
ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಆರೋನ್ ಫಿಂಚ್ ಟಿ20 ವಿಶ್ವಕಪ್ಗೆ ಆಸೀಸ್ ಆಡುವ ಬಳಗವನ್ನು ಹೆಸರಿಸಿದ್ದಾರೆ. ಒಟ್ಟು 12 ಆಟಗಾರರನ್ನು ಆಯ್ಕೆ ಮಾಡಿರುವ ಫಿಂಚ್, ಮ್ಯಾಥ್ಯೂ ಶಾರ್ಟ್ ಅವರನ್ನು ಪರಿಸ್ಥಿತಿಗೆ ತಕ್ಕಂತೆ ಬಳಸಿಕೊಳ್ಳುವುದು ಉತ್ತಮ ಎಂದಿದ್ದಾರೆ. ಅಲ್ಲದೆ ತಂಡದ ಪರ ಆರಂಭಿಕರಾಗಿ ಡೇವಿಡ್ ವಾರ್ನರ್ ಹಾಗೂ ಟ್ರಾವಿಸ್ ಹೆಡ್ ಕಣಕ್ಕಿಳಿಯುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.

ಜೂನ್ 1 ರಿಂದ ಶುರುವಾಗಲಿರುವ ಈ ಬಾರಿಯ ವಿಶ್ವಕಪ್ನಲ್ಲಿ ಡೇವಿಡ್ ವಾರ್ನರ್ ಹಾಗೂ ಟ್ರಾವಿಸ್ ಹೆಡ್ ಓಪನರ್ಗಳಾಗಿ ಕಣಕ್ಕಿಳಿಯಬೇಕು. ಹಾಗೆಯೇ 3ನೇ ಕ್ರಮಾಂಕದಲ್ಲಿ ಮಿಚೆಲ್ ಮಾರ್ಷ್ ಹಾಗೂ 4ನೇ ಕ್ರಮಾಂಕದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಆಡಬೇಕೆಂದು ಫಿಂಚ್ ತಿಳಿಸಿದ್ದಾರೆ.

5ನೇ ಕ್ರಮಾಂಕದಲ್ಲಿ ಮಾರ್ಕಸ್ ಸ್ಟೋಯಿನಿಸ್ ಅಥವಾ ಮ್ಯಾಥ್ಯೂ ಶಾರ್ಟ್ ಅವರನ್ನು ಕಣಕ್ಕಿಳಿಸಬಹುದು. ಇನ್ನು ಕೆಳ ಕ್ರಮಾಂಕದಲ್ಲಿ ಸ್ಪೋಟಕ ಬ್ಯಾಟರ್ ಟಿಮ್ ಡೇವಿಡ್ ಆಡುವುದು ಸೂಕ್ತ ಎಂದು ಆರೋನ್ ಫಿಂಚ್ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಬೌಲರ್ಗಳಾಗಿ ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಆ್ಯಡಂ ಝಂಪಾ ಹಾಗೂ ಜೋಶ್ ಹ್ಯಾಝಲ್‌ವುಡ್ ಅವರನ್ನು ಆರೋನ್ ಫಿಂಚ್ ತಮ್ಮ ತಂಡದಲ್ಲಿ ಹೆಸರಿಸಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟರ್ ಆಗಿ ಜೋಶ್ ಇಂಗ್ಲಿಸ್ ಅವರನ್ನು ಆಯ್ಕೆ ಮಾಡಿದ್ದಾರೆ.

ಇದಾಗ್ಯೂ ಅನುಭವಿ ಬ್ಯಾಟರ್ ಸ್ಟೀವ್ ಸ್ಮಿತ್, ಯುವ ಆಲ್ರೌಂಡರ್ ಕ್ಯಾಮರೋನ್ ಗ್ರೀನ್ ಮತ್ತು ಅಲೆಕ್ಸ್ ಕ್ಯಾರಿ ಅವರನ್ನು ತಮ್ಮ ಪ್ಲೇಯಿಂಗ್ ಇಲೆವೆನ್ನಲ್ಲಿ ಹೆಸರಿಸಿಲ್ಲ. ಅದರಂತೆ ಟಿ20 ವಿಶ್ವಕಪ್ಗೆ ಆರೋನ್ ಫಿಂಚ್ ಆಯ್ಕೆ ಮಾಡಿರುವ ಆಸ್ಟ್ರೇಲಿಯಾ ಪ್ಲೇಯಿಂಗ್ 11 ಈ ಕೆಳಗಿನಂತಿದೆ...

ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಆ್ಯಡಂ ಝಂಪಾ, ಜೋಶ್ ಹ್ಯಾಝಲ್‌ವುಡ್. ಮ್ಯಾಥ್ಯೂ ಶಾರ್ಟ್ (12ನೇ ಆಟಗಾರ)