ಡಕ್ಮ್ಯಾನ್: ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಕಳಪೆ ದಾಖಲೆ ಬರೆದ ಪಾಕ್ ದಾಂಡಿಗ
South Africa vs Pakistan: ಸೌತ್ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನು ಪಾಕಿಸ್ತಾನ್ ತಂಡ 3-0 ಅಂತರದಿಂದ ಗೆದ್ದುಕೊಂಡಿದೆ. ಈ ಗೆಲುವಿನಲ್ಲಿ ಪಾಕ್ ಆಟಗಾರ ಅಬ್ದುಲ್ಲಾ ಶಫೀಕ್ ಅವರ ಕೊಡುಗೆ ಶೂನ್ಯ ಎಂಬುದು ವಿಶೇಷ. ಅಂದರೆ ಮೂರು ಪಂದ್ಯಗಳಲ್ಲೂ ಅಬ್ದುಲ್ಲಾ ಸೊನ್ನೆ ಸುತ್ತುವ ಮೂಲಕ ಕಳಪೆ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.
1 / 5
ಸೌತ್ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಕಿಸ್ತಾನ್ ತಂಡದ ದಾಂಡಿಗ ಅಬ್ದುಲ್ಲಾ ಶಫೀಕ್ ಅನಗತ್ಯ ದಾಖಲೆಯೊಂದನ್ನು ಬರೆದಿದ್ದಾರೆ. ಅದು ಕೂಡ 53 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಯಾರು ಮಾಡದ ಕಳಪೆ ದಾಖಲೆ ಬರೆಯುವ ಮೂಲಕ ಎಂಬುದು ವಿಶೇಷ.
2 / 5
ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದ ಅಬ್ದುಲ್ಲಾ ಶಫೀಕ್, ದ್ವಿತೀಯ ಪಂದ್ಯದಲ್ಲೂ ಝೀರೋಗೆ ವಿಕೆಟ್ ಒಪ್ಪಿಸಿದ್ದರು. ಇನ್ನು ಜೋಹಾನ್ಸ್ಬರ್ಗ್ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಕಗಿಸೊ ರಬಾಡ ಎಸೆತದಲ್ಲಿ ಶೂನ್ಯಕ್ಕೆ ಔಟಾಗಿದ್ದಾರೆ.
3 / 5
ಈ ಮೂರು ಸೊನ್ನೆಗಳೊಂದಿಗೆ ಏಕದಿನ ಸರಣಿಯ ಮೂರು ಪಂದ್ಯಗಳಲ್ಲೂ ಸೊನ್ನೆ ಸುತ್ತಿದ ವಿಶ್ವದ ಮೊದಲ ಬ್ಯಾಟರ್ ಎಂಬ ಅನಗತ್ಯ ದಾಖಲೆಯೊಂದು ಅಬ್ದುಲ್ಲಾ ಶಫೀಕ್ ಪಾಲಾಯಿತು. ಈ ಮೂಲಕ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಕೆಟ್ಟ ದಾಖಲೆಯನ್ನು ಪಾಕ್ ದಾಂಡಿಗ ತನ್ನದಾಗಿಸಿಕೊಂಡರು.
4 / 5
ಕುತೂಹಲಕಾರಿ ವಿಷಯ ಎಂದರೆ ಟಿ20 ಕ್ರಿಕೆಟ್ನಲ್ಲಿ ಸತತವಾಗಿ ಅತ್ಯಧಿಕ ಬಾರಿ ಸೊನ್ನೆಗೆ ಔಟಾದ ಬ್ಯಾಟರ್ ಎಂಬ ಕಳಪೆ ದಾಖಲೆ ಕೂಡ ಅಬ್ದುಲ್ಲಾ ಶಫೀಕ್ ಹೆಸರಿನಲ್ಲಿದೆ. 2023 ರಲ್ಲಿ ಸತತವಾಗಿ 4 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಈ ಬೇಡದ ದಾಖಲೆ ಬರೆದಿದ್ದರು.
5 / 5
ಈ ಕಳಪೆ ದಾಖಲೆಯೊಂದಿಗೆ ಇದೀಗ ಏಕದಿನ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ಶೂನ್ಯಕ್ಕೆ ಔಟಾದ ವಿಶ್ವದ ಮೊದಲ ಬ್ಯಾಟರ್ ಎಂಬ ಅಪಖ್ಯಾತಿಯನ್ನು ಅಬ್ದುಲ್ಲಾ ಶಫೀಕ್ ತಮ್ಮದಾಗಿಸಿಕೊಂಡಿದ್ದಾರೆ. ಹೀಗಾಗಿಯೇ ಇದೀಗ ಪಾಕ್ ಆಟಗಾರನನ್ನು ಡಕ್ಮ್ಯಾನ್ ಎಂದು ಟ್ರೋಲ್ ಮಾಡಲಾಗುತ್ತಿದೆ.