Updated on: Mar 16, 2024 | 10:11 PM
ಜೂನ್‌ನಲ್ಲಿ ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಪಾಕಿಸ್ತಾನದ ಮಾಜಿ ವೇಗದ ಬೌಲರ್ ಆಕಿಬ್ ಜಾವೇದ್ ಅವರನ್ನು ತಂಡದ ವೇಗದ ಬೌಲಿಂಗ್ ಕೋಚ್ ಆಗಿ ನೇಮಿಸಿದೆ.
ಕ್ರಿಕೆಟ್ ಶ್ರೀಲಂಕಾ ಪತ್ರಿಕಾ ಪ್ರಕಟಣೆ ಹೊರಡಿಸಿ ಈ ಮಾಹಿತಿ ನೀಡಿದ್ದು, ನಾವು ಜಾವೇದ್ರನ್ನು ಆತ್ಮೀಯವಾಗಿ ಸ್ವಾಗತಿಸುತ್ತೇವೆ. ಆಟಗಾರನಾಗಿ ಹಾಗೂ ಕೋಚ್ ಆಗಿ ಅವರ ಅಪಾರ ಅನುಭವವು ಮುಂಬರುವ ಟಿ20 ವಿಶ್ವಕಪ್ ಸೇರಿದಂತೆ ಪ್ರಮುಖ ಅಂತರರಾಷ್ಟ್ರೀಯ ಟೂರ್ನಿಗಳಲ್ಲಿ ನಮ್ಮ ಬೌಲರ್ಗಳು ಉತ್ತಮ ಪ್ರದರ್ಶನ ನೀಡಲು ನೆರವಾಗುವ ವಿಶ್ವಾಸವಿದೆ ಎಂದಿದೆ.
ಲಂಕಾ ತಂಡವನ್ನು ಸೇರುವುದಕ್ಕೂ ಮುನ್ನ ಜಾವೇದ್ ಪಾಕಿಸ್ತಾನ ಮತ್ತು ಯುಎಇ ತಂಡಗಳ ಜೊತೆಯೂ ಕೆಲಸ ಮಾಡಿದ್ದಾರೆ. ಅಲ್ಲದೆ ಅವರು ಪಾಕಿಸ್ತಾನ ತಂಡದ ಬೌಲಿಂಗ್ ಕೋಚ್ ಆಗಿಯೂ ಸೇವೆ ಸಲ್ಲಿಸಿದ್ದರು. ಅಲ್ಲದೆ 2009 ರಲ್ಲಿ ಪಾಕಿಸ್ತಾನ ತಂಡ ಇಂಗ್ಲೆಂಡ್‌ನಲ್ಲಿ ಟಿ 20 ವಿಶ್ವಕಪ್ ಗೆದ್ದಾಗ ಆಕಿಬ್ ತಂಡದ ಬೌಲಿಂಗ್ ಕೋಚ್ ಆಗಿದ್ದರು.
ಇದಲ್ಲದೆ, ಅವರು ಯುಎಇ ತಂಡದ ಕೋಚ್ ಆಗಿ ಮತ್ತು ಅಫ್ಘಾನಿಸ್ತಾನ ಕ್ರಿಕೆಟ್ ತಂಡದೊಂದಿಗೆ ಕೆಲಸ ಮಾಡಿದ್ದಾರೆ. ಯುಎಇಯಲ್ಲಿ ಅವರ ಅಧಿಕಾರಾವಧಿಯಲ್ಲಿ, ತಂಡವು ಏಕದಿನ ಮತ್ತು ಅಂತರಾಷ್ಟ್ರೀಯ ಟಿ20 ಆಟದ ಸ್ಥಾನಮಾನವನ್ನು ಸಾಧಿಸಿತ್ತು.
ಪಾಕಿಸ್ತಾನ ಪರ 163 ಏಕದಿನ ಮತ್ತು 22 ಟೆಸ್ಟ್ ಪಂದ್ಯಗಳನ್ನು ಆಡಿರುವ ಆಕಿಬ್ ಜಾವೇದ್, ಒಟ್ಟು 236 ವಿಕೆಟ್ಗಳನ್ನು ಉರುಳಿಸಿದ್ದಾರೆ. ಅಲ್ಲದೆ 1992 ರಲ್ಲಿ ವಿಶ್ವಕಪ್ ಗೆದ್ದ ಪಾಕಿಸ್ತಾನ ತಂಡದ ಸದಸ್ಯರೂ ಆಗಿದ್ದರು.