Aaron Finch: ವಿಶ್ವ ದಾಖಲೆಯೊಂದಿಗೆ ವಿದಾಯ ಹೇಳಿದ ಆರೋನ್ ಫಿಂಚ್
TV9 Web | Updated By: ಝಾಹಿರ್ ಯೂಸುಫ್
Updated on:
Feb 07, 2023 | 10:59 PM
Aaron Finch: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಸ್ಕೋರ್ಗಳಿಸಿದ ದಾಖಲೆ ಈಗಲೂ ಫಿಂಚ್ ಹೆಸರಿನಲ್ಲಿದೆ. ಹಾಗಿದ್ರೆ ಟಿ20 ಕ್ರಿಕೆಟ್ನಲ್ಲಿ ಗರಿಷ್ಠ ರನ್ ಬಾರಿಸಿದ ಆಟಗಾರರು ಯಾರೆಲ್ಲಾ ನೋಡೋಣ...
1 / 7
ಆಸ್ಟ್ರೇಲಿಯಾ ಟಿ20 ತಂಡದ ನಾಯಕ ಆರೋನ್ ಫಿಂಚ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಈ ಹಿಂದೆಯೇ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತರಾಗಿದ್ದ ಅವರು ಟಿ20 ಕ್ರಿಕೆಟ್ನಲ್ಲಿ ಮುಂದುವರೆದಿದ್ದರು.
2 / 7
2024ರ ಟಿ20 ವಿಶ್ವಕಪ್ವರೆಗೆ ನಾನು ಆಸ್ಟ್ರೇಲಿಯಾ ಪರ ಆಡುವುದು ಅನುಮಾನ. ಹೀಗಾಗಿ ಇದು ನಿವೃತ್ತಿ ಹೊಂದಲು ಸರಿಯಾದ ಸಮಯ ಅನಿಸಿತು. ಹಾಗಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ವಿದಾಯ ಹೇಳುತ್ತಿರುವುದಾಗಿ ಫಿಚ್ ತಿಳಿಸಿದ್ದಾರೆ.
3 / 7
ವಿಶೇಷ ಎಂದರೆ 12 ವರ್ಷಗಳ ಆಸ್ಟ್ರೇಲಿಯಾ ತಂಡವನ್ನು ಪ್ರತಿನಿಧಿಸಿದ ಆರೋನ್ ಫಿಂಚ್ ವಿಶ್ವ ದಾಖಲೆಯೊಂದಿಗೆ ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಅಂದರೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಸ್ಕೋರ್ಗಳಿಸಿದ ದಾಖಲೆ ಈಗಲೂ ಫಿಂಚ್ ಹೆಸರಿನಲ್ಲಿದೆ. ಹಾಗಿದ್ರೆ ಟಿ20 ಕ್ರಿಕೆಟ್ನಲ್ಲಿ ಗರಿಷ್ಠ ರನ್ ಬಾರಿಸಿದ ಆಟಗಾರರು ಯಾರೆಲ್ಲಾ ನೋಡೋಣ...
4 / 7
1- ಆರೋನ್ ಫಿಂಚ್: 2018 ರಲ್ಲಿ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಆರೋನ್ ಫಿಂಚ್ 10 ಭರ್ಜರಿ ಸಿಕ್ಸ್ ಹಾಗೂ 16 ಫೋರ್ನೊಂದಿಗೆ ಕೇವಲ 76 ಎಸೆತಗಳಲ್ಲಿ 172 ರನ್ ಬಾರಿಸಿದ್ದರು. ಇದು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಮೂಡಿಬಂದ ಗರಿಷ್ಠ ಸ್ಕೋರ್ ಆಗಿದೆ. ಇದು ಈಗಲೂ ವಿಶ್ವ ದಾಖಲೆಯಾಗಿ ಉಳಿದಿರುವುದು ವಿಶೇಷ.
5 / 7
2- ಹಝ್ರತುಲ್ಲಾ ಝಝೈ: ಅಫ್ಘಾನಿಸ್ತಾನದ ಆರಂಭಿಕ ಆಟಗಾರ 2019 ರಲ್ಲಿ ಐರ್ಲೆಂಡ್ ವಿರುದ್ಧ 62 ಎಸೆತಗಳಲ್ಲಿ ಅಜೇಯ 162 ರನ್ ಬಾರಿಸಿದ್ದರು. ಇದು ಟಿ20 ಕ್ರಿಕೆಟ್ನ 2ನೇ ಗರಿಷ್ಠ ಸ್ಕೋರ್ ಆಗಿದೆ.
6 / 7
3- ಆರೋನ್ ಫಿಂಚ್: ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲೂ ಆರೋನ್ ಫಿಂಚ್ ಇರುವುದು ವಿಶೇಷ. 2013 ರಲ್ಲಿ ಇಂಗ್ಲೆಂಡ್ ವಿರುದ್ಧ ಕೇವಲ 63 ಎಸೆತಗಳಲ್ಲಿ 156 ರನ್ ಬಾರಿಸಿ ಅಬ್ಬರಿಸಿದ್ದರು.
7 / 7
4- ಗ್ಲೆನ್ ಮ್ಯಾಕ್ಸ್ವೆಲ್: ಆಸ್ಟ್ರೇಲಿಯಾದ ಸ್ಪೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್ವೆಲ್ 2016 ರಲ್ಲಿ ಶ್ರೀಲಂಕಾ ವಿರುದ್ಧ ಕೇವಲ 65 ಎಸೆತಗಳಲ್ಲಿ ಅಜೇಯ 145 ರನ್ ಬಾರಿಸಿ ಮಿಂಚಿದ್ದರು.