AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನ ವಿಶ್ವಕಪ್​ನಲ್ಲಿ ಸೆಮಿಫೈನಲ್​ಗೇರುವ 4 ತಂಡಗಳನ್ನು ಹೆಸರಿಸಿದ ಎಬಿಡಿ

ODI World Cup 2023: ಈ ಬಾರಿ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ನವೆಂಬರ್ 19 ರಂದು ನಡೆಯಲಿದೆ. ಇನ್ನು ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು ನ್ಯೂಝಿಲೆಂಡ್ ತಂಡವನ್ನು ಎದುರಿಸಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Aug 17, 2023 | 10:08 PM

ಅಕ್ಟೋಬರ್-ನವೆಂಬರ್​ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಚರ್ಚೆಗಳು ಜೋರಾಗಿದೆ. ಭಾರತದಲ್ಲಿ ಜರುಗಲಿರುವ ಈ ಬಾರಿಯ ವರ್ಲ್ಡ್​ಕಪ್​ನಲ್ಲಿ ಟೀಮ್ ಇಂಡಿಯಾ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ. ಇದಾಗ್ಯೂ ನಾಕೌಟ್ ಹಂತಕ್ಕೇರುವ ನಾಲ್ಕು ತಂಡಗಳಾವುವು ಎಂಬ ಚರ್ಚೆ ಮುಂದುವರೆದಿದೆ.

1 / 7
ಈ ಚರ್ಚೆಗಳ ನಡುವೆ ಈ ಬಾರಿ ಸೆಮಿಫೈನಲ್​ಗೆ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ್ದಾರೆ ಸೌತ್ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್​.

2 / 7
ಈ ಬಗ್ಗೆ ಮಾತನಾಡಿರುವ ಎಬಿಡಿ, ಈ ಬಾರಿ ಏಷ್ಯಾದ ಏಕೈಕ ತಂಡ ಮಾತ್ರ ಸೆಮಿಫೈನಲ್​ಗೇರಲಿದೆ. ಅದು ಕೂಡ ಆತಿಥೇಯ ತಂಡ ಎಂದು ಭವಿಷ್ಯ ನುಡಿದಿದ್ದಾರೆ.

3 / 7
ತವರಿನಲ್ಲಿ ಟೂರ್ನಿ ನಡೆಯುವುದರಿಂದ ಟೀಮ್ ಇಂಡಿಯಾವನ್ನು ಕಟ್ಟಿಹಾಕುವುದು ಸುಲಭವಲ್ಲ. ಹೀಗಾಗಿ ಭಾರತ ತಂಡ ಸೆಮಿಫೈನಲ್​ಗೇರುವುದು ಖಚಿತ ಎಂದಿದ್ದಾರೆ ಎಬಿಡಿ.

4 / 7
ಹಾಗೆಯೇ ಬಲಿಷ್ಠ ಪಡೆಯೊಂದಿಗೆ ಏಕದಿನ ವಿಶ್ವಕಪ್​ಗೆ ಸಜ್ಜಾಗುತ್ತಿರುವ ಆಸ್ಟ್ರೇಲಿಯಾ ತಂಡವನ್ನು ಕೂಡ ನಾಕೌಟ್ ಹಂತದಲ್ಲಿ ನಿರೀಕ್ಷಿಸಬಹುದು. ಆಸೀಸ್ ತಂಡವು ಉತ್ತಮ ಸಮತೋಲನದಿಂದ ಕೂಡಿದ್ದು, ಹೀಗಾಗಿ ಅವರು ಕೂಡ ಸೆಮೀಸ್ ಆಡಲಿದ್ದಾರೆ ಎಂದು ಎಬಿಡಿ ತಿಳಿಸಿದ್ದಾರೆ.

5 / 7
ಇನ್ನು ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು ಉತ್ತಮ ಫಾರ್ಮ್​ನಲ್ಲಿದೆ. ಈಗಾಗಲೇ ವಿಶ್ವಕಪ್​ನಂತಹ ಮಹತ್ವದ ಟೂರ್ನಿಯನ್ನು ಆಡಿರುವ ಅನುಭವ ಹೊಂದಿರುವ ಆಟಗಾರರೇ ಇಂಗ್ಲೆಂಡ್ ತಂಡದಲ್ಲಿದ್ದಾರೆ. ಹೀಗಾಗಿ ಆಂಗ್ಲರ ತಂಡ ಕೂಡ ಸೆಮಿಫೈನಲ್​ಗೆ ಪ್ರವೇಶಿಸಲಿದೆ ಎಂದು ಎಬಿಡಿ ತಿಳಿಸಿದ್ದಾರೆ.

6 / 7
ಹಾಗೆಯೇ ಸೌತ್ ಆಫ್ರಿಕಾ ತಂಡದಲ್ಲಿ ಉತ್ತಮ ಆಟಗಾರರಿದ್ದು, ಅವರಲ್ಲಿ ಬಹುತೇಕರು ಭಾರತದಲ್ಲಿ ಆಡಿದ ಅನುಭವ ಹೊಂದಿದ್ದಾರೆ. ಹೀಗಾಗಿ ಈ ಸೆಮಿಫೈನಲ್​ನಲ್ಲಿ ಸೌತ್ ಆಫ್ರಿಕಾ ತಂಡವನ್ನು ಕೂಡ ಎದುರು ನೋಡಬಹುದು ಎಂದು ಡಿವಿಲಿಯರ್ಸ್ ತಿಳಿಸಿದ್ದಾರೆ.

7 / 7
Follow us
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​

ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ

ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ

ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್

ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ

ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ

ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು

ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ

ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ

ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ