AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಬರೆದಿಟ್ಕೊಳ್ಳಿ, ಈ ಸಲ ಕಪ್ ಇವರದ್ದೆ… ಎಬಿಡಿ ಭವಿಷ್ಯ

IPL 2025: RCB ಪರ 11 ವರ್ಷಗಳ ಕಾಲ ಆಡಿದ್ದ ಎಬಿಡಿ ಹಲವು ಬಾರಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು. ಈ 157 ಪಂದ್ಯಗಳಿಂದ ಒಟ್ಟು 4522 ರನ್‌ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಹೊಂದಿದ್ದಾರೆ. ಹಾಗೆಯೇ ಆರ್​ಸಿಬಿ ಪರ ವಿರಾಟ್‌ ಕೊಹ್ಲಿ ಬಳಿಕ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ.

ಝಾಹಿರ್ ಯೂಸುಫ್
|

Updated on: Mar 19, 2025 | 7:59 AM

Share
ಐಪಿಎಲ್​ನಲ್ಲಿ ಕಪ್ ಗೆಲ್ಲುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಕನಸು ಕನಸಾಗಿಯೇ ಉಳಿದಿದೆ. ಕಳೆದ 17 ಸೀಸನ್​ಗಳಲ್ಲಿ 3 ಬಾರಿ ಫೈನಲ್ ಪ್ರವೇಶಿಸಿದರೂ ಆರ್​ಸಿಬಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಳ್ಳಲು ಸಾಧ್ಯವಾಗಿಲ್ಲ. ಇದೀಗ 18ನೇ ಸೀಸನ್​ ಹೊಸ್ತಿಲಲ್ಲಿದ್ದೇವೆ. ಇತ್ತ ಐಪಿಎಲ್ ಸೀಸನ್-18 ಆರಂಭಕ್ಕೂ ಮುನ್ನವೇ ಈ ಬಾರಿ ಕಪ್ ಗೆಲ್ಲುವ ತಂಡ ಯಾವುದೆಂದು ಎಬಿ ಡಿವಿಲಿಯರ್ಸ್ ಭವಿಷ್ಯ ನುಡಿದಿದ್ದಾರೆ.

1 / 6
ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠವಾಗಿದೆ. ಅದರಲ್ಲೂ ಪ್ಲೇಯಿಂಗ್ ಇಲೆವೆನ್ ರೂಪಿಸಲು ಅತ್ಯಂತ ಸಮತೋಲನದಿಂದ ಕೂಡಿದೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ರಾಯಲ್ಲಾಗಿಯೇ ಟ್ರೋಫಿ ಎತ್ತಿ ಹಿಡಿಯುವ ವಿಶ್ವಾಸವಿದೆ ಎಂದು ಎಬಿಡಿ ಡಿವಿಲಿಯರ್ಸ್ ಹೇಳಿದ್ದಾರೆ.

2 / 6
ಆರ್​ಸಿಬಿ ತಂಡದ ಬ್ಯಾಟಿಂಗ್ ಲೈನಪ್​ ಬಲಿಷ್ಠವಾಗಿದೆ. ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಇನಿಂಗ್ಸ್ ಆರಂಭಿಸಲಿದ್ದಾರೆ. ಸಾಲ್ಟ್ ಜೊತೆಗಿನ ಬ್ಯಾಟಿಂಗ್​ ಅನ್ನು ಕೊಹ್ಲಿ ಆನಂದಿಸುವುದು ಖಚಿತ. ಇನ್ನು ಬೌಲಿಂಗ್ ವಿಭಾಗವನ್ನು ನೋಡಿ, ಭುವನೇಶ್ವರ್ ಕುಮಾರ್ ಅವರ ಅನುಭವ ತಂಡಕ್ಕಿದೆ. ಅವರೊಂದಿಗೆ ಜೋಶ್ ಹ್ಯಾಝಲ್​ವುಡ್ ಕೂಡ ಇದ್ದಾರೆ.

3 / 6
ಜೋಶ್ ಹ್ಯಾಝಲ್​ವುಡ್ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಇಡೀ ಟೂರ್ನಿ ಆಡಿದರೆ ಫಲಿತಾಂಶಗಳು ಆರ್​ಸಿಬಿ ಪರವಾಗಲಿದೆ. ಇನ್ನು ಸ್ಪಿನ್ ಆಲ್​ರೌಂಡರ್ ಆಗಿ ಕೃನಾಲ್ ಪಾಂಡ್ಯ ಸಹ ಇದ್ದಾರೆ. ಅವರು ಬೌಲಿಂಗ್​ನಲ್ಲೂ ಮಿಂಚಬಲ್ಲರು, ಬ್ಯಾಟಿಂಗ್​ ಸಹ ಮಾಡಬಲ್ಲರು. ಅಂದರೆ ಈ ಹಿಂದಿಗಿಂತಲೂ ಆರ್​ಸಿಬಿ ಈ ಬಾರಿ ಹೆಚ್ಚು ಸಮತೋಲಿತವಾಗಿದೆ ಎಂದು ಎಬಿ ಡಿವಿಲಿಯರ್ಸ್ ಅಭಿಪ್ರಾಯಪಟ್ಟಿದ್ದಾರೆ.

4 / 6
ಆರ್​ಸಿಬಿ ತಂಡವು ಅನುಭವಿ ಹಾಗೂ ಯುವ ಆಟಗಾರರ ಮಿಶ್ರಣವನ್ನು ಹೊಂದಿದೆ. ಹೀಗಾಗಿ ಈ ಬಾರಿ ಆರ್​ಸಿಬಿ ಕಡೆಯಿಂದ ಭರ್ಜರಿ ಪ್ರದರ್ಶನವನ್ನು ಎದುರು ನೋಡಬಹುದು. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಸಲ ಕಪ್ ಗೆಲ್ಲುವ ನಿರೀಕ್ಷೆಯಿದೆ ಎಂದು ಎಬಿ ಡಿವಿಲಿಯರ್ಸ್ ಹೇಳಿದ್ದಾರೆ.

5 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.

6 / 6
Follow Us
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ

ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು

‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ

ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ

ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್

ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ

ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು

ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’

ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ