AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಜೀವನದಲ್ಲಿ ನಾನು ನೋಡಿದ ಅತ್ಯುತ್ತಮ ಬ್ಯಾಟ್ಸ್‌ಮನ್ ಈತ; ಎಬಿ ಡಿವಿಲಿಯರ್ಸ್

AB de Villiers Crowns Virat Kohli as Best Batsman: ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ತಮ್ಮ ಪ್ರಕಾರ ವಿಶ್ವದ ಟಾಪ್ 3 ಬ್ಯಾಟ್ಸ್‌ಮನ್‌ಗಳನ್ನು ಬಹಿರಂಗಪಡಿಸಿದ್ದಾರೆ. ಅವರ ಪ್ರಕಾರ ವಿರಾಟ್ ಕೊಹ್ಲಿ ಜೀವನದಲ್ಲಿ ಕಂಡ ಅತ್ಯುತ್ತಮ ಬ್ಯಾಟ್ಸ್‌ಮನ್. ರಿಕಿ ಪಾಂಟಿಂಗ್ ಮತ್ತು ಕುಮಾರ ಸಂಗಕ್ಕಾರ ನಂತರದ ಸ್ಥಾನದಲ್ಲಿದ್ದಾರೆ. ಕೊಹ್ಲಿಯ ಸ್ಥಿರತೆ, ಫಿಟ್‌ನೆಸ್, ಮಾನಸಿಕ ದೃಢತೆ ಹಾಗೂ ಒತ್ತಡದ ಚೇಸಿಂಗ್ ಸಾಮರ್ಥ್ಯವನ್ನು ಡಿವಿಲಿಯರ್ಸ್ ಪ್ರಶಂಸಿಸಿದ್ದಾರೆ.

ಪೃಥ್ವಿಶಂಕರ
|

Updated on: Jun 26, 2026 | 7:13 PM

Share
ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿ ವರ್ಷಗಳೇ ಕಳೆದಿವೆ. ಆದಾಗ್ಯೂ ಅವರ ಮೇಲಿರುವ ಕ್ರೇಜ್ ಭಾತರತದಲ್ಲಿ ಇಂದಿಗೂ ಕಡಿಮೆ ಆಗಿಲ್ಲ. ಐಪಿಎಲ್​ನಲ್ಲಿ ಆರ್​ಸಿಬಿ ಪರ ಆಡಿದ್ದ ಎಬಿಡಿ ತಂಡವನ್ನು ಹಲವು ಸ್ಮರಣೀಯ ಗೆಲುವುಗಳಿಗೆ ಮುನ್ನಡೆಸಿದ್ದರು. ಹೀಗಾಗಿ ಎಬಿಡಿಗೆ ಭಾರತದಲ್ಲಿ ಕೋಟ್ಯಾಂತರ ಅಭಿಮಾನಿಗಳಿದ್ದಾರೆ (PC-PTI).

1 / 6
ನಿವೃತ್ತಿ ಘೋಷಿಸಿದ ಬಳಿಕ ಕಾಮೆಂಟಟರಿಯಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುವ ಡಿವಿಲಿಯರ್ಸ್, ತಮ್ಮ ಅಭಿಪ್ರಾಯದಲ್ಲಿ ವಿಶ್ವದ ಟಾಪ್ 3 ಬ್ಯಾಟ್ಸ್‌ಮನ್‌ಗಳು ಯಾರು ಎಂಬುದನ್ನು ಬಹಿರಂಗಪಡಿಸಿದ್ದಾರೆ. ಅದರಲ್ಲಿ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ತಮ್ಮ ಜೀವನದಲ್ಲಿ ಕಂಡ ಅತ್ಯುತ್ತಮ ಬ್ಯಾಟ್ಸ್‌ಮನ್ ಎಂದು ಬಣ್ಣಿಸಿರುವ ಎಬಿ ಡಿವಿಲಿಯರ್ಸ್, ಕೊಹ್ಲಿಯ ಶಾಂತತೆ, ವಿಶೇಷವಾಗಿ ಒತ್ತಡದ ರನ್ ಚೇಸ್‌ಗಳಲ್ಲಿ, ಗುರಿಯನ್ನು ತಲುಪುವಲ್ಲಿ ಅವರ ಕೌಶಲ್ಯ ಮತ್ತು ಇನ್ನಿಂಗ್ಸ್ ಅನ್ನು ನಿಯಂತ್ರಿಸುವ ಅವರ ಸಾಮರ್ಥ್ಯವನ್ನು ಅಸಾಧಾರಣ ಎಂದು ಶ್ಲಾಘಿಸಿದ್ದಾರೆ (PC-PTI).

2 / 6
ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಡಿವಿಲಿಯರ್ಸ್, ‘ವಿರಾಟ್ ಕೊಹ್ಲಿ ನನ್ನ ಜೀವನದಲ್ಲಿ ನಾನು ನೋಡಿದ ಅತ್ಯುತ್ತಮ ಬ್ಯಾಟ್ಸ್‌ಮನ್. ಅವರ ನಂತರ, ರಿಕಿ ಪಾಂಟಿಂಗ್ ಮತ್ತು ಕುಮಾರ್ ಸಂಗಕ್ಕಾರ ಬರುತ್ತಾರೆ. ಕೊಹ್ಲಿಯ ಸ್ಥಿರತೆ, ಫಿಟ್‌ನೆಸ್ ಮತ್ತು ಮಾನಸಿಕ ದೃಢತೆ ಅವರನ್ನು ವಿಶೇಷ ಆಟಗಾರನನ್ನಾಗಿ ಮಾಡಿದೆ. ಏಕದಿನ ಕ್ರಿಕೆಟ್‌ನಲ್ಲಿ ಚೇಸಿಂಗ್ ವಿಷಯದಲ್ಲಿ ಕೊಹ್ಲಿಗೆ ಸರಿಸಾಟಿ ಯಾರೂ ಇಲ್ಲ (PC-PTI).

3 / 6
ದೊಡ್ಡ ಗುರಿಗಳನ್ನು ಬೆನ್ನಟ್ಟುವಾಗಲೂ ಒತ್ತಡವನ್ನು ನಿವಾರಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವ ಅವರ ಸಾಮರ್ಥ್ಯವು ಕೊಹ್ಲಿಯನ್ನು ವಿಶ್ವದ ಅತ್ಯುತ್ತಮ ಚೇಸ್ ಮಾಸ್ಟರ್ ಆಗಿ ಮಾಡಿದೆ. ಅದಕ್ಕಾಗಿಯೇ ಕೊಹ್ಲಿಯನ್ನು ತಾವು ನೋಡಿದ ಅತ್ಯುತ್ತಮ ಆಟಗಾರ ಎಂದು ಆಯ್ಕೆ ಮಾಡುವುದಾಗಿ ಡಿವಿಲಿಯರ್ಸ್ ಸ್ಪಷ್ಟಪಡಿಸಿದರು (PC-PTI).

4 / 6
ಆಧುನಿಕ ಟಿ20ಯಲ್ಲಿ ಪವರ್ ಹಿಟ್ಟರ್‌ಗಳ ಹೊರತಾಗಿಯೂ, ಪರಿಸ್ಥಿತಿಗಳಿಗೆ ಅನುಗುಣವಾಗಿ ಇನ್ನಿಂಗ್ಸ್ ನಿರ್ಮಿಸುವುದು, ಕೊನೆಯವರೆಗೂ ನಿಂತು ಪಂದ್ಯವನ್ನು ಮುಗಿಸುವುದು ಮತ್ತು ಅತ್ಯುತ್ತಮ ಸ್ಥಿರತೆಯನ್ನು ಕಾಯ್ದುಕೊಳ್ಳುವಲ್ಲಿ ಕೊಹ್ಲಿ ನಂಬರ್ ಒನ್ ಹೀಗಾಗಿ ನಾನು ನೋಡಿದ ನಂಬರ್ 1 ಬ್ಯಾಟ್ಸ್‌ಮನ್ ಕೊಹ್ಲಿ ಎಂದಿದ್ದಾರೆ (PC-PTI).

5 / 6
ಏತನ್ಮಧ್ಯೆ, ಐಪಿಎಲ್‌ನಲ್ಲಿ ಹಲವು ವರ್ಷಗಳ ಕಾಲ ಆರ್‌ಸಿಬಿ ಪರ ಒಟ್ಟಿಗೆ ಆಡಿದ್ದ ಕೊಹ್ಲಿ ಮತ್ತು ಡಿವಿಲಿಯರ್ಸ್ ಮೈದಾನದಲ್ಲಿ ಮಾತ್ರವಲ್ಲದೆ ಮೈದಾನದ ಹೊರಗೆಯೂ ಉತ್ತಮ ಸ್ನೇಹವನ್ನು ಬೆಳೆಸಿಕೊಂಡಿದ್ದಾರೆ. ಇಬ್ಬರೂ ಒಟ್ಟಿಗೆ ಅನೇಕ ಸ್ಮರಣೀಯ ಪಾಲುದಾರಿಕೆಗಳನ್ನು ರಚಿಸಿದ್ದು, ತಂಡಕ್ಕೆ ಅನೇಕ ವಿಜಯಗಳನ್ನು ತಂದುಕೊಟ್ಟಿದ್ದಾರೆ (PC-PTI).

6 / 6
Follow Us
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ

‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ

ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?

ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ

ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ

ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ

ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ

ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ

ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್