AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಬ್ಯಾಕ್ ಸುಳಿವು ನೀಡಿದ ಎಬಿ ಡಿವಿಲಿಯರ್ಸ್

AB de Villiers: ಎಬಿ ಡಿವಿಲಿಯರ್ಸ್ ತಮ್ಮ ಐಪಿಎಲ್ ವೃತ್ತಿಜೀವನವನ್ನು ಡೆಲ್ಲಿ ಕ್ಯಾಪಿಟಲ್ಸ್‌ನೊಂದಿಗೆ ಆರಂಭಿಸಿದ್ದರು. 2011 ರಲ್ಲಿ RCB ಸೇರಿದ್ದ ಎಬಿಡಿ ಸತತ 11 ಸೀಸನ್​ಗಳಲ್ಲಿ ತಂಡದ ಭಾಗವಾಗಿದ್ದರು. ಈ ವೇಳೆ ಒಟ್ಟು 4522 ರನ್‌ಗಳನ್ನು ಕಲೆಹಾಕುವ ಮೂಲಕ ಆರ್​ಸಿಬಿ ಪರ ಅತ್ಯಧಿಕ ರನ್ ಗಳಿಸಿದ ವಿದೇಶಿ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 22, 2025 | 8:58 AM

Share
ಸಿಡಿಲಬ್ಬರದ ಸಿಡಿಲಮರಿ ಎಬಿ ಡಿವಿಲಿಯರ್ಸ್ ಕ್ರಿಕೆಟ್ ಅಂಗಳಕ್ಕೆ ಮರಳುವ ಸೂಚನೆ ನೀಡಿದ್ದಾರೆ. 2021 ರಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಎಬಿಡಿ ಇದೀಗ ಮತ್ತೆ ಕ್ರಿಕೆಟ್ ಆಡಬೇಕೆಂಬ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮತ್ತೆ ಕ್ರಿಕೆಟ್ ಅಂಗಳಕ್ಕೆ ಮರಳುವ ಸೂಚನೆಯನ್ನು ಸಹ ನೀಡಿದ್ದಾರೆ.

1 / 6
ರನ್ನಿಂಗ್ ಬಿಟ್ವೀನ್ ದಿ ವಿಕೆಟ್ಸ್‌ನ ಸಂದರ್ಶನದಲ್ಲಿ ಮಾತನಾಡಿದ ಡಿವಿಲಿಯರ್ಸ್, ನಾನು ಮತ್ತೆ ಕ್ರಿಕೆಟ್​ ಅಂಗಳಕ್ಕೆ ಮರಳಬಹುದು. ಏಕೆಂದರೆ ನನ್ನ ಮಕ್ಕಳು ನಾನು ಆಡಬೇಕೆಂದು ಒತ್ತಡ ಹೇರುತ್ತಿರುತ್ತಾರೆ. ಅವರಿಗಾಗಿ ನಾನು ಮತ್ತೆ ಕ್ರಿಕೆಟ್ ಆಡಬೇಕೆಂದಿರುವೆ ಎಂದು ತಿಳಿಸಿದ್ದಾರೆ.

2 / 6
ಈ ಹಿಂದೆ ಎಬಿಡಿ ಡಿವಿಲಿಯರ್ಸ್ ಕಣ್ಣು ದೃಷ್ಟಿ ಸಮಸ್ಯೆಯ ಕಾರಣ ದಿಢೀರ್ ನಿವೃತ್ತಿ ಘೋಷಿಸಿದ್ದರು. ಈ ಬಗ್ಗೆ ಮಾತನಾಡಿದ ಎಬಿಡಿ, ನನ್ನ ಎಡಗಣ್ಣು ಸ್ವಲ್ಪ ಮಸುಕಾಗಿದ್ದರೂ, ಈಗ ಬಲಗಣ್ಣು ಪ್ರಬಲವಾಗಿದೆ. ಹೀಗಾಗಿ ಚೆಂಡನ್ನು ಚೆನ್ನಾಗಿ ಗುರುತಿಸಬಲ್ಲೆ ಎಂದು  ತಿಳಿಸಿದ್ದಾರೆ.

3 / 6
ಇದೇ ವೇಳೆ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುವುದಿಲ್ಲ ಎಂಬುದನ್ನು ಸಹ ಎಬಿ ಡಿವಿಲಿಯರ್ಸ್ ಖಚಿತಪಡಿಸಿದ್ದಾರೆ. ನಾನು ಮತ್ತೆ ಅಂಗಳಕ್ಕೆ ಇಳಿಯಲು ಇಚ್ಛಿಸಿದರೂ, ಐಪಿಎಲ್ ಅಥವಾ ಸೌತ್ ಆಫ್ರಿಕಾ ಟಿ20 ಲೀಗ್​ಗಳಲ್ಲಿ ಕಾಣಿಸಿಕೊಳ್ಳಲು ಬಯಸುತ್ತಿಲ್ಲ. ಆದರೆ ಭವಿಷ್ಯದಲ್ಲಿ ಏನಾಗಲಿದೆ ಎಂಬುದನ್ನು ಕಾದು ನೋಡೋಣ ಎಂದು ಎಬಿ ಡಿವಿಲಿಯರ್ಸ್ ಹೇಳಿದ್ದಾರೆ.

4 / 6
ಎಬಿಡಿ ಅವರ ಈ ಹೇಳಿಕೆಯ ಬೆನ್ನಲ್ಲೇ ಅವರು ಮತ್ತೆ ಅಂಗಳಕ್ಕೆ ಇಳಿಯುವುದು ಬಹುತೇಕ ಖಚಿತ ಎನ್ನಬಹುದು. ಅಲ್ಲದೆ ಮುಂಬರುವ ದಿನಗಳಲ್ಲಿ ಎಲ್ಲವೂ ಅಂದುಕೊಂಡಂತೆ ನಡೆದರೆ ಅವರು ಸೌತ್ ಆಫ್ರಿಕಾ ಟಿ20 ಲೀಗ್ ಅಥವಾ ಐಪಿಎಲ್​ನಲ್ಲಿ ಕಾಣಿಸಿಕೊಂಡರೂ ಅಚ್ಚರಿ ಪಡಬೇಕಿಲ್ಲ.

5 / 6
RCB ತಂಡದ ಆಪತ್ಭಾಂಧವರಾಗಿದ್ದ ಎಬಿ ಡಿವಿಲಿಯರ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 157 ಪಂದ್ಯಗಳಾಡಿದ್ದಾರೆ. ಈ ವೇಳೆ ಒಟ್ಟು 4522 ರನ್‌ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಹೊಂದಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಬಳಿಕ ಆರ್​ಸಿಬಿ ಪರ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಬ್ಯಾಟರ್ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ.

6 / 6
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ

ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್

ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ

ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ