AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

AB de Villiers: ನಾನು ತಪ್ಪು ಮಾಡಿದೆ: ವಿರಾಟ್ ಕೊಹ್ಲಿಯ ಕ್ಷಮೆಯಾಚಿಸಿದ ಎಬಿಡಿ

Virat Kohli: ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ ಇದೀಗ ಸಂಪೂರ್ಣ ಸರಣಿಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಅಂದರೆ ಇಂಗ್ಲೆಂಡ್ ವಿರುದ್ಧದ ಕೊನೆಯ ಮೂರು ಪಂದ್ಯಗಳಿಗೂ ವಿರಾಟ್ ಅಲಭ್ಯರಾಗಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಕೊಹ್ಲಿ ಈ ಸರಣಿಯಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಎಂದು ಬಿಸಿಸಿಐ ತಿಳಿಸಿದೆ.

TV9 Web
| Edited By: |

Updated on: Feb 11, 2024 | 8:23 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್​ ಇದೀಗ ಮತ್ತೊಮ್ಮೆ ವಿರಾಟ್ ಕೊಹ್ಲಿಯ ಕ್ಷಮೆಯಾಚಿಸಿದ್ದಾರೆ. ಕೆಲ ದಿನಗಳ ಹಿಂದೆ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಬಹಿರಂಗಪಡಿಸಿದ್ದರು.

1 / 6
ಇದೇ ಕಾರಣದಿಂದಾಗಿ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ ಎಂದು ಎಬಿಡಿ ತಿಳಿಸಿದ್ದರು. ಈ ಸುದ್ದಿ ಸಿಕ್ಕಾಪಟ್ಟೆ ವೈರಲ್ ಕೂಡ ಆಗಿತ್ತು. ಇದರ ಬೆನ್ನಲ್ಲೇ ನನ್ನ ಹೇಳಿಕೆ ತಪ್ಪಾಗಿತ್ತು. ಕೊಹ್ಲಿ ಕುಟುಂಬಕ್ಕೆ ಮೊದಲ ಆದ್ಯತೆ ನೀಡುತ್ತಾರೆ. ಆದರೆ ನಾನು ತಪ್ಪು ಮಾಹಿತಿ ಹಂಚಿಕೊಂಡಿದ್ದೆ. ವಿರುಷ್ಕಾ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬುದು ತಪ್ಪು ಮಾಹಿತಿಯಾಗಿದೆ ಎಂದು ಎಬಿಡಿ ಸ್ಪಷ್ಟನೆ ನೀಡಿದ್ದರು.

2 / 6
ಇದೀಗ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ. ಈ ಬಗ್ಗೆ ಯೂಟ್ಯೂಬ್​ ವಿಡಿಯೋ ಮಾಡಿರುವ ಎಬಿಡಿ, ಕೊಹ್ಲಿ ಕುಟುಂಬದಲ್ಲಿ ಏನು ನಡೆಯುತ್ತಿದೆ ಎಂಬುದರ ಬಗ್ಗೆ ನಿಖರ ಮಾಹಿತಿಯಿಲ್ಲ. ನಾವೆಲ್ಲರೂ ಅವರ ವೈಯುಕ್ತಿಕ ಜೀವನವನ್ನು ಗೌರವಿಸಬೇಕಾಗುತ್ತದೆ. ಈ ಹಿಂದಿನ ನನ್ನ ಶೋನಲ್ಲಿ ನಾನು ಪ್ರಮಾದ ಮಾಡಿದ್ದೇನೆ. ಅದಕ್ಕಾಗಿ ನಾನು ವಿರಾಟ್ ಕೊಹ್ಲಿ ಕುಟುಂಬದೊಂದಿಗೆ ಕ್ಷಮೆಯಾಚಿಸುತ್ತೇನೆ ಎಂದು ಎಬಿ ಡಿವಿಲಿಯರ್ಸ್ ತಿಳಿಸಿದ್ದಾರೆ.

3 / 6
ಈ ಮೂಲಕ ವಿರಾಟ್ ಕೊಹ್ಲಿ ಕುಟುಂಬವು 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆಂಬ ತಪ್ಪು ಮಾಹಿತಿಗಾಗಿ ಎಬಿ ಡಿವಿಲಿಯರ್ಸ್ ಬಹಿರಂಗವಾಗಿಯೇ ಕ್ಷಮೆಯಾಚಿಸಿದ್ದಾರೆ. ಅಲ್ಲದೆ ವಿರಾಟ್ ಕೊಹ್ಲಿ ಇಂಗ್ಲೆಂಡ್​ ವಿರುದ್ಧದ ಸರಣಿಯಿಂದ ಹೊರಗುಳಿಯಲು ಪ್ರಮುಖ ಕಾರಣವೇನು ಎಂಬುದರ ಯಾವುದೇ ಮಾಹಿತಿ ಇಲ್ಲ ಎಂಬುದನ್ನು ಕೂಡ ಸ್ಪಷ್ಟಪಡಿಸಿದ್ದಾರೆ.

4 / 6
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಯಿಂದ ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಕೊಹ್ಲಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಆದರೆ ಆ ಕಾರಣಗಳೇನು ಎಂಬುದರ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಹೀಗಾಗಿ ಈ ಹಿಂದೆ ಹಲವು ಊಹಾಪೋಹಗಳು ಹರಿದಾಡಿದ್ದವು. ಇದರ ಜೊತೆಗೆ ಎಬಿಡಿ ಅವರ ಹೇಳಿಕೆಯು ಮುನ್ನಲೆಗೆ ಬಂದಿತ್ತು. ಇದೀಗ ಈ ಹೇಳಿಕೆಯು ತಪ್ಪು ಮಾಹಿತಿ ಖುದ್ದು ಡಿವಿಲಿಯರ್ಸ್ ಅವರೇ ಸ್ಪಷ್ಟನೆ ನೀಡಿದ್ದಾರೆ.

5 / 6
ಸದ್ಯ ಭಾರತ ತಂಡದಿಂದ ಹೊರಗುಳಿದಿರುವ ವಿರಾಟ್ ಕೊಹ್ಲಿ ಮುಂಬರುವ ಐಪಿಎಲ್​ ಮೂಲಕ ಕಂಬ್ಯಾಕ್ ಮಾಡಲಿದ್ದಾರೆ. ಏಕೆಂದರೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಮುಕ್ತಾಯದ ಬಳಿಕ ಟೀಮ್ ಇಂಡಿಯಾಗೆ ಯಾವುದೇ ಸರಣಿಗಳಿಲ್ಲ. ಅಲ್ಲದೆ ಮಾರ್ಚ್ 22 ರಿಂದ ಐಪಿಎಲ್ ಶುರುವಾಗುವ ಸಾಧ್ಯತೆಯಿದೆ. ಅದರಂತೆ ಆರ್​ಸಿಬಿ ಪರ ಕಣಕ್ಕಿಳಿಯುವ ಮೂಲಕ ಕೊಹ್ಲಿ ಮತ್ತೆ ಮೈದಾನದಲ್ಲಿ ಕಾಣಿಸಿಕೊಳ್ಳಬಹುದು.

6 / 6
Follow Us
ಪಂದ್ಯ ಶ್ರೇಷ್ಠ ಕಿಂಗ್ ಕೊಹ್ಲಿಗೆ ಟಿವಿ, ಮೊಬೈಲ್ ಗಿಫ್ಟ್

ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ

ತೆಲಂಗಾಣದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!

ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು

ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!

ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?

ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ

ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!

ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?

ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್