Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಬರೆದಿಟ್ಕೊಳ್ಳಿ, ಈ ಸಲ ಕಪ್ RCBಗೆ: ಎಬಿ ಡಿವಿಲಿಯರ್ಸ್​

IPL 2024: RCB ಪರ 11 ವರ್ಷಗಳ ಕಾಲ ಆಡಿದ್ದ ಎಬಿಡಿ ಹಲವು ಬಾರಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು. ಈ 157 ಪಂದ್ಯಗಳಿಂದ ಒಟ್ಟು 4522 ರನ್‌ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಹೊಂದಿದ್ದಾರೆ. ಹಾಗೆಯೇ ಆರ್​ಸಿಬಿ ಪರ ವಿರಾಟ್‌ ಕೊಹ್ಲಿ ಬಳಿಕ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Jan 13, 2024 | 3:00 PM

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕಪ್ ಗೆಲ್ಲುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಕನಸು ಕನಸಾಗಿಯೇ ಉಳಿದಿದೆ. ಕಳೆದ 16 ಸೀಸನ್​ಗಳಲ್ಲಿ 3 ಬಾರಿ ಫೈನಲ್ ಪ್ರವೇಶಿಸಿದರೂ ಆರ್​ಸಿಬಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಳ್ಳಲು ಸಾಧ್ಯವಾಗಿಲ್ಲ. ಇದೀಗ 17ನೇ ಸೀಸನ್​ ಹೊಸ್ತಿಲಲ್ಲಿದ್ದೇವೆ.

1 / 7
ಇತ್ತ ಐಪಿಎಲ್ ಸೀಸನ್-17 ಆರಂಭಕ್ಕೂ ಮುನ್ನವೇ ಈ ಬಾರಿ ಕಪ್ ಗೆಲ್ಲುವ ತಂಡ ಯಾವುದೆಂದು ಎಬಿ ಡಿವಿಲಿಯರ್ಸ್ ಭವಿಷ್ಯ ನುಡಿದಿದ್ದಾರೆ. ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಾಯಲ್ಲಾಗಿಯೇ ಟ್ರೋಫಿ ಎತ್ತಿ ಹಿಡಿಯಲಿದೆ ಎಂದು ಎಬಿಡಿ ಹೇಳಿದ್ದಾರೆ.

2 / 7
ನಾನಂತು ಸಾಕಷ್ಟು ಆಶಾವಾದಿಯಾಗಿದ್ದೇನೆ. ಈ ಸಲ ಖಂಡಿತವಾಗಿಯೂ ಆರ್​ಸಿಬಿ ತಂಡ ಕಪ್ ಗೆಲ್ಲುವ ವಿಶ್ವಾಸವಿದೆ. ಅದರಂತೆ ಐಪಿಎಲ್ 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಬಾರಿಗೆ ಕಿರೀಟ ಮುಡಿಗೇರಿಸಿಕೊಳ್ಳಲಿದೆ ಎಂದು ಎಬಿ ಡಿವಿಲಿಯರ್ಸ್ ಭವಿಷ್ಯ ನುಡಿದಿದ್ದಾರೆ.

3 / 7
RCB ಪರ 11 ವರ್ಷಗಳ ಕಾಲ ಆಡಿದ್ದ ಎಬಿಡಿ ಹಲವು ಬಾರಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು. ಈ 157 ಪಂದ್ಯಗಳಿಂದ ಒಟ್ಟು 4522 ರನ್‌ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಹೊಂದಿದ್ದಾರೆ. ಹಾಗೆಯೇ ಆರ್​ಸಿಬಿ ಪರ ವಿರಾಟ್‌ ಕೊಹ್ಲಿ ಬಳಿಕ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ.

4 / 7
ಇನ್ನು ಐಪಿಎಲ್ ವೃತ್ತಿಜೀವನದಲ್ಲಿ ಒಟ್ಟು 184 ಪಂದ್ಯಗಳನ್ನಾಡಿರುವ ಎಬಿ ಡಿವಿಲಿಯರ್ಸ್​ ಒಟ್ಟು 5162 ರನ್‌ ಕಲೆಹಾಕಿದ್ದಾರೆ. ಈ ವೇಳೆ 3 ಭರ್ಜರಿ ಶತಕಗಳು, 40 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ಪಂದ್ಯವಾಡಿದ ಹಾಗೂ ಅತೀ ಹೆಚ್ಚು ಕಾಲ ಆಡಿದ ವಿದೇಶಿ ಆಟಗಾರ ಎಂಬ ದಾಖಲೆಯನ್ನು ಡಿವಿಲಿಯರ್ಸ್ ನಿರ್ಮಿಸಿದ್ದಾರೆ.

5 / 7
ಇದೀಗ ತಮ್ಮ ನೆಚ್ಚಿನ ಫ್ರಾಂಚೈಸಿಯು ಈ ಸಲ ಕಪ್ ಗೆಲ್ಲಲಿದೆ ಎಂದು ಎಬಿಡಿ ಭವಿಷ್ಯ ನುಡಿದಿದ್ದಾರೆ. ಈ ಭವಿಷ್ಯ ನಿಜವಾಗಲಿದೆಯಾ? ಆರ್​ಸಿಬಿ ಟ್ರೋಫಿ ಗೆಲ್ಲುವ ಕನಸು ಈ ಬಾರಿಯಾದರೂ ಈಡೇರಲಿದೆಯಾ? ಕಾದು ನೋಡಬೇಕಿದೆ.

6 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

7 / 7
Follow us