AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

25 ಸಿಕ್ಸ್, 47 ಫೋರ್​… WCL ನಲ್ಲಿ ಸಿಡಿದ ಸಿಡಿಲಮರಿ ಎಬಿಡಿ

World Championship of Legends 2025: ವರ್ಲ್ಡ್​ ಚಾಂಪಿಯನ್​ಶಿಪ್ ಆಫ್ ಲೆಜೆಂಡ್ಸ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ಚಾಂಪಿಯನ್ಸ್ ತಂಡವು 20 ಓವರ್​ಗಳಲ್ಲಿ 195 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ಚಾಂಪಿಯನ್ಸ್ ಪರ ಎಬಿ ಡಿವಿಲಿಯರ್ಸ್ ಸ್ಫೋಟಕ ಸೆಂಚುರಿ ಸಿಡಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ಸೌತ್ ಆಫ್ರಿಕಾ ತಂಡವು 16.5 ಓವರ್​ಗಳಲ್ಲಿ 197 ರನ್​ಗಳಿಸಿ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Aug 04, 2025 | 7:56 AM

Share
ವರ್ಲ್ಡ್​ ಚಾಂಪಿಯನ್​​ಶಿಪ್ ಆಫ್ ಲೆಜೆಂಡ್ಸ್ ಟೂರ್ನಿಯಲ್ಲಿ ಸೌತ್ ಆಫ್ರಿಕಾ ಚಾಂಪಿಯನ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ಹಿಂದಿರುವ ರೂವಾರಿ ನಾಯಕ ಎಬಿ ಡಿವಿಲಿಯರ್ಸ್. ಏಕೆಂದರೆ ಈ ಬಾರಿಯ ಟೂರ್ನಿಯಲ್ಲಿ 6 ಇನಿಂಗ್ಸ್​ಗಳಿಂದ ಎಬಿಡಿ ಕಲೆಹಾಕಿರುವುದು ಬರೋಬ್ಬರಿ 429 ರನ್​ಗಳು ಎಂದರೆ ನಂಬಲೇಬೇಕು.

1 / 5
ಈ 429 ರನ್​ಗಳಲ್ಲಿ ಎಬಿಡಿ ಬ್ಯಾಟ್​ನಿಂದ ಮೂರು ಭರ್ಜರಿ ಶತಕಗಳು ಮೂಡಿಬಂದಿವೆ. ಇಂಗ್ಲೆಂಡ್ ಚಾಂಪಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 41 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದ ಡಿವಿಲಿಯರ್ಸ್ ಆ ಬಳಿಕ ಆಸ್ಟ್ರೇಲಿಯಾ ಚಾಂಪಿಯನ್ಸ್ ವಿರುದ್ಧ 39 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಇನ್ನು ನಿರ್ಣಾಯಕವಾಗಿದ್ದ ಪಾಕಿಸ್ತಾನ್ ಚಾಂಪಿಯನ್ಸ್​ ವಿರುದ್ಧದ ಫೈನಲ್ ಪಂದ್ಯದಲ್ಲೂ ಎಬಿಡಿ ಅಬ್ಬರಿಸಿದ್ದಾರೆ.

2 / 5
ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆದ ಫೈನಲ್ ಮ್ಯಾಚ್​ನಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಎಬಿ ಡಿವಿಲಿಯರ್ಸ್ 60 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಸಿಕ್ಸರ್ ಹಾಗೂ 12 ಫೋರ್​ಗಳೊಂದಿಗೆ ಅಜೇಯ 120 ರನ್ ಚಚ್ಚಿದರು. ಈ ಮೂಲಕ ಸೌತ್ ಆಫ್ರಿಕಾ ತಂಡಕ್ಕೆ 9 ವಿಕೆಟ್​ಗಳ ಭರ್ಜರಿ ಜಯ ತಂದು ಕೊಟ್ಟರು.

3 / 5
ಈ ಭರ್ಜರಿ ಸೆಂಚುರಿಯೊಂದಿಗೆ ಈ ಬಾರಿಯ ವರ್ಲ್ಡ್ ಚಾಂಪಿಯನ್​ಶಿಪ್ ಆಫ್ ಲೆಜೆಂಡ್ಸ್ ಟೂರ್ನಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸಹ ಎಬಿಡಿ ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ 6 ಇನಿಂಗ್ಸ್​ನಲ್ಲಿ ಬರೋಬ್ಬರಿ 429 ರನ್​ ಕಲೆಹಾಕುವ ಮೂಲಕ. ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ ಎಬಿಡಿಯನ್ನು ಹೊರತುಪಡಿಸಿ ಯಾವುದೇ ಬ್ಯಾಟರ್ 300 ರನ್​ಗಳಿಸಿಲ್ಲ ಎಂಬುದು.

4 / 5
ಅಂದರೆ ಎಬಿ ಡಿವಿಲಿಯರ್ಸ್ ಮಾತ್ರ ಈ ಬಾರಿ 400+ ರನ್​ಗಳಿಸಿದ್ದಾರೆ. 6 ಇನಿಂಗ್ಸ್​ಗಳಲ್ಲಿ 3 ಶತಕ ಹಾಗೂ 1 ಅರ್ಧಶತಕದೊಂದಿಗೆ ಒಟ್ಟು 429 ರನ್​ ಕಲೆಹಾಕಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಈ 429 ರನ್​ಗಳಲ್ಲಿ ಎಬಿಡಿ ಬ್ಯಾಟ್​ನಿಂದ ಸಿಡಿದಿರುವುದು ಬರೋಬ್ಬರಿ 47 ಫೋರ್ ಹಾಗೂ 25 ಸಿಕ್ಸ್​ಗಳು. ಅಂದರೆ ಸಿಕ್ಸ್ - ಫೋರ್​ಗಳ ಮೂಲಕವೇ ಸಿಡಿಲಬ್ಬರದ ಸಿಡಿಲಮರಿ ಎಬಿಡಿ ಈ ಬಾರಿ ಕಲೆಹಾಕಿದ್ದು ಬರೋಬ್ಬರಿ 338 ರನ್​ ಎಂದರೆ ನಂಬಲೇಬೇಕು.

5 / 5
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ

ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌

ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?

ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ

ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?

ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ

ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ

Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!