ್ದ 8 ಆಟಗಾರರು ಈ ಬಾರಿ ಸ್ಥಾನ ಪಡೆದಿಲ್ಲ. ಅವರೆಂದರೆ...

3 / 11

ದೇವದತ್ ಪಡಿಕ್ಕಲ್: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಎಡಗೈ ದಾಂಡಿಗ ದೇವದತ್ ಪಡಿಕ್ಕಲ್ ಕಾಣಿಸಿಕೊಂಡಿದ್ದರು. ಆದರೆ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಪಡಿಕ್ಕಲ್ ಅವರನ್ನು ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾಗಿಲ್ಲ.

4 / 11

ಸರ್ಫರಾಝ್ ಖಾನ್: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ವೇಳೆ ಭಾರತ ತಂಡದ ಭಾಗವಾಗಿದ್ದ ಸರ್ಫರಾಝ್ ಖಾನ್ ಅವರನ್ನು ಸಹ ತಂಡದಿಂದ ಕೈ ಬಿಡಲಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಸರ್ಫರಾಝ್ ಬೆಂಚ್ ಕಾದಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧದ ಸರಣಿಗೆ ಅವರನ್ನು ಆಯ್ಕೆ ಮಾಡಿಲ್ಲ ಎಂಬುದೇ ಅಚ್ಚರಿ.

5 / 11

ಹರ್ಷಿತ್ ರಾಣಾ; ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾದ ಪ್ರಮುಖ ವೇಗಿಯಾಗಿ ಹರ್ಷಿತ್ ರಾಣಾ ಕಾಣಿಸಿಕೊಂಡಿದ್ದರು. ಆದರೆ ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾದ 18 ಸದಸ್ಯರಲ್ಲಿ ಹರ್ಷಿತ್​ಗೆ ಸ್ಥಾನ ನೀಡಲಾಗಿಲ್ಲ.

6 / 11

ತನುಷ್ ಕೋಟ್ಯಾನ್: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ಮುಂಬೈನ ಸ್ಪಿನ್ ಆಲ್​ರೌಂಡರ್ ತನುಷ್ ಕೋಟ್ಯಾನ್ ಆಯ್ಕೆಯಾಗಿದ್ದರು. ಆದರೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಸ್ಥಾನ ಪಡೆಯುವಲ್ಲಿ ತನುಷ್ ವಿಫಲರಾಗಿದ್ದಾರೆ.

7 / 11

ಮೊಹಮ್ಮದ್ ಶಮಿ: ಟೀಮ್ ಇಂಡಿಯಾದ ಅನುಭವಿ ವೇಗಿ ಮೊಹಮ್ಮದ್ ಶಮಿ ಅವರನ್ನು ಸಹ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಪರಿಗಣಿಸಲಾಗಿಲ್ಲ. ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು 5 ಪಂದ್ಯಗಳ ಈ ಸರಣಿಯಿಂದ ಕೈ ಬಿಡಲು ಆಯ್ಕೆ ಸಮಿತಿ ನಿರ್ಧರಿಸಿದೆ.

8 / 11

ರವಿಚಂದ್ರನ್ ಅಶ್ವಿನ್: ಟೀಮ್ ಇಂಡಿಯಾದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಬಾರ್ಡರ್ - ಗವಾಸ್ಕರ್ ಟೆಸ್ಟ್ ಸರಣಿಯ ನಡುವೆ ದಿಢೀರ್ ನಿವೃತ್ತಿ ಘೋಷಿಸಿದ್ದರು. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಸರಣಿಗೆ ಅಶ್ವಿನ್ ಅವರನ್ನು ಪರಿಗಣಿಸಲಾಗಿಲ್ಲ.

9 / 11

ರೋಹಿತ್ ಶರ್ಮಾ: ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಭಾರತ ಟೆಸ್ಟ್ ತಂಡದ ನಾಯಕರಾಗಿದ್ದ ರೋಹಿತ್ ಶರ್ಮಾ ಕೆಲ ದಿನಗಳ ಹಿಂದೆಯಷ್ಟೇ ಟೆಸ್ಟ್ ಕ್ರಿಕೆಟ್​​ಗೆ ನಿವೃತ್ತಿ ಘೋಷಿಸಿದ್ದರು. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಸರಣಿಗೆ ಅವರನ್ನು ಪರಿಗಣಿಸಲಾಗಿಲ್ಲ.

10 / 11

ವಿರಾಟ್ ಕೊಹ್ಲಿ: ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕೂಡ ಕೆಲ ದಿನಗಳ ಹಿಂದೆಯಷ್ಟೇ ಟೆಸ್ಟ್ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದರು. ಹೀಗಾಗಿ ಅವರನ್ನು ಸಹ ಆಯ್ಕೆಗೆ ಪರಿಗಣಿಸಲಾಗಿಲ್ಲ. ಹೀಗಾಗಿ ಈ ಬಾರಿಯ ಇಂಗ್ಲೆಂಡ್ ಸರಣಿಯಲ್ಲಿ ಯುವ ಆಟಗಾರರು ಕಣಕ್ಕಿಳಿಯಲಿದ್ದಾರೆ.

11 / 11

ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್.

Loading...
Unable to load recommendations.
Follow Us