IPL 2024: ಬರೆದಿಟ್ಕೊಳ್ಳಿ, ಈ ಸಲ ಕಪ್ RCBಗೆ: ಎಬಿ ಡಿವಿಲಿಯರ್ಸ್
TV9 Web | Updated By: ಝಾಹಿರ್ ಯೂಸುಫ್
Updated on:
Jan 13, 2024 | 3:00 PM
IPL 2024: RCB ಪರ 11 ವರ್ಷಗಳ ಕಾಲ ಆಡಿದ್ದ ಎಬಿಡಿ ಹಲವು ಬಾರಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು. ಈ 157 ಪಂದ್ಯಗಳಿಂದ ಒಟ್ಟು 4522 ರನ್‌ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಹೊಂದಿದ್ದಾರೆ. ಹಾಗೆಯೇ ಆರ್ಸಿಬಿ ಪರ ವಿರಾಟ್ ಕೊಹ್ಲಿ ಬಳಿಕ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ.
1 / 7
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕಪ್ ಗೆಲ್ಲುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಕನಸು ಕನಸಾಗಿಯೇ ಉಳಿದಿದೆ. ಕಳೆದ 16 ಸೀಸನ್ಗಳಲ್ಲಿ 3 ಬಾರಿ ಫೈನಲ್ ಪ್ರವೇಶಿಸಿದರೂ ಆರ್ಸಿಬಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಳ್ಳಲು ಸಾಧ್ಯವಾಗಿಲ್ಲ. ಇದೀಗ 17ನೇ ಸೀಸನ್ ಹೊಸ್ತಿಲಲ್ಲಿದ್ದೇವೆ.
2 / 7
ಇತ್ತ ಐಪಿಎಲ್ ಸೀಸನ್-17 ಆರಂಭಕ್ಕೂ ಮುನ್ನವೇ ಈ ಬಾರಿ ಕಪ್ ಗೆಲ್ಲುವ ತಂಡ ಯಾವುದೆಂದು ಎಬಿ ಡಿವಿಲಿಯರ್ಸ್ ಭವಿಷ್ಯ ನುಡಿದಿದ್ದಾರೆ. ಈ ಬಾರಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಾಯಲ್ಲಾಗಿಯೇ ಟ್ರೋಫಿ ಎತ್ತಿ ಹಿಡಿಯಲಿದೆ ಎಂದು ಎಬಿಡಿ ಹೇಳಿದ್ದಾರೆ.
3 / 7
ನಾನಂತು ಸಾಕಷ್ಟು ಆಶಾವಾದಿಯಾಗಿದ್ದೇನೆ. ಈ ಸಲ ಖಂಡಿತವಾಗಿಯೂ ಆರ್ಸಿಬಿ ತಂಡ ಕಪ್ ಗೆಲ್ಲುವ ವಿಶ್ವಾಸವಿದೆ. ಅದರಂತೆ ಐಪಿಎಲ್ 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಬಾರಿಗೆ ಕಿರೀಟ ಮುಡಿಗೇರಿಸಿಕೊಳ್ಳಲಿದೆ ಎಂದು ಎಬಿ ಡಿವಿಲಿಯರ್ಸ್ ಭವಿಷ್ಯ ನುಡಿದಿದ್ದಾರೆ.
4 / 7
RCB ಪರ 11 ವರ್ಷಗಳ ಕಾಲ ಆಡಿದ್ದ ಎಬಿಡಿ ಹಲವು ಬಾರಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು. ಈ 157 ಪಂದ್ಯಗಳಿಂದ ಒಟ್ಟು 4522 ರನ್‌ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಹೊಂದಿದ್ದಾರೆ. ಹಾಗೆಯೇ ಆರ್ಸಿಬಿ ಪರ ವಿರಾಟ್ ಕೊಹ್ಲಿ ಬಳಿಕ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ.
5 / 7
ಇನ್ನು ಐಪಿಎಲ್ ವೃತ್ತಿಜೀವನದಲ್ಲಿ ಒಟ್ಟು 184 ಪಂದ್ಯಗಳನ್ನಾಡಿರುವ ಎಬಿ ಡಿವಿಲಿಯರ್ಸ್ ಒಟ್ಟು 5162 ರನ್ ಕಲೆಹಾಕಿದ್ದಾರೆ. ಈ ವೇಳೆ 3 ಭರ್ಜರಿ ಶತಕಗಳು, 40 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ ಆರ್ಸಿಬಿ ಪರ ಅತೀ ಹೆಚ್ಚು ಪಂದ್ಯವಾಡಿದ ಹಾಗೂ ಅತೀ ಹೆಚ್ಚು ಕಾಲ ಆಡಿದ ವಿದೇಶಿ ಆಟಗಾರ ಎಂಬ ದಾಖಲೆಯನ್ನು ಡಿವಿಲಿಯರ್ಸ್ ನಿರ್ಮಿಸಿದ್ದಾರೆ.
6 / 7
ಇದೀಗ ತಮ್ಮ ನೆಚ್ಚಿನ ಫ್ರಾಂಚೈಸಿಯು ಈ ಸಲ ಕಪ್ ಗೆಲ್ಲಲಿದೆ ಎಂದು ಎಬಿಡಿ ಭವಿಷ್ಯ ನುಡಿದಿದ್ದಾರೆ. ಈ ಭವಿಷ್ಯ ನಿಜವಾಗಲಿದೆಯಾ? ಆರ್ಸಿಬಿ ಟ್ರೋಫಿ ಗೆಲ್ಲುವ ಕನಸು ಈ ಬಾರಿಯಾದರೂ ಈಡೇರಲಿದೆಯಾ? ಕಾದು ನೋಡಬೇಕಿದೆ.
7 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.