AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPLನ ಆಲ್​ ಟೈಮ್ ಇಲೆವೆನ್ ಹೆಸರಿಸಿದ ಎಬಿ ಡಿವಿಲಿಯರ್ಸ್

AB De Villiers: ಆರ್​ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಸಾರ್ವಕಾಲಿಕ ಐಪಿಎಲ್​ ಇಲೆವೆನ್ ಹೆಸರಿಸಿದ್ದಾರೆ. ಈ ಇಲೆವೆನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದ ಮಾಜಿ ಆಟಗಾರ ಕ್ರಿಸ್ ಗೇಲ್​ಗೆ ಸ್ಥಾನ ನೀಡಲಾಗಿಲ್ಲ. ಹಾಗೆಯೇ ಐಪಿಎಲ್​ನ ರನ್ ಸರದಾರರ ಪಟ್ಟಿಯಲ್ಲಿ ಡೇವಿಡ್ ವಾರ್ನರ್ ಅವರನ್ನು ಆಯ್ಕೆ ಮಾಡಿಲ್ಲ.

ಝಾಹಿರ್ ಯೂಸುಫ್
|

Updated on: Aug 04, 2025 | 11:55 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ, ಟಿ20 ಕ್ರಿಕೆಟ್​ನ ಸಿಡಿಲಮರಿ ಎಬಿ ಡಿವಿಲಿಯರ್ಸ್ ಆಲ್ ​ಟೈಮ್ ಐಪಿಎಲ್ ಇಲೆವೆನ್ ಪ್ರಕಟಿಸಿದ್ದಾರೆ. ಎಬಿಡಿ ಪ್ರಕಟಿಸಿರುವ ಐಪಿಎಲ್​ನ ಸಾರ್ವಕಾಲಿಕ ಇಲೆವೆನ್​​ನಲ್ಲಿ ಭಾರತದ 7 ಆಟಗಾರರು ಕಾಣಿಸಿಕೊಂಡರೆ, ನಾಲ್ವರು ವಿದೇಶಿ ಆಟಗಾರರಿದ್ದಾರೆ.

1 / 7
ಎಬಿ ಡಿವಿಲಿಯರ್ಸ್ ಹೆಸರಿಸಿದ ಆಲ್​ ಟೈಮ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಆರಂಭಿಕರಾಗಿ ಕಾಣಿಸಿಕೊಂಡಿರುವುದು ರೋಹಿತ್ ಶರ್ಮಾ ಹಾಗೂ ಮ್ಯಾಥ್ಯೂ ಹೇಡನ್. ಹಿಟ್​ಮ್ಯಾನ್ ಪ್ರಸ್ತುತ ಮುಂಬೈ ಇಂಡಿಯನ್ಸ್ ತಂಡದ ಆರಂಭಿಕ ಆಟಗಾರ. ಹಾಗೆಯೇ ಆಸ್ಟ್ರೇಲಿಯಾದ ಮ್ಯಾಥ್ಯೂ ಹೇಡನ್ ಈ ಹಿಂದೆ ಸಿಎಸ್​ಕೆ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದರು.

2 / 7
ಇನ್ನು ಮೂರನೇ ಕ್ರಮಾಂಕದಲ್ಲಿ ಐಪಿಎಲ್​ನ ರನ್ ಸರದಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಯನ್ನು ಹೆಸರಿಸಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ ಅವರನ್ನು ಎಬಿಡಿ ಆಯ್ಕೆ ಮಾಡಿದ್ದಾರೆ. 

3 / 7
ಐದನೇ ಕ್ರಮಾಂಕಕ್ಕೆ ಎಬಿಡಿ ಖುದ್ದು ತನ್ನನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಇನ್ನು ಆಲ್​ರೌಂಡರ್ ಆಗಿ ಎಬಿ ಡಿವಿಲಿಯರ್ಸ್ ಆಯ್ಕೆ ಮಾಡಿಕೊಂಡಿರುವುದು ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು. ಪಾಂಡ್ಯ ಅವರನ್ನು 6ನೇ ಕ್ರಮಾಂಕಕ್ಕೆ ಹೆಸರಿಸಿದ್ದಾರೆ.

4 / 7
ವಿಕೆಟ್ ಕೀಪರ್ ಬ್ಯಾಟರ್​ ಆಗಿ ಸಿಎಸ್​ಕೆ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಹಾಗೆಯೇ ಆರ್​ಸಿಬಿ ತಂಡದ ಮಾಜಿ ಆಟಗಾರ, ಪ್ರಸ್ತುತ ಪಂಜಾಬ್ ಕಿಂಗ್ಸ್ ತಂಡದ ಪರ ಕಣಕ್ಕಿಳಿಯುತ್ತಿರುವ ಯುಜ್ವೇಂದ್ರ ಚಹಲ್ ಅವರನ್ನು ಸ್ಪಿನ್ನರ್ ಆಗಿ ಎಬಿಡಿ ತನ್ನ ಆಲ್​ ಟೈಮ್ ಇಲೆವೆನ್​ನಲ್ಲಿ ಹೆಸರಿಸಿದ್ದಾರೆ.

5 / 7
ಇನ್ನು ಬೌಲಿಂಗ್ ವಿಭಾಗದಲ್ಲಿ ಸ್ಥಾನ ಪಡೆದಿರುವುದು ಮುಂಬೈ ಇಂಡಿಯನ್ಸ್ ಮಾಜಿ ವೇಗಿ ಲಸಿತ್ ಮಾಲಿಂಗ ಹಾಗೂ ಆರ್​ಸಿಬಿ ತಂಡದ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ. ಇವರೊಂದಿಗೆ ಪ್ರಸ್ತುತ ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಜಸ್​ಪ್ರೀತ್ ಬುಮ್ರಾ ಅವರನ್ನು ಎಬಿ ಡಿವಿಲಿಯರ್ಸ್ ತನ್ನ ಆಲ್​ ಟೈಮ್ ಇಲೆವೆನ್​ಗೆ ಆಯ್ಕೆ ಮಾಡಿದ್ದಾರೆ.

6 / 7
ಎಬಿ ಡಿವಿಲಿಯರ್ಸ್​ ಆಲ್​ ಟೈಮ್ ಐಪಿಎಲ್ ಇಲೆವೆನ್: ರೋಹಿತ್ ಶರ್ಮಾ, ಮ್ಯಾಥ್ಯೂ ಹೇಡನ್, ಸೂರ್ಯಕುಮಾರ್ ಯಾದವ್, ಎಬಿ ಡಿವಿಲಿಯರ್ಸ್, ಹಾರ್ದಿಕ್ ಪಾಂಡ್ಯ, ಮಹೇಂದ್ರ ಸಿಂಗ್ ಧೋನಿ, ಜಸ್​ಪ್ರೀತ್ ಬುಮ್ರಾ, ಯುಜ್ವೇಂದ್ರ ಚಹಲ್, ಲಸಿತ್ ಮಾಲಿಂಗ, ಡೇನಿಯಲ್ ವೆಟ್ಟೋರಿ.

7 / 7
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!